ಹವಾಮಾನ ವರದಿ | 3-10-2026 | ಬಂಗಾಳಕೊಲ್ಲಿಯಿಂದ ತೇವಾಂಶದ ಗಾಳಿ – ಕರ್ನಾಟಕದಲ್ಲಿ ಮತ್ತೆ ಮಳೆ?

October 3, 2026
3:19 PM
ಬಂಗಾಳಕೊಲ್ಲಿಯಿಂದ ತಮಿಳುನಾಡು ಮೂಲಕ ತೇವಾಂಶದ ಗಾಳಿ ರಾಜ್ಯದ ದಕ್ಷಿಣ ಒಳನಾಡಿನತ್ತ ಬೀಸುವ ಸಾಧ್ಯತೆಯಿಂದ ಅ.4ರಿಂದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಚುರುಕಾಗುವ ಲಕ್ಷಣಗಳಿವೆ. ಕರಾವಳಿ–ಮಲೆನಾಡಿನಲ್ಲಿ ಅಲ್ಲಲ್ಲಿ ಮಳೆಯ ಸಾಧ್ಯತೆ ಮುಂದುವರಿದಿದ್ದರೂ, ಉತ್ತರ ಒಳನಾಡಿನಲ್ಲಿ ಸದ್ಯ ಶುಷ್ಕ ಗಾಳಿಯ ಪ್ರಭಾವದಿಂದ ಮಳೆಯ ಸಾಧ್ಯತೆ ಕಡಿಮೆಯಾಗಿದೆ.

ಕರ್ನಾಟಕದಲ್ಲಿ ಹವಾಮಾನ ಪರಿಸ್ಥಿತಿ ಮತ್ತೆ ಬದಲಾಗುವ ಲಕ್ಷಣಗಳು ಕಾಣಿಸುತ್ತಿವೆ. ಬಂಗಾಳಕೊಲ್ಲಿಯ ಕಡೆಯಿಂದ ತಮಿಳುನಾಡು ಮೂಲಕ ಉತ್ತಮ ತೇವಾಂಶ ಹೊಂದಿರುವ ಗಾಳಿ ಮುಂದಿನ ಮೂರು–ನಾಲ್ಕು ದಿನಗಳ ಕಾಲ ರಾಜ್ಯದ ದಕ್ಷಿಣ ಒಳನಾಡಿನತ್ತ ಬೀಸುವ ಸಾಧ್ಯತೆ ಇದೆ. ಇದರ ಪರಿಣಾಮ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಚಟುವಟಿಕೆ ಹೆಚ್ಚಾಗುವ ನಿರೀಕ್ಷೆ ಇದೆ.

ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲೂ ಮಳೆಯ ಸಾಧ್ಯತೆ ಮುಂದುವರಿದಿದ್ದರೂ, ಸಂಜೆ ನಂತರ ಅರಬ್ಬಿ ಸಮುದ್ರದ ಗಾಳಿ ಬಲಗೊಳ್ಳುವ ಸಾಧ್ಯತೆಯಿಂದ ಕರಾವಳಿಯಲ್ಲಿ ಮಳೆಯ ಪ್ರಮಾಣದಲ್ಲಿ ವ್ಯತ್ಯಾಸವಾಗಬಹುದು. ಉತ್ತರ ಒಳನಾಡಿನಲ್ಲಿ ಸದ್ಯ ಶುಷ್ಕ ಗಾಳಿಯ ಪ್ರಭಾವದಿಂದ ಮಳೆಯ ಸಾಧ್ಯತೆ ಕಡಿಮೆಯಾಗಿದೆ.

ಕರಾವಳಿ: ಸೆಖೆ–ಮೋಡದ ನಡುವೆ ಮಧ್ಯಾಹ್ನದ ಬಳಿಕ ಮಳೆ :  ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಹೆಚ್ಚಿನ ಸೆಖೆಯ ವಾತಾವರಣದೊಂದಿಗೆ ಬಿಸಿಲು ಮತ್ತು ಅಲ್ಲಲ್ಲಿ ಮೋಡ ಕವಿದ ವಾತಾವರಣ ಇರಲಿದೆ. ಮಧ್ಯಾಹ್ನದ ಬಳಿಕ ಹಾಗೂ ಸಂಜೆ ವೇಳೆ ಅಲ್ಲಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

ಉತ್ತರ ಕನ್ನಡ ಜಿಲ್ಲೆಯಲ್ಲಿ ಸೆಖೆ, ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು. ಭಾರಿ ಸೆಖೆಯ ವಾತಾವರಣದ ನಡುವೆ ಮಳೆಯಾಗುವ ವೇಳೆ ಅತಿ ವೇಗದ ಬಿರುಗಾಳಿ ಬೀಸುವ ಸಾಧ್ಯತೆಯೂ ಇರುವುದರಿಂದ ಎಚ್ಚರಿಕೆ ಅಗತ್ಯ.

ಸಂಜೆಯಾಗುತ್ತಿದ್ದಂತೆ ಅರಬ್ಬಿ ಸಮುದ್ರದ ಕಡೆಯಿಂದ ಬೀಸುವ ಗಾಳಿ ಬಲಗೊಳ್ಳುವ ಸಾಧ್ಯತೆ ಇರುವುದರಿಂದ ಸಂಜೆಯ ನಂತರ ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಸಾಧ್ಯತೆ ಕಡಿಮೆಯಾಗಬಹುದು. ಈಗಿನ ಮುನ್ಸೂಚನೆಯಂತೆ ಕರಾವಳಿ ಜಿಲ್ಲೆಗಳಲ್ಲಿ ಮುಂದಿನ 10 ದಿನಗಳವರೆಗೆ ಅಲ್ಲಲ್ಲಿ ಮಳೆಯ ಸಾಧ್ಯತೆ ಮುಂದುವರಿಯುವ ಲಕ್ಷಣಗಳಿವೆ.

ಮಲೆನಾಡು: ಘಟ್ಟದಂಚಿನ ಪ್ರದೇಶಗಳಲ್ಲಿ ಗುಡುಗು ಸಹಿತ ಮಳೆ :  ಕೊಡಗು, ಹಾಸನದ ಸಕಲೇಶಪುರ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಮಧ್ಯಾಹ್ನದ ನಂತರ ಹಾಗೂ ಸಂಜೆ ವೇಳೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

ಮಲೆನಾಡಿನ ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡ ಕವಿದ ವಾತಾವರಣದೊಂದಿಗೆ ಒಂದೆರಡು ಕಡೆ ತುಂತುರು ಮಳೆಯಾಗಬಹುದು. ಅರಬ್ಬಿ ಸಮುದ್ರದ ಗಾಳಿಯ ಪ್ರಭಾವ ಹೆಚ್ಚಾದರೆ ಮಲೆನಾಡಿನ ಇತರ ಭಾಗಗಳಲ್ಲೂ ಅಲ್ಲಲ್ಲಿ ಸಾಮಾನ್ಯ ಮಳೆಯಾಗುವ ಸಾಧ್ಯತೆ ಇದೆ.

ಉತ್ತರ ಒಳನಾಡು: ಸದ್ಯ ಶುಷ್ಕ ಗಾಳಿಯ ಪ್ರಭಾವ :  ಉತ್ತರ ಭಾರತದ ಕಡೆಯಿಂದ ಬೀಸುತ್ತಿರುವ ಶುಷ್ಕ ಗಾಳಿಯ ಪರಿಣಾಮ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಸದ್ಯ ಮಳೆಯ ಸಾಧ್ಯತೆ ಕಾಣಿಸುತ್ತಿಲ್ಲ.

ಆದರೆ ಅಕ್ಟೋಬರ್ 4ರಿಂದ ಹವಾಮಾನ ಪರಿಸ್ಥಿತಿಯಲ್ಲಿ ಬದಲಾವಣೆಯಾಗುವ ಲಕ್ಷಣಗಳು ಗೋಚರಿಸುತ್ತಿವೆ. ಬಂಗಾಳಕೊಲ್ಲಿಯ ಕಡೆಯಿಂದ ಬೀಸುವ ತೇವಾಂಶದ ಗಾಳಿ ಬಲಗೊಳ್ಳುವ ಸಾಧ್ಯತೆ ಇರುವುದರಿಂದ ಮುಂದಿನ ದಿನಗಳಲ್ಲಿ ಉತ್ತರ ಒಳನಾಡಿನಲ್ಲೂ ಮಳೆಯ ಪರಿಸ್ಥಿತಿ ಬದಲಾಗಬಹುದು.

ದಕ್ಷಿಣ ಒಳನಾಡು: ಮಳೆಯ ಚಟುವಟಿಕೆ ಹೆಚ್ಚಾಗುವ ಸಾಧ್ಯತೆ : ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಇರಲಿದೆ. ಕೋಲಾರ ಹಾಗೂ ತಮಿಳುನಾಡು ಗಡಿ ಭಾಗಗಳಲ್ಲಿ ಸಂಜೆ ಮತ್ತು ರಾತ್ರಿ ವೇಳೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

ಈಗಿನ ಮುನ್ಸೂಚನೆಯಂತೆ ಅಕ್ಟೋಬರ್ 4ರಿಂದ ದಕ್ಷಿಣ ಒಳನಾಡಿನ ಹಲವು ಭಾಗಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆ ಆರಂಭವಾಗುವ ಲಕ್ಷಣಗಳಿವೆ.

ಬಂಗಾಳಕೊಲ್ಲಿಯಿಂದ ತೇವಾಂಶದ ಗಾಳಿ: ದಕ್ಷಿಣ ಒಳನಾಡಿಗೆ ಮಳೆ? : ಬಂಗಾಳಕೊಲ್ಲಿಯ ಕಡೆಯಿಂದ ತಮಿಳುನಾಡು ಮೂಲಕ ಉತ್ತಮ ತೇವಾಂಶ ಹೊಂದಿರುವ ಗಾಳಿಯು ಮುಂದಿನ ಮೂರು–ನಾಲ್ಕು ದಿನಗಳ ಕಾಲ ಕರ್ನಾಟಕದ ದಕ್ಷಿಣ ಒಳನಾಡಿನತ್ತ ಬೀಸುವ ಸಾಧ್ಯತೆ ಇದೆ.

ಈ ತೇವಾಂಶದ ಗಾಳಿಯ ಪರಿಣಾಮ ದಕ್ಷಿಣ ಒಳನಾಡಿನಲ್ಲಿ ಮೋಡಗಳ ಬೆಳವಣಿಗೆ ಹೆಚ್ಚಾಗಿ, ಮಧ್ಯಾಹ್ನದ ನಂತರ ಹಾಗೂ ಸಂಜೆ–ರಾತ್ರಿ ವೇಳೆ ಗುಡುಗು ಸಹಿತ ಉತ್ತಮ ಮಳೆಯ ಸಾಧ್ಯತೆ ಇದೆ.

ಹೀಗಾಗಿ ಸದ್ಯ ಒಣಹವೆಯ ಲಕ್ಷಣ ಕಂಡುಬರುತ್ತಿದ್ದರೂ, ಮುಂದಿನ ಕೆಲವು ದಿನಗಳಲ್ಲಿ ದಕ್ಷಿಣ ಒಳನಾಡಿನ ಹವಾಮಾನದಲ್ಲಿ ಗಮನಾರ್ಹ ಬದಲಾವಣೆಯಾಗುವ ಸಾಧ್ಯತೆ ಇದೆ. ರೈತರು  ಕೃಷಿ ಚಟುವಟಿಕೆಗಳನ್ನು ಸ್ಥಳೀಯ ಮಳೆಯ ಮುನ್ಸೂಚನೆ ಗಮನಿಸಿ ಯೋಜಿಸುವುದು ಸೂಕ್ತ.

Karnataka is likely to see a shift in its weather pattern as moisture-rich winds from the Bay of Bengal move through Tamil Nadu towards South Interior Karnataka over the next three to four days. This may increase the chances of thunderstorms and good rainfall across several parts of South Interior Karnataka, particularly from October 4. Coastal Karnataka may experience hot, partly cloudy conditions with isolated afternoon and evening thunderstorms, although stronger Arabian Sea winds in the evening could reduce rainfall chances later in the day. Malnad areas adjoining the coast may also receive afternoon and evening thunderstorms. North Interior Karnataka remains relatively dry under the influence of dry winds from northern India, but conditions may begin changing as moisture flow from the Bay of Bengal strengthens.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಅಡಿಕೆ ದರ ಇಳಿಯುತ್ತದೆ, ಕೂಲಿ ಏರುತ್ತದೆ ; ಬೆಳೆಗಾರನಿಗೆ ಉಳಿಯುವುದೇನು?
October 4, 2026
6:58 AM
by: ಪ್ರಬಂಧ ಅಂಬುತೀರ್ಥ
ಕಸೂತಿ ಕಲಿತು ಸ್ವಾವಲಂಬನೆಯತ್ತ ಗ್ರಾಮೀಣ ಮಹಿಳೆಯರು
October 4, 2026
6:47 AM
by: ದ ರೂರಲ್ ಮಿರರ್.ಕಾಂ
ಕರ್ನಾಟಕದಲ್ಲಿ ಬರದ ಹೊಡೆತ – ಬೆಳೆ ನಷ್ಟ ₹60 ಸಾವಿರ ಕೋಟಿವರೆಗೆ ಸಾಧ್ಯತೆ
October 4, 2026
6:37 AM
by: ದ ರೂರಲ್ ಮಿರರ್.ಕಾಂ
ದಾಖಲೆಗಳಿಲ್ಲದೆ ಜಾನುವಾರು ಸಾಗಿಸಿದ ಮಾತ್ರಕ್ಕೆ ವಧೆಗಾಗಿ ಸಾಗಿಸಲಾಗುತ್ತಿದೆ ಎಂದು ಊಹಿಸಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್
October 4, 2026
6:31 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror