ಹವಾಮಾನ ವರದಿ | 06-05-2026 | ಕರ್ನಾಟಕದಲ್ಲಿ ಬಿಸಿಲಿನ ನಡುವೆ ಮಳೆಯ ಲಕ್ಷಣ – ಮುಂಗಾರು ಪ್ರವೇಶಕ್ಕೆ ತಡವಾಗುವ ಸಾಧ್ಯತೆ?

May 6, 2026
2:57 PM
ಕರ್ನಾಟಕದ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಮೇ 7ರಿಂದ ಮಳೆಯ ಲಕ್ಷಣಗಳು ಕಾಣಿಸುತ್ತಿವೆ. ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ನೀಡಲಾಗಿದೆ.

ರಾಜ್ಯದ ವಿವಿಧ ಭಾಗಗಳಲ್ಲಿ ಬಿಸಿಲಿನ ವಾತಾವರಣ ಮುಂದುವರಿದಿದ್ದರೂ, ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಮುಂದಿನ ಕೆಲ ದಿನಗಳಲ್ಲಿ ಮಳೆಯ ಚಟುವಟಿಕೆ ಹೆಚ್ಚಾಗುವ ಲಕ್ಷಣಗಳು ಕಾಣಿಸುತ್ತಿವೆ. 06.05.2026ರ ಬೆಳಿಗ್ಗೆ 8 ಗಂಟೆಯವರೆಗಿನ ಹವಾಮಾನ ಮುನ್ಸೂಚನೆಯ ಪ್ರಕಾರ, ರಾಜ್ಯದ ಹಲವು ಜಿಲ್ಲೆಗಳಲ್ಲಿ ಸಂಜೆ ಹಾಗೂ ರಾತ್ರಿ ವೇಳೆ ಮೋಡ ಕವಿದ ವಾತಾವರಣ ಮತ್ತು ತುಂತುರು ಮಳೆಯ ಸಾಧ್ಯತೆ ಇದೆ.

ಕರಾವಳಿಯಲ್ಲಿ ತುಂತುರು ಮಳೆ ಸಾಧ್ಯತೆ :  ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಮೋಡ ಮಿಶ್ರಿತ ಬಿಸಿಲಿನ ವಾತಾವರಣ ಕಂಡುಬರಲಿದ್ದು, ಸಂಜೆ ಮತ್ತು ರಾತ್ರಿ ವೇಳೆ ಚಲಿಸುವ ಮೋಡಗಳಿಂದ ಅಲ್ಲಲ್ಲಿ ಸಣ್ಣ ಪ್ರಮಾಣದ ತುಂತುರು ಮಳೆಯ ಸಾಧ್ಯತೆ ಇದೆ. ಘಟ್ಟದ ಕೆಳಭಾಗದ ಪ್ರದೇಶಗಳಲ್ಲಿ ಮಳೆಯ ಪ್ರಮಾಣ ಸ್ವಲ್ಪ ಹೆಚ್ಚಾಗುವ ಸಾಧ್ಯತೆ ಇದೆ.

ಉತ್ತರ ಕನ್ನಡ ಜಿಲ್ಲೆಯಲ್ಲಿ ಬಿಸಿಲಿನ ವಾತಾವರಣ ಮುಂದುವರಿಯಲಿದ್ದು, ಸಂಜೆ ವೇಳೆಗೆ ಕೆಲವೆಡೆ ಮೋಡ ಕವಿದ ವಾತಾವರಣ ನಿರ್ಮಾಣವಾಗಬಹುದು. ಈಗಿನ ಮುನ್ಸೂಚನೆಯಂತೆ ಕರಾವಳಿ ಜಿಲ್ಲೆಗಳಲ್ಲಿ ಮೇ 8ರಂದು ಮಳೆಯ ಚಟುವಟಿಕೆ ಹೆಚ್ಚಾಗುವ ಸಾಧ್ಯತೆಗಳಿವೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

ಮಲೆನಾಡಿನಲ್ಲಿ ಮೇ 7ರಿಂದ ಮಳೆ ಆರಂಭದ ಸೂಚನೆ :  ಕೊಡಗು ಜಿಲ್ಲೆಯ ಒಂದೆರಡು ಕಡೆ ಸಂಜೆ ಸಾಮಾನ್ಯ ಮಳೆಯಾಗುವ ಸಾಧ್ಯತೆ ಇದೆ. ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಹಗಲು ಬಿಸಿಲು ಇದ್ದರೂ, ಸಂಜೆ ಮತ್ತು ರಾತ್ರಿ ವೇಳೆಗೆ ಮೋಡ ಕವಿದ ವಾತಾವರಣ ನಿರ್ಮಾಣವಾಗಲಿದೆ.

ಮಲೆನಾಡು ಭಾಗಗಳಲ್ಲಿ ಮೇ 7ರಿಂದ ಮಳೆಯ ಚಟುವಟಿಕೆ ಆರಂಭವಾಗುವ ಲಕ್ಷಣಗಳು ಕಂಡುಬರುತ್ತಿವೆ.

