Advertisement
ವೆದರ್ ಮಿರರ್

ಹವಾಮಾನ ವರದಿ | 30-09-2026 | ಅರಬ್ಬಿ ಸಮುದ್ರದ ಗಾಳಿ ದುರ್ಬಲ… ಕರ್ನಾಟಕದ ಮಳೆಯ ಸ್ವರೂಪ ಬದಲಾಗುತ್ತಾ?

Share

ಕರ್ನಾಟಕದಲ್ಲಿ ಮಳೆಯ ವಾತಾವರಣದ ಸ್ವರೂಪದಲ್ಲಿ ಬದಲಾವಣೆಯಾಗುವ ಲಕ್ಷಣಗಳು ಕಾಣಿಸುತ್ತಿವೆ. ಅಕ್ಟೋಬರ್ 1 ರಿಂದ ಅರಬ್ಬಿ ಸಮುದ್ರದ ಕಡೆಯಿಂದ ಬೀಸುತ್ತಿರುವ ಗಾಳಿ ದುರ್ಬಲಗೊಳ್ಳುವ ಸಾಧ್ಯತೆ ಇದ್ದು, ಕರಾವಳಿ ಹಾಗೂ ಮಲೆನಾಡಿನಲ್ಲಿ ಪೂರ್ವದ ಕಡೆಯಿಂದ ಬರುವ ಮೋಡಗಳಿಂದ ಮಳೆಯಾಗುವ ಸಾಧ್ಯತೆ ಇದೆ. ಇದೇ ವೇಳೆ ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಸಂಜೆ ಮತ್ತು ರಾತ್ರಿ ವೇಳೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.

ಕರಾವಳಿ: ಪೂರ್ವದ ಮೋಡಗಳಿಂದ ಮಳೆಯ ಸಾಧ್ಯತೆ :  ಕಾಸರಗೋಡು ಸೇರಿದಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡ ಕವಿದ ವಾತಾವರಣ ಇರಲಿದೆ. ಉತ್ತರ ಕನ್ನಡ ಜಿಲ್ಲೆಯ ಒಂದೆರಡು ಕಡೆಗಳಲ್ಲಿ ತುಂತುರು ಮಳೆಯಾಗುವ ಸಾಧ್ಯತೆ ಇದೆ.

ಈಗಿನ ಮುನ್ಸೂಚನೆಯಂತೆ ಅಕ್ಟೋಬರ್ 1ರಿಂದ ಅರಬ್ಬಿ ಸಮುದ್ರದ ಕಡೆಯಿಂದ ಬೀಸುವ ಗಾಳಿ ದುರ್ಬಲಗೊಳ್ಳುವ ಸಾಧ್ಯತೆ ಇದೆ. ಇದರಿಂದ ಕರಾವಳಿ ಭಾಗದಲ್ಲಿ ಇದುವರೆಗೆ ಮಳೆಯ ಮೇಲೆ ಪ್ರಭಾವ ಬೀರುತ್ತಿದ್ದ ಗಾಳಿಯ ಪರಿಸ್ಥಿತಿ ಬದಲಾಗಲಿದ್ದು, ಪೂರ್ವದ ಕಡೆಯಿಂದ ಬರುವ ಮೋಡಗಳಿಂದ ಮಳೆ ಆರಂಭವಾಗುವ ಲಕ್ಷಣಗಳು ಕಾಣಿಸುತ್ತಿವೆ.

ಮಲೆನಾಡು: ಸಂಜೆ–ರಾತ್ರಿ ಗುಡುಗು ಸಹಿತ ಮಳೆ :  ಮಲೆನಾಡಿನ ಜಿಲ್ಲೆಗಳಲ್ಲೂ ಅರಬ್ಬಿ ಸಮುದ್ರದ ಗಾಳಿಯ ಪ್ರಭಾವದಿಂದ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು. ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಒಳನಾಡಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಸಂಜೆ ಹಾಗೂ ರಾತ್ರಿ ವೇಳೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

ಅಕ್ಟೋಬರ್ 1ರಿಂದ ಅರಬ್ಬಿ ಸಮುದ್ರದ ಗಾಳಿ ದುರ್ಬಲಗೊಳ್ಳುವ ಸಾಧ್ಯತೆ ಇರುವುದರಿಂದ ಮಲೆನಾಡಿನ ಹೆಚ್ಚಿನ ಭಾಗಗಳಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ಸಾಧ್ಯತೆ ಇದೆ.

