Advertisement
ಹವಾಮಾನ

ಹವಾಮಾನ ವರದಿ | 19-10-2026 | ಬಂಗಾಳಕೊಲ್ಲಿಯಲ್ಲಿ ಚಂಡಮಾರುತದ ಲಕ್ಷಣ

Share

ಕರ್ನಾಟಕದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಅಕ್ಟೋಬರ್ 25ರವರೆಗೆ ಮಳೆ ಮುಂದುವರಿಯುವ ಸಾಧ್ಯತೆಗಳಿವೆ. ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿಯೂ ಸಂಜೆ ಹಾಗೂ ರಾತ್ರಿ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ ಇದ್ದು, ಉತ್ತರ ಒಳನಾಡಿನಲ್ಲಿ ಮಳೆಯ ಸಾಧ್ಯತೆಗಳು ಕಡಿಮೆಯಾಗುತ್ತಿವೆ. ಇದೇ ವೇಳೆ ಬಂಗಾಳಕೊಲ್ಲಿಯ ಅಂಡಮಾನ್ ಪೂರ್ವ ಕರಾವಳಿಯಲ್ಲಿ ವಾಯುಭಾರ ಕುಸಿತ ಉಂಟಾಗಿ, ಅದು ಪ್ರಬಲ ಚಂಡಮಾರುತವಾಗಿ ಬೆಳೆಯುವ ಸಾಧ್ಯತೆಗಳಿರುವುದರಿಂದ ಮುಂದಿನ ದಿನಗಳ ಹವಾಮಾನದಲ್ಲಿ ಬದಲಾವಣೆಯಾಗಬಹುದು.

ಕರಾವಳಿ ಕರ್ನಾಟಕ: ಸಂಜೆ ಗುಡುಗು ಸಹಿತ ಮಳೆ :  ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಮಧ್ಯಾಹ್ನದ ನಂತರ ಮತ್ತು ಸಂಜೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಈಗಿನ ಮುನ್ಸೂಚನೆಯಂತೆ ಕರಾವಳಿ ಜಿಲ್ಲೆಗಳಲ್ಲಿ ಅಕ್ಟೋಬರ್ 25ರವರೆಗೆ ಮಳೆ ಮುಂದುವರಿಯಬಹುದು.

ಮಲೆನಾಡು: ಕೊಡಗು, ಚಿಕ್ಕಮಗಳೂರು ಭಾಗಗಳಲ್ಲಿ ಮಳೆ : ಕೊಡಗು, ಹಾಸನ ಜಿಲ್ಲೆಯ ಸಕಲೇಶಪುರ ಭಾಗ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಕೆಲವು ಪ್ರದೇಶಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಯಿದೆ. ಮಲೆನಾಡು ಜಿಲ್ಲೆಗಳಲ್ಲಿಯೂ ಅಕ್ಟೋಬರ್ 25ರವರೆಗೆ ಮಳೆ ಮುಂದುವರಿಯುವ ಸಾಧ್ಯತೆಗಳಿವೆ.

ಉತ್ತರ ಒಳನಾಡು: ಮಳೆಯ ಸಾಧ್ಯತೆ ಇಳಿಕೆ : ಉತ್ತರ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡ ಕವಿದ ವಾತಾವರಣ ಇರಬಹುದು. ಸದ್ಯದ ಮುನ್ಸೂಚನೆಯ ಪ್ರಕಾರ ಈ ಭಾಗದಲ್ಲಿ ಮಳೆಯ ಸಾಧ್ಯತೆಗಳು ಕಡಿಮೆಯಾಗುತ್ತಿವೆ.

ದಕ್ಷಿಣ ಒಳನಾಡು: ಸಂಜೆ, ರಾತ್ರಿ ಮಳೆ ಸಾಧ್ಯತೆ :  ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ಬೆಂಗಳೂರು ನಗರ ಜಿಲ್ಲೆಗಳ ಅಲ್ಲಲ್ಲಿ ಸಂಜೆ ಅಥವಾ ರಾತ್ರಿ ಗುಡುಗು ಸಹಿತ ಸಾಮಾನ್ಯ ಮಳೆಯಾಗುವ ಸಾಧ್ಯತೆಯಿದೆ. ಉಳಿದ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು. ದಕ್ಷಿಣ ಒಳನಾಡಿನಲ್ಲಿ ಅಕ್ಟೋಬರ್ 25ರ ನಂತರ ಮಳೆ ಕಡಿಮೆಯಾಗುವ ಸೂಚನೆಗಳಿವೆ.

ಬಂಗಾಳಕೊಲ್ಲಿಯಲ್ಲಿ ಚಂಡಮಾರುತದ ಲಕ್ಷಣ :  ಬಂಗಾಳಕೊಲ್ಲಿಯ ಅಂಡಮಾನ್ ಪೂರ್ವ ಕರಾವಳಿ ಭಾಗದಲ್ಲಿ ಅಕ್ಟೋಬರ್ 22ರಂದು ವಾಯುಭಾರ ಕುಸಿತ ಉಂಟಾಗುವ ಸಾಧ್ಯತೆಗಳಿವೆ. ಈ ವ್ಯವಸ್ಥೆಯು ಅಕ್ಟೋಬರ್ 24ರ ವೇಳೆಗೆ ಪ್ರಬಲ ಚಂಡಮಾರುತವಾಗಿ ಪರಿವರ್ತನೆಯಾಗುವ ಲಕ್ಷಣಗಳಿವೆ ಎಂದು ಮುನ್ಸೂಚನೆ ತಿಳಿಸುತ್ತದೆ.

