Advertisement
ಸುದ್ದಿಗಳು

ಹವಾಮಾನ ವರದಿ | 05-10-2026 | ಅರಬ್ಬಿ ಸಮುದ್ರದ ಮೇಲ್ಮೈ ಸುಳಿಗಾಳಿಯಿಂದ ಮಳೆ – ಅ.6 ರ ಬಳಿಕ ಏನಾಗಲಿದೆ?

Share

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಭಾಗಗಳಲ್ಲಿ ಮಳೆಯ ವಾತಾವರಣ ಮುಂದುವರಿದಿದೆ. ಅರಬ್ಬಿ ಸಮುದ್ರದಲ್ಲಿ ಉಡುಪಿ–ದಕ್ಷಿಣ ಕನ್ನಡ ಕರಾವಳಿ ಸಮೀಪ ಹಾಗೂ ಚಿಕ್ಕಮಗಳೂರು–ಶಿವಮೊಗ್ಗ ಜಿಲ್ಲೆಗಳ ಕರಾವಳಿ ಭಾಗಗಳಿಗೆ ಹೊಂದಿಕೊಂಡ ಪ್ರದೇಶಗಳಲ್ಲಿ ಮೇಲ್ಮೈ ಸುಳಿಗಾಳಿ ರೂಪುಗೊಂಡಿರುವುದು ಸದ್ಯದ ಮಳೆಗೆ ಪ್ರಮುಖ ಕಾರಣವಾಗಿದೆ.

Advertisement

ಈ ಮೇಲ್ಮೈ ಸುಳಿಗಾಳಿ ಇಂದು ಅಕ್ಟೋಬರ್ 6 ರ ಮಧ್ಯಾಹ್ನದ ಬಳಿಕ ದುರ್ಬಲಗೊಳ್ಳುವ ಲಕ್ಷಣಗಳಿದ್ದು, ಇದರೊಂದಿಗೆ ರಾಜ್ಯದ ಹಲವು ಭಾಗಗಳಲ್ಲಿ ಮಳೆಯ ಪ್ರಮಾಣವೂ ಕ್ರಮೇಣ ಕಡಿಮೆಯಾಗುವ ಸಾಧ್ಯತೆ ಇದೆ. ಆದರೆ ಇಂದು ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಭಾಗಗಳಲ್ಲಿ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ.

ಕರಾವಳಿ: ಮುಂಜಾನೆಯಿಂದಲೇ ಕೆಲವೆಡೆ ಗುಡುಗು ಸಹಿತ ಮಳೆ : ಕಾಸರಗೋಡು ಸೇರಿದಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣದೊಂದಿಗೆ ಮುಂಜಾನೆಯಿಂದಲೇ ಅಲ್ಲಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

ಕರಾವಳಿ ತೀರ ಪ್ರದೇಶಗಳಲ್ಲಿ ಮಳೆಯ ಪ್ರಮಾಣ ತುಸು ಹೆಚ್ಚಾಗುವ ಸಾಧ್ಯತೆ ಇದ್ದರೆ, ಉಳಿದ ಭಾಗಗಳಲ್ಲಿ ಮಳೆ ಕಡಿಮೆಯಾಗಿರಬಹುದು. ಘಟ್ಟದ ಕೆಳಭಾಗದ ಪ್ರದೇಶಗಳಲ್ಲಿ ತುಂತುರು ಮಳೆಯಾಗುವ ಸಾಧ್ಯತೆ ಇದೆ.  ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆಯ ಪ್ರಮಾಣ ತುಸು ಕಡಿಮೆಯಾಗುವ ಸಾಧ್ಯತೆ ಇದ್ದು, ಸಂಜೆ ವೇಳೆಯಲ್ಲಿ ಮತ್ತೆ ಘಟ್ಟದ ಕೆಳಭಾಗದ ಪ್ರದೇಶಗಳಲ್ಲಿ ಗುಡುಗು ಸಹಿತ ಮಳೆಯಾಗಬಹುದು.

ಈಗಿನ ಮುನ್ಸೂಚನೆಯಂತೆ ಅಕ್ಟೋಬರ್ 11ರಿಂದ ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಸಾಧ್ಯತೆ ಕಡಿಮೆಯಾಗುವ ಲಕ್ಷಣಗಳು ಗೋಚರಿಸುತ್ತಿವೆ.

ಮಲೆನಾಡು: ಚಿಕ್ಕಮಗಳೂರಿನಲ್ಲಿ ಮುಂಜಾನೆಯಿಂದ ಮಳೆ :  ಕೊಡಗು ಜಿಲ್ಲೆಯಲ್ಲಿ ಸಂಜೆ ವೇಳೆ ಅಲ್ಲಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಹಾಸನದ ಸಕಲೇಶಪುರ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲೂ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.