ಉತ್ತರ ಒಳನಾಡಿನಲ್ಲಿ ಬಿಸಿಲು ಮುಂದುವರಿಕೆ :  ರಾಜ್ಯದ ಉತ್ತರ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಬಿಸಿಲಿನ ವಾತಾವರಣ ಮುಂದುವರಿಯಲಿದ್ದು, ರಾತ್ರಿ ವೇಳೆ ಕೆಲವೆಡೆ ಮೋಡ ಕವಿದ ವಾತಾವರಣ ಕಂಡುಬರಬಹುದು. ಮೇ 7ರಂದು ಕೆಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಮುನ್ಸೂಚನೆ ತಿಳಿಸಿದೆ.

ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ :  ಮೈಸೂರು, ಚಾಮರಾಜನಗರ ಹಾಗೂ ಮಂಡ್ಯ ಜಿಲ್ಲೆಗಳಲ್ಲಿ ಸಂಜೆ ವೇಳೆ ಗುಡುಗು ಸಹಿತ ಮಳೆಯ ಸಾಧ್ಯತೆ ಇದೆ. ಉಳಿದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಸಂಜೆ ಹಾಗೂ ರಾತ್ರಿ ಮೋಡ ಕವಿದ ವಾತಾವರಣ ಕಂಡುಬರಬಹುದು.

ಮುಂಗಾರು ಪ್ರವೇಶಕ್ಕೆ ತಡವಾಗುವ ಸಾಧ್ಯತೆ? ದಕ್ಷಿಣ ಬಂಗಾಳಕೊಲ್ಲಿಯಲ್ಲಿ ಮೇ 9ರ ಸುಮಾರಿಗೆ ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿದ್ದು, ಭೂಮಧ್ಯ ರೇಖೆಗಿಂತ ಕೆಳಗಿನ ಹಿಂದೂ ಮಹಾಸಾಗರದಲ್ಲಿಯೂ ಈಗಾಗಲೇ ವಾಯುಭಾರ ಕುಸಿತ ನಿರ್ಮಾಣವಾಗಿದೆ. ಈ ಎರಡು ವ್ಯವಸ್ಥೆಗಳು ಪಶ್ಚಿಮಾಭಿಮುಖವಾಗಿ ಚಲಿಸಿದರೆ, ಮುಂಗಾರು ನಿರೀಕ್ಷೆಗಿಂತ ತಡವಾಗಿ ಕೇರಳ ಪ್ರವೇಶಿಸುವ ಸಾಧ್ಯತೆ ಇದೆ ಎಂದು ಹವಾಮಾನ ವಲಯದಲ್ಲಿ ಚರ್ಚೆ ನಡೆಯುತ್ತಿದೆ.

ಇದೀಗಾಗಲೇ ಎಲ್ ನಿನೋ ಪರಿಣಾಮದಿಂದ ಈ ಬಾರಿಯ ಮುಂಗಾರು ದುರ್ಬಲವಾಗುವ ಸಾಧ್ಯತೆಗಳ ಕುರಿತು ವರದಿಗಳು ಹೊರಬಿದ್ದಿವೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

Karnataka is expected to witness mixed weather conditions with light rain likely in coastal and Malnad regions from May 7 onwards. Thunderstorms are forecast in parts of South Interior Karnataka. Weather experts also warn that monsoon onset over Kerala could be delayed due to low-pressure systems and El Niño conditions.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

₹2,500 ಕೋಟಿಗೂ ಅಧಿಕ ತೆರಿಗೆ ವಂಚನೆ ಪತ್ತೆ..! ಅಡಿಕೆ ಆಮದು ಜಾಲದ ಹಿಂದೆ ಏನಿತ್ತು?
August 17, 2026
7:29 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 16-08-2026 | ಕರಾವಳಿ–ಮಲೆನಾಡಿನಲ್ಲಿ ಮಳೆ ಕಡಿಮೆ – ಉತ್ತರ ಒಳನಾಡಿನಲ್ಲಿ 19 ರಿಂದ ಮಳೆ ಹೆಚ್ಚಳ ಸಾಧ್ಯತೆ
August 16, 2026
12:00 PM
by: ಸಾಯಿಶೇಖರ್ ಕರಿಕಳ
ಗ್ರಾಮೀಣ ಸಂಪರ್ಕಕ್ಕೆ 15 ಸಾವಿರ ಹೊಸ ಬಸ್‌ಗಳು: ಸಾರಿಗೆ ಸಚಿವ
August 16, 2026
7:30 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 15-08-2026 | ಕರಾವಳಿಯಲ್ಲಿ ಮುಂದಿನ 10 ದಿನವೂ ಮಳೆ ಚದುರಿಕೆ; ಒಳನಾಡಿನಲ್ಲಿ ಆಗಸ್ಟ್ 18–19ರಿಂದ ಮಳೆ ಸಾಧ್ಯತೆ
August 15, 2026
2:07 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror