Advertisement
ವೆದರ್ ಮಿರರ್

ಹವಾಮಾನ ವರದಿ | 25.11.2026 | ಕರ್ನಾಟಕದಲ್ಲಿ ಇನ್ನೂ ಮೂರು ದಿನ ಮಳೆ ಸಾಧ್ಯತೆ : ಕರಾವಳಿ, ಮಲೆನಾಡು, ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ

Share

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮಳೆಯ ವಾತಾವರಣ ಮುಂದುವರಿಯುವ ಮುನ್ಸೂಚನೆ ಇದ್ದು, ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ಕೆಲವು ಭಾಗಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ನ.26ರ ಬೆಳಿಗ್ಗೆ 8 ಗಂಟೆಯವರೆಗಿನ ಹವಾಮಾನ ಮುನ್ಸೂಚನೆಯ ಪ್ರಕಾರ, ಕರಾವಳಿ ಜಿಲ್ಲೆಗಳಲ್ಲಿ ನ. 28ರವರೆಗೆ ಮಳೆ ಮುಂದುವರಿಯುವ ಲಕ್ಷಣಗಳಿವೆ.

ಕರಾವಳಿ ಕರ್ನಾಟಕ : ನವೆಂಬರ್ 28ರವರೆಗೆ ಮಳೆ ಸಾಧ್ಯತೆ

ಕಾಸರಗೋಡು ಸೇರಿದಂತೆ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಹಲವೆಡೆ ಸಂಜೆ ಮತ್ತು ರಾತ್ರಿ ಮಳೆಯಾಗುವ ಸಾಧ್ಯತೆಯಿದೆ. ಕೆಲವು ಪ್ರದೇಶಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಈಗಿನ ಮುನ್ಸೂಚನೆಯಂತೆ ಕರಾವಳಿ ಭಾಗದಲ್ಲಿ ನ. 28ರವರೆಗೆ ಮಳೆಯ ವಾತಾವರಣ ಮುಂದುವರಿಯಬಹುದು.

ಮಲೆನಾಡು : ಗುಡುಗು ಸಹಿತ ಮಳೆಯ ಮುನ್ಸೂಚನೆ

ಕೊಡಗು, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಸಂಜೆ ಮತ್ತು ರಾತ್ರಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಮಲೆನಾಡು ಜಿಲ್ಲೆಗಳಲ್ಲಿ ನ. 27ರವರೆಗೆ ಮಳೆಯ ವಾತಾವರಣ ಮುಂದುವರಿಯುವ ಲಕ್ಷಣಗಳಿವೆ.

ಉತ್ತರ ಒಳನಾಡು : ಮಳೆಯ ಪ್ರಮಾಣ ಕಡಿಮೆಯಾಗುವ ಸಾಧ್ಯತೆ

ಧಾರವಾಡ, ಹಾವೇರಿ ಹಾಗೂ ಬಳ್ಳಾರಿ ಜಿಲ್ಲೆಗಳ ಕೆಲವು ಭಾಗಗಳಲ್ಲಿ ರಾತ್ರಿ ಸಾಮಾನ್ಯ ಮಳೆಯಾಗುವ ಮುನ್ಸೂಚನೆ ಇದೆ. ಉಳಿದ ಜಿಲ್ಲೆಗಳಲ್ಲಿ ಮೋಡದ ವಾತಾವರಣ ಇರಲಿದೆ. ಬೆಳಗಾವಿ, ಗದಗ ಹಾಗೂ ರಾಯಚೂರು ಜಿಲ್ಲೆಗಳ ಒಂದೆರಡು ಕಡೆ ಅನಿರೀಕ್ಷಿತವಾಗಿ ತುಂತುರು ಮಳೆಯಾಗಬಹುದು. ನ. 27ರ ನಂತರ ಉತ್ತರ ಒಳನಾಡಿನಲ್ಲಿ ಒಣ ಹವೆ ಮುಂದುವರಿಯುವ ಸಾಧ್ಯತೆಯಿದೆ.

ದಕ್ಷಿಣ ಒಳನಾಡು : ಹಲವು ಜಿಲ್ಲೆಗಳಲ್ಲಿ ಸಂಜೆ ಮಳೆ

ಹಾಸನ, ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ಬೆಂಗಳೂರು ನಗರ ಜಿಲ್ಲೆಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.

ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ದಾವಣಗೆರೆ ಹಾಗೂ ವಿಜಯನಗರ ಜಿಲ್ಲೆಗಳ ಅಲ್ಲಲ್ಲಿ ಸಂಜೆ ಮತ್ತು ರಾತ್ರಿ ಸಾಮಾನ್ಯ ಮಳೆಯಾಗುವ ಮುನ್ಸೂಚನೆ ಇದೆ. ದಕ್ಷಿಣ ಒಳನಾಡಿನಲ್ಲಿ ನ.27ರವರೆಗೆ ಮಳೆ ಮುಂದುವರಿಯುವ ಲಕ್ಷಣಗಳಿವೆ.

ನವೆಂಬರ್ 29ರಿಂದ ಹವಾಮಾನದಲ್ಲಿ ಹೊಸ ತಿರುವು?

ನ. 29ರಂದು ಮ್ಯಾನ್ಮಾರ್‌ನ ದಕ್ಷಿಣ ತುದಿಯ ಕರಾವಳಿ ಭಾಗದಲ್ಲಿ ವಾಯುಭಾರ ಕುಸಿತಕ್ಕೆ ಪೂರಕವಾದ ವಾಯು ಸುಳಿಯಂತಹ ವ್ಯವಸ್ಥೆ ರೂಪುಗೊಳ್ಳುವ ಸಾಧ್ಯತೆಯಿದೆ. ಈಗಿನ ಮುನ್ಸೂಚನೆಯ ಪ್ರಕಾರ ಈ ವ್ಯವಸ್ಥೆಯು ಮುಂದೆ ವಾಯುಭಾರ ಕುಸಿತವಾಗಿ ಬಲಗೊಂಡು, ಚಂಡಮಾರುತವಾಗುವ ಸಾಧ್ಯತೆಯೂ ಗೋಚರಿಸುತ್ತಿದೆ.

ಈ ವ್ಯವಸ್ಥೆಯ ಮುಂದಿನ ಚಲನೆ ಹಾಗೂ ತೀವ್ರತೆಯನ್ನು ಗಮನಿಸಬೇಕಿದೆ. ಸದ್ಯದ ಮುನ್ಸೂಚನೆ ಆಧರಿಸಿ ಮುಂದಿನ ದಿನಗಳಲ್ಲಿ ಹವಾಮಾನದಲ್ಲಿ ಬದಲಾವಣೆಗಳಾಗುವ ಸಾಧ್ಯತೆಯಿದೆ.

ಸೂಚನೆ: ಚಂಡಮಾರುತದ ಸಾಧ್ಯತೆ ಪ್ರಾಥಮಿಕ ಮುನ್ಸೂಚನೆಯಾಗಿದ್ದು, ಮುಂದಿನ ಹವಾಮಾನ ವರದಿಗಳಲ್ಲಿ ಸ್ಪಷ್ಟತೆ ದೊರೆಯಲಿದೆ.

Rain is likely to continue in Karnataka’s coastal and Malnad regions until November 27–28, with thunderstorms expected in several areas. Southern interior districts may also receive evening showers until November 27. Northern interior Karnataka is likely to turn dry thereafter. A low-pressure circulation may develop near southern Myanmar on November 29, with the possibility of intensifying into a depression and potentially a cyclone.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಸಮಯದ ಒತ್ತಡದಲ್ಲೂ ಗುಕೇಶ್ ಹೋರಾಟ – ಚೆಸ್ ಮೊದಲ ಪಂದ್ಯ ಡ್ರಾ

ವಿಶ್ವ ಚೆಸ್ ಚಾಂಪಿಯನ್‌ಷಿಪ್‌ನ ಮೊದಲ ಪಂದ್ಯದಲ್ಲಿ ಭಾರತದ ಡಿ. ಗುಕೇಶ್ ಮತ್ತು ಉಜ್ಬೇಕಿಸ್ತಾನದ…

4 hours ago

ಕನಿಷ್ಠ ವೇತನಕ್ಕಿಂತ Cost of living ಅಧಿಕ – ದುಡಿಯುವ ಕೈಗಳಿಗೆ ಬದುಕಲು ಸಾಕಾಗದ ವೇತನ..!

ದೇಶದ 37 ನಗರಗಳಲ್ಲಿ ಕನಿಷ್ಠ ವೇತನಕ್ಕಿಂತ ಜೀವನ ವೆಚ್ಚ (cost of living)…

4 hours ago

ಹವಾಮಾನ ವರದಿ | 24-11-2026 | ನ.28 ರವರೆಗೆ ಮಳೆ ಮುಂದುವರಿಯುವ ಸಾಧ್ಯತೆ

ಕರ್ನಾಟಕದ ಕರಾವಳಿ, ಮಲೆನಾಡು ಮತ್ತು ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ…

1 day ago

ರಸಗೊಬ್ಬರ ಖರೀದಿಗೆ ಹೊಸ ಮೊಬೈಲ್ ಆಪ್ : ಡಿ.1 ರಿಂದ ಮಂಡ್ಯ ಜಿಲ್ಲೆಯಲ್ಲಿ ಜಾರಿ

ಮಂಡ್ಯ ಜಿಲ್ಲೆಯಲ್ಲಿ ಡಿಸೆಂಬರ್ 1ರಿಂದ 'ರಸಗೊಬ್ಬರ ಮಾರಾಟ ಚೌಕಟ್ಟು' ಎಂಬ ಹೊಸ ಮೊಬೈಲ್…

1 day ago

ಸಂತೃಪ್ತಿಯೇ ಆನಂದದ‌ ಬದುಕಿನ ಗುಟ್ಟು

ಮನುಷ್ಯನ ಬದುಕಿನಲ್ಲಿ ಆಸೆ ಸಹಜವಾದರೂ ಅದು ಮಿತಿಮೀರಿದಾಗ ದುಃಖ ಮತ್ತು ಅತೃಪ್ತಿಗೆ ಕಾರಣವಾಗುತ್ತದೆ.…

2 days ago

ಸಾರ್ವಜನಿಕ ಸ್ಥಳದಲ್ಲಿ ಧೂಮಪಾನ – ಮಂಗಳೂರಿನಲ್ಲಿ ದಂಡ ವಿಧಿಸಿ ಎಚ್ಚರಿಕೆ

ಮಂಗಳೂರಿನ ಲಾಲ್‌ಬಾಗ್, ಪಂಪ್‌ವೆಲ್ ಸೇರಿದಂತೆ ವಿವಿಧೆಡೆ ಸಾರ್ವಜನಿಕವಾಗಿ ಧೂಮಪಾನ ಮಾಡುತ್ತಿದ್ದವರಿಗೆ ಆರೋಗ್ಯ ಇಲಾಖೆ…

2 days ago