ಈ ವ್ಯವಸ್ಥೆಯ ಬೆಳವಣಿಗೆಯ ಹಿನ್ನೆಲೆಯಲ್ಲಿ ಅಕ್ಟೋಬರ್ 25ರಿಂದ ಕರ್ನಾಟಕದಲ್ಲಿ ಮಳೆ ಕಡಿಮೆಯಾಗುವ ಸಾಧ್ಯತೆಗಳಿವೆ. ಆದರೆ ಚಂಡಮಾರುತವು ಶಿಥಿಲಗೊಂಡ ನಂತರ ಹಿಂಗಾರು ಮಾರುತಗಳ ಸ್ಥಿತಿ ಹೇಗಿರಲಿದೆ ಎಂಬುದು ಸ್ಪಷ್ಟವಾಗಬೇಕಿದೆ.

ರೈತರು ಗಮನಿಸಬೇಕಾದ ಅಂಶ: ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಇನ್ನೂ ಕೆಲವು ದಿನ ಮಳೆಯ ಸಾಧ್ಯತೆ ಇರುವುದರಿಂದ ಮುನ್ನೆಚ್ಚರಿಕೆ ವಹಿಸುವುದು ಸೂಕ್ತ. ಗುಡುಗು ಸಹಿತ ಮಳೆಯ ಸಂದರ್ಭದಲ್ಲಿ ತೆರೆದ ಪ್ರದೇಶಗಳಲ್ಲಿ ಕೆಲಸ ಮಾಡುವುದನ್ನು ತಪ್ಪಿಸಿ, ಸ್ಥಳೀಯ ಹವಾಮಾನ ಮುನ್ಸೂಚನೆಗಳನ್ನು ಗಮನಿಸಬೇಕು.

Rain is likely to continue across Karnataka’s coastal and Malnad districts until October 25, with isolated evening thunderstorms expected in parts of South Interior Karnataka. Rain chances are decreasing over North Interior Karnataka. A low-pressure system may develop near the eastern Andaman coast of the Bay of Bengal on October 22 and could intensify into a severe cyclonic storm by October 24. This system may influence rainfall patterns across Karnataka from October 25 onward, while the outlook for the northeast monsoon remains uncertain until the system weakens.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 08-11-2026 | ನ.11ರ ಹವಾಮಾನ ಬದಲಾವಣೆಯ ಮೇಲೆ ನಿಗಾ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ಕೆಲವು ಭಾಗಗಳಲ್ಲಿ ಇಂದು ಗುಡುಗು…

5 hours ago

ಹವಾಮಾನ ವರದಿ | 07-11-2026 | ನ.14ರಿಂದ ಮತ್ತೆ ಮಳೆ ? ಅರಬ್ಬಿ ಸಮುದ್ರದಲ್ಲಿ ಹೊಸ ಬೆಳವಣಿಗೆ

ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ನವೆಂಬರ್ 9ರಿಂದ ಒಣಹವೆ, ಬಿಸಿಲು ಹಾಗೂ ರಾತ್ರಿ…

1 day ago

ದೀಪಾವಳಿ ಪಟಾಕಿ ಅವಘಡ: ಮಕ್ಕಳ ಕಣ್ಣು, ಮುಖದ ರಕ್ಷಣೆಗೆ ಪೋಷಕರು ಎಚ್ಚರ ವಹಿಸಿ

ದೀಪಾವಳಿ ಸಂದರ್ಭದಲ್ಲಿ ಪಟಾಕಿ ಸಿಡಿಸುವುದರಿಂದ ಮಕ್ಕಳ ಕಣ್ಣು ಮತ್ತು ಮುಖಕ್ಕೆ ಗಂಭೀರ ಗಾಯಗಳಾಗುವ…

2 days ago

ಸಾಗುವಳಿ ಪತ್ರಕ್ಕಾಗಿ ರೈತರಿಗೆ ಎನ್‌ಒಸಿ – ಜಂಟಿ ಸರ್ವೆ ಬಳಿಕ ಕ್ರಮ, 4 ತಿಂಗಳಲ್ಲಿ ಸರ್ವೆ ಪೂರ್ಣಗೊಳಿಸುವ ಭರವಸೆ

ಸಾಗುವಳಿ ಚೀಟಿ ಪಡೆಯಲು ರೈತರಿಗೆ ಅರಣ್ಯ ಇಲಾಖೆಯಿಂದ ಎನ್‌ಒಸಿ ನೀಡುವ ಕುರಿತು ಜಂಟಿ…

2 days ago

ಪೆಟ್ರೋಲ್‌ನಲ್ಲಿ ಶೇ.20ಕ್ಕಿಂತ ಹೆಚ್ಚು ಎಥೆನಾಲ್ ಮಿಶ್ರಣ ಪತ್ತೆ

ರಾಜ್ಯದ ವಿವಿಧ ಭಾಗಗಳಿಂದ ಸಂಗ್ರಹಿಸಿದ 63 ಪೆಟ್ರೋಲ್ ಮಾದರಿಗಳ ಪರೀಕ್ಷೆಯಲ್ಲಿ ನಿಗದಿತ ಶೇ.20ಕ್ಕಿಂತ…

2 days ago

ನ್ಯಾನೊ ರಸಗೊಬ್ಬರ ಬಳಕೆಯಿಂದ ಮಣ್ಣು, ಅಂತರ್ಜಲ ರಕ್ಷಣೆ

ಸಾಂಪ್ರದಾಯಿಕ ರಸಗೊಬ್ಬರಗಳ ಅಸಮರ್ಪಕ ಬಳಕೆಯಿಂದ ಮಣ್ಣಿನ ಫಲವತ್ತತೆ ಮತ್ತು ಅಂತರ್ಜಲದ ಗುಣಮಟ್ಟದ ಮೇಲೆ…

3 days ago