ಚಿಕ್ಕಮಗಳೂರು ಜಿಲ್ಲೆಯಲ್ಲಿ ಮುಂಜಾನೆಯಿಂದಲೇ ಕೆಲವು ಭಾಗಗಳಲ್ಲಿ ಮಳೆಯಾಗುತ್ತಿದೆ. ಆದರೆ ಈಗಿನ ಮುನ್ಸೂಚನೆಯಂತೆ ಅಕ್ಟೋಬರ್ 6ರ ಬಳಿಕ ಮಲೆನಾಡಿನ ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿವೆ.

ಉತ್ತರ ಒಳನಾಡು: ಮಳೆಯ ಸಾಧ್ಯತೆ ಕಡಿಮೆ :  ಬೆಳಗಾವಿ, ಧಾರವಾಡ ಹಾಗೂ ಹಾವೇರಿ ಜಿಲ್ಲೆಗಳ ಉತ್ತರ ಕನ್ನಡಕ್ಕೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ತುಂತುರು ಮಳೆಯಾಗುವ ಸಾಧ್ಯತೆ ಇದೆ.

ಉಳಿದ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಬಿಸಿಲಿನ ನಡುವೆ ಅಲ್ಲಲ್ಲಿ ಮೋಡ ಕವಿದ ವಾತಾವರಣ ಇರಬಹುದು. ಈಗಿನ ಮುನ್ಸೂಚನೆಯಂತೆ ಮುಂದಿನ 10 ದಿನಗಳವರೆಗೆ ಉತ್ತರ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಮಳೆಯ ಸಾಧ್ಯತೆ ಕಡಿಮೆ ಇರಬಹುದು.

ದಕ್ಷಿಣ ಒಳನಾಡು: ಹಲವು ಜಿಲ್ಲೆಗಳಲ್ಲಿ ಸಂಜೆ–ರಾತ್ರಿ ಗುಡುಗು ಮಳೆ :  ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ದಾವಣಗೆರೆ ಹಾಗೂ ವಿಜಯನಗರ ಜಿಲ್ಲೆಗಳ ಅಲ್ಲಲ್ಲಿ ಸಂಜೆ ಮತ್ತು ರಾತ್ರಿ ವೇಳೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

ತುಮಕೂರು ಜಿಲ್ಲೆಯ ಪಾವಗಢದಲ್ಲಿ ಸಾಮಾನ್ಯ ಮಳೆಯಾಗುವ ಸಾಧ್ಯತೆ ಇದೆ. ಚಿತ್ರದುರ್ಗ ಜಿಲ್ಲೆಯ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.

ಈಗಿನ ಮುನ್ಸೂಚನೆಯಂತೆ ಅಕ್ಟೋಬರ್ 6ರವರೆಗೆ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮಳೆಯ ವಾತಾವರಣ ಮುಂದುವರಿಯುವ ಲಕ್ಷಣಗಳಿವೆ.

ಮೇಲ್ಮೈ ಸುಳಿಗಾಳಿಯಿಂದ ಮಳೆ :  ಅರಬ್ಬಿ ಸಮುದ್ರದಲ್ಲಿ ಉಡುಪಿ ಮತ್ತು ದಕ್ಷಿಣ ಕನ್ನಡ ಕರಾವಳಿಯ ಸಮೀಪ ಹಾಗೂ ಚಿಕ್ಕಮಗಳೂರು–ಶಿವಮೊಗ್ಗ ಜಿಲ್ಲೆಗಳ ಕರಾವಳಿ ಭಾಗಗಳಿಗೆ ಹೊಂದಿಕೊಂಡ ಪ್ರದೇಶಗಳಲ್ಲಿ ಮೇಲ್ಮೈ ಸುಳಿಗಾಳಿ ರೂಪುಗೊಂಡಿದೆ.

ಈ ಹವಾಮಾನ ವ್ಯವಸ್ಥೆಯ ಪರಿಣಾಮವಾಗಿ ಕರಾವಳಿ ಮತ್ತು ಮಲೆನಾಡಿನ ಕೆಲವು ಭಾಗಗಳಲ್ಲಿ ಮಳೆಯ ಚಟುವಟಿಕೆ ಹೆಚ್ಚಾಗಿದೆ. ಈ ಮೇಲ್ಮೈ ಸುಳಿಗಾಳಿ ಅಕ್ಟೋಬರ್ 6ರ ಮಧ್ಯಾಹ್ನದ ಬಳಿಕ ಶಿಥಿಲಗೊಳ್ಳುವ ಲಕ್ಷಣಗಳಿವೆ.

ವ್ಯವಸ್ಥೆ ದುರ್ಬಲಗೊಂಡಂತೆ ಮಳೆಯ ಪ್ರಮಾಣವೂ ಕಡಿಮೆಯಾಗುವ ಸಾಧ್ಯತೆ ಇದೆ. ಹೀಗಾಗಿ ಇಂದು ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಭಾಗಗಳಲ್ಲಿ ಮಳೆಯ ಸಾಧ್ಯತೆ ಇದ್ದರೂ, ಮುಂದಿನ ದಿನಗಳಲ್ಲಿ ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆಯ ಚಟುವಟಿಕೆ ಕ್ರಮೇಣ ಇಳಿಕೆಯಾಗುವ ನಿರೀಕ್ಷೆಯಿದೆ.