ಉತ್ತರ ಒಳನಾಡು: ಕೆಲ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ :  ಬೆಳಗಾವಿ, ಧಾರವಾಡ, ಹಾವೇರಿ, ಗದಗ ಹಾಗೂ ಬಳ್ಳಾರಿ ಜಿಲ್ಲೆಗಳ ಅಲ್ಲಲ್ಲಿ ಮಧ್ಯಾಹ್ನದ ನಂತರ, ಸಂಜೆ ಮತ್ತು ರಾತ್ರಿ ವೇಳೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಬಳ್ಳಾರಿ ಜಿಲ್ಲೆಯಲ್ಲಿ ಈಗಾಗಲೇ ಕೆಲವು ಭಾಗಗಳಲ್ಲಿ ಮಳೆ ಆರಂಭವಾಗಿದೆ.

ಉಳಿದ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಬಿಸಿಲಿನ ನಡುವೆ ಅಲ್ಲಲ್ಲಿ ಮೋಡ ಕವಿದ ವಾತಾವರಣ ಇರಬಹುದು. ಆದರೆ ಈಗಿನ ಮುನ್ಸೂಚನೆಯಂತೆ ದಿನ ಕಳೆದಂತೆ ಉತ್ತರ ಒಳನಾಡಿನಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿವೆ.

ದಕ್ಷಿಣ ಒಳನಾಡು: ಸಂಜೆ–ರಾತ್ರಿ ಮಳೆಯ ಸಾಧ್ಯತೆ :  ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಸಂಜೆ ಹಾಗೂ ರಾತ್ರಿ ವೇಳೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.  ಆದರೆ ಅಕ್ಟೋಬರ್ 2ರಿಂದ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳು ಗೋಚರಿಸುತ್ತಿವೆ.

ಮಳೆಯ ಸ್ವರೂಪದಲ್ಲಿ ಬದಲಾವಣೆಯ ಸಾಧ್ಯತೆ : ಪ್ರಸ್ತುತ ರಾಜ್ಯದ ಮಳೆಯ ಮೇಲೆ ಅರಬ್ಬಿ ಸಮುದ್ರದ ಗಾಳಿಯ ಪ್ರಭಾವವಿದ್ದರೂ, ಅಕ್ಟೋಬರ್ 1 ರಿಂದ ಈ ಗಾಳಿ ದುರ್ಬಲಗೊಳ್ಳುವ ಸಾಧ್ಯತೆ ಇದೆ. ಇದರೊಂದಿಗೆ ಪೂರ್ವದ ಕಡೆಯಿಂದ ಮೋಡಗಳ ಚಲನೆ ಹೆಚ್ಚಾದರೆ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆಯ ಸ್ವರೂಪ ಬದಲಾಗಬಹುದು.

ಹೀಗಾಗಿ ಮುಂದಿನ ದಿನಗಳಲ್ಲಿ ಕರಾವಳಿ ಮತ್ತು ಮಲೆನಾಡಿನಲ್ಲಿ ಪೂರ್ವದ ಮೋಡಗಳಿಂದ ಮಳೆಯ ಚಟುವಟಿಕೆ ಹೆಚ್ಚಾಗುತ್ತದೆಯೇ ಎಂಬುದನ್ನು ಗಮನಿಸಬೇಕಾಗಿದೆ. ಉತ್ತರ ಒಳನಾಡಿನಲ್ಲಿ ಮಳೆ ಕ್ರಮೇಣ ಇಳಿಕೆಯಾಗುವ ಸಾಧ್ಯತೆ ಇದ್ದರೆ, ದಕ್ಷಿಣ ಒಳನಾಡಿನಲ್ಲೂ ಅಕ್ಟೋಬರ್ 2ರಿಂದ ಮಳೆ ಕಡಿಮೆಯಾಗುವ ಲಕ್ಷಣಗಳಿವೆ.

Karnataka is likely to see a change in its rainfall pattern from October 1 as winds from the Arabian Sea weaken. Coastal Karnataka may remain mostly sunny with partly cloudy conditions, with isolated drizzle possible in parts of Uttara Kannada. As the Arabian Sea winds weaken, eastern cloud systems may begin contributing to rainfall along the coast. In Malnad, parts of Hassan, Chikkamagaluru and Shivamogga may receive evening and night thunderstorms, while rainfall could increase across wider parts of the region. Parts of North Interior Karnataka may receive thunderstorms, although rainfall is expected to gradually decline with time. South Interior Karnataka may also receive evening and night thunderstorms, but rainfall is likely to decrease from October 2.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಹಿಂಗಾರು ಬೆಳೆಗಳಿಗೆ ಕೇಂದ್ರದಿಂದ ಬೆಂಬಲ ಬೆಲೆ ಹೆಚ್ಚಳ

ರಬಿ(ಹಿಂಗಾರು) ಬೆಳೆಗಳಿಗೆ ಕೇಂದ್ರ ಸರ್ಕಾರ MSP ಹೆಚ್ಚಿಸಿದೆ. ಗೋಧಿ MSP ₹2,610ಕ್ಕೆ, ಕಡಲೆ…

1 minute ago

ಪಶ್ಚಿಮ ಘಟ್ಟದ ಪರಿಸರ ಸೂಕ್ಷ್ಮ ಪ್ರದೇಶ ವ್ಯಾಪ್ತಿಯ ಭಯದಲ್ಲಿ ಕೇರಳದ ರಬ್ಬರ್ ರೈತರು – ತೋಟಗಾರಿಕೆಗೆ ಮುಂದೆ ಏನು?

ಪಶ್ಚಿಮ ಘಟ್ಟದ ESA ಪ್ರಸ್ತಾವನೆ ಮತ್ತೆ ಕೇರಳದ ರಬ್ಬರ್ ಹಾಗೂ ಇತರ ತೋಟಗಾರಿಕಾ…

13 hours ago

ಫ್ಲೈಓವರ್ ಬಳಿಕ ಕಲ್ಲಡ್ಕದಲ್ಲಿ ಏನು ಬದಲಾವಣೆಯಾಗಿದೆ..?

ಕಲ್ಲಡ್ಕದ 2.1 ಕಿ.ಮೀ. ಉದ್ದದ ಫ್ಲೈಓವರ್ ಸಂಚಾರಕ್ಕೆ ಮುಕ್ತವಾದ ಬಳಿಕ ಪೇಟೆಯೊಳಗಿನ ವಾಹನ…

22 hours ago

ಹಲಸಿನಂತೆಯೇ ಕಾಣುವ ಈ ಹಣ್ಣು ನಿಮಗೆ ಗೊತ್ತೇ?

ಹಲಸಿನ ಹಣ್ಣಿನಂತೆ ಕಾಣುವ ಚೆಂಪೆಡಕ್ ಹಣ್ಣು ರುಚಿ ಮತ್ತು ಸುವಾಸನೆಯ ಜತೆಗೆ ವಿಟಮಿನ್‌…

22 hours ago

ಏಷ್ಯನ್ ಗೇಮ್ಸ್‌ನಲ್ಲಿ ಭಾರತದ ಮಹಿಳೆಯರ ಓಟಕ್ಕೆ ಚಿನ್ನದ ಹೊಳಪು – 4×400 ಮೀ. ರಿಲೇಯಲ್ಲಿ ಭರ್ಜರಿ ಗೆಲುವು

ಏಷ್ಯನ್ ಗೇಮ್ಸ್‌ನಲ್ಲಿ ಮಹಿಳೆಯರ 4×400 ಮೀಟರ್ ರಿಲೇಯಲ್ಲಿ ಭಾರತ 3:29.69 ಸಮಯದೊಂದಿಗೆ ಚಿನ್ನ…

23 hours ago

ಕಾಳುಮೆಣಸು ಮಾರುಕಟ್ಟೆಯಲ್ಲಿ ಏನಾಗುತ್ತಿದೆ?

ಆಗಮನ ಕಡಿಮೆಯಾಗಿದ್ದರೂ ದೇಶದ ಕಾಳುಮೆಣಸು ಬೆಲೆಯಲ್ಲಿ ಇಳಿಕೆ ಕಂಡುಬಂದಿದ್ದು, ದಾಸ್ತಾನು ಮತ್ತು ಬೇಡಿಕೆ…

1 day ago