ರೈತರು ಇಂದು ಹಾಗೂ ಮುಂದಿನ ದಿನಗಳಲ್ಲಿ ಕೃಷಿ ಚಟುವಟಿಕೆಗಳನ್ನು ಕೈಗೊಳ್ಳುವಾಗ ಸ್ಥಳೀಯ ಮಳೆಯ ಮುನ್ಸೂಚನೆಯನ್ನು ಗಮನಿಸುವುದು ಸೂಕ್ತ.

Rainfall continues across parts of coastal Karnataka, Malnad and South Interior Karnataka due to a surface circulation that has developed over the Arabian Sea near the Udupi–Dakshina Kannada coast and adjoining areas of Chikkamagaluru and Shivamogga. Coastal districts may receive thunderstorms from the morning and again in the evening, while parts of Malnad and South Interior Karnataka may also see thunderstorms. Chikkamagaluru is already receiving rain in some areas. The surface circulation is expected to weaken after the afternoon of October 6, which may lead to a gradual decline in rainfall. Coastal Karnataka may see lower rainfall prospects from around October 11, while North Interior Karnataka is expected to remain comparatively dry over the next 10 days.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಅಡಿಕೆ ದರ ಇಳಿಯುತ್ತದೆ, ಕೂಲಿ ಏರುತ್ತದೆ ; ಬೆಳೆಗಾರನಿಗೆ ಉಳಿಯುವುದೇನು?

ಅಡಿಕೆ ದರ ಕುಸಿಯುತ್ತಿರುವ ಸಂದರ್ಭದಲ್ಲಿ ಕೃಷಿ ಕೂಲಿ ದರ ನಿರಂತರವಾಗಿ ಏರುತ್ತಿರುವುದು ಮಲೆನಾಡಿನ…

1 day ago

ಕಸೂತಿ ಕಲಿತು ಸ್ವಾವಲಂಬನೆಯತ್ತ ಗ್ರಾಮೀಣ ಮಹಿಳೆಯರು

ಕೊಪ್ಪಳ ಜಿಲ್ಲೆಯ ಕಿನ್ನಾಳ ಗ್ರಾಮದಲ್ಲಿ ಗ್ರಾಮೀಣ ಮಹಿಳೆಯರಿಗೆ ಒಂದು ತಿಂಗಳ ಉಚಿತ ಮಗ್ಗಂ…

1 day ago

ಕರ್ನಾಟಕದಲ್ಲಿ ಬರದ ಹೊಡೆತ – ಬೆಳೆ ನಷ್ಟ ₹60 ಸಾವಿರ ಕೋಟಿವರೆಗೆ ಸಾಧ್ಯತೆ

ಕರ್ನಾಟಕದ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟ ₹50 ಸಾವಿರ ಕೋಟಿಯಿಂದ ₹60…

1 day ago

ದಾಖಲೆಗಳಿಲ್ಲದೆ ಜಾನುವಾರು ಸಾಗಿಸಿದ ಮಾತ್ರಕ್ಕೆ ವಧೆಗಾಗಿ ಸಾಗಿಸಲಾಗುತ್ತಿದೆ ಎಂದು ಊಹಿಸಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್

ದಾಖಲೆಗಳಿಲ್ಲದೆ ಜಾನುವಾರು ಸಾಗಿಸಿರುವುದನ್ನು ಮಾತ್ರ ಆಧಾರವಾಗಿಟ್ಟುಕೊಂಡು ವಧೆಗಾಗಿ ಸಾಗಿಸಲಾಗುತ್ತಿದೆ ಎಂದು ಊಹಿಸಲು ಸಾಧ್ಯವಿಲ್ಲ…

1 day ago

ಹವಾಮಾನ ವರದಿ | 3-10-2026 | ಬಂಗಾಳಕೊಲ್ಲಿಯಿಂದ ತೇವಾಂಶದ ಗಾಳಿ – ಕರ್ನಾಟಕದಲ್ಲಿ ಮತ್ತೆ ಮಳೆ?

ಬಂಗಾಳಕೊಲ್ಲಿಯಿಂದ ತಮಿಳುನಾಡು ಮೂಲಕ ತೇವಾಂಶದ ಗಾಳಿ ರಾಜ್ಯದ ದಕ್ಷಿಣ ಒಳನಾಡಿನತ್ತ ಬೀಸುವ ಸಾಧ್ಯತೆಯಿಂದ…

2 days ago

ಮಳೆ ಕೈಕೊಟ್ಟಿದೆ… ಜಾನುವಾರುಗಳಿಗೆ ಮೇವು ಎಲ್ಲಿಂದ..?

ಬರದ ಹಿನ್ನೆಲೆಯಲ್ಲಿ ಬಳ್ಳಾರಿ ಜಿಲ್ಲೆಯಲ್ಲಿ ಜಾನುವಾರುಗಳಿಗೆ ಮೇವಿನ ಕೊರತೆ ಎದುರಾಗದಂತೆ ಸರ್ಕಾರ ಉಚಿತವಾಗಿ…

2 days ago