ಹವಾಮಾನ ವರದಿ | 18-02-2026 | ಫೆ.20 ರಂದು ಕರ್ನಾಟಕದಲ್ಲಿ ಮಳೆ ಸಾಧ್ಯತೆ

February 17, 2026
10:29 PM
ಶ್ರೀಲಂಕಾ ಸಮೀಪ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮದಿಂದ ಫೆಬ್ರವರಿ 20ರಿಂದ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ತುಂತುರು ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನಲ್ಲಿ ಮಾತ್ರ ಉಷ್ಣಾಂಶ ಏರಿಕೆಯಾಗುವ ಮುನ್ಸೂಚನೆ ನೀಡಲಾಗಿದೆ.

ರಾಜ್ಯದ ವಿವಿಧ ಭಾಗಗಳಲ್ಲಿ ಮುಂದಿನ ಕೆಲವು ದಿನಗಳಲ್ಲಿ ಮೋಡದ ವಾತಾವರಣದ ಜೊತೆಗೆ ತುಂತುರು ಹಾಗೂ ಸಾಮಾನ್ಯ ಮಳೆಯಾಗುವ ಸಾಧ್ಯತೆ ಇದೆ. ವಿಶೇಷವಾಗಿ ಶ್ರೀಲಂಕಾ ಆಗ್ನೇಯ ಕರಾವಳಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತ ಪಶ್ಚಿಮಾಭಿಮುಖವಾಗಿ ಚಲಿಸುತ್ತಿರುವ ಪರಿಣಾಮದಿಂದ ಕರ್ನಾಟಕದಲ್ಲೂ ಮಳೆಯ ಲಕ್ಷಣಗಳು ಕಾಣಿಸುತ್ತಿವೆ.

ಕರಾವಳಿ ಜಿಲ್ಲೆಗಳಲ್ಲಿ ತೇವಾಂಶ ಹೆಚ್ಚಳ, ಮಳೆ ಸಾಧ್ಯತೆ :  ಕಾಸರಗೋಡು ಸೇರಿದಂತೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಹಲವು ಭಾಗಗಳಲ್ಲಿ ಮೋಡದ ವಾತಾವರಣ ಮುಂದುವರಿಯಲಿದೆ. ಹಗಲಿನ ಉಷ್ಣಾಂಶ ಹಾಗೂ ತೇವಾಂಶ ಸ್ವಲ್ಪ ಮಟ್ಟಿಗೆ ಹೆಚ್ಚಾಗುವ ಸಾಧ್ಯತೆ ಇದೆ. ಫೆಬ್ರವರಿ 20 ರಿಂದ ಈ ಜಿಲ್ಲೆಗಳ ಅಲ್ಲಲ್ಲಿ ಒಂದೆರಡು ಕಡೆ ಸಾಮಾನ್ಯ ಮಳೆಯಾಗುವ ಸಾಧ್ಯತೆ ಇದೆ. ಈಗಾಗಲೇ ಕಡಬ ತಾಲೂಕಿನ ಕೆಲವು ಭಾಗಗಳಲ್ಲಿ ಸಾಮಾನ್ಯ ಮಳೆಯಾಗಿದೆ.

ಮಲೆನಾಡಿನಲ್ಲಿ ತುಂತುರು ಮಳೆ ಮುನ್ಸೂಚನೆ :  ಕೊಡಗು ಜಿಲ್ಲೆಯ ಕೆಲವು ಭಾಗಗಳು ಹಾಗೂ ಹಾಸನ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳ ಹೆಚ್ಚಿನ ಪ್ರದೇಶಗಳಲ್ಲಿ ಮೋಡದ ವಾತಾವರಣ ಕಂಡುಬರುತ್ತಿದೆ. ಚಿಕ್ಕಮಗಳೂರಿನ ಮೂಡಿಗೆರೆ, ಬಾಳೆಹೊನ್ನೂರು, ಕುದುರೆಮುಖ ಮತ್ತು ಶಿವಮೊಗ್ಗ ಜಿಲ್ಲೆಯ ಆಗುಂಬೆ ಸುತ್ತಮುತ್ತ ಭಾಗಗಳಲ್ಲಿ ಸಂಜೆ ವೇಳೆಗೆ ತುಂತುರು ಮಳೆಯಾಗುವ ಸಾಧ್ಯತೆ ಇದೆ. ಫೆಬ್ರವರಿ 19 ನಂತರ ಮಲೆನಾಡಿನ ವಿವಿಧ ಭಾಗಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ನೀಡಲಾಗಿದೆ.

ಉತ್ತರ ಒಳನಾಡಿನಲ್ಲಿ ಉಷ್ಣಾಂಶ ಏರಿಕೆ :  ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಮಳೆಯ ಸಾಧ್ಯತೆ ಕಡಿಮೆ ಇದ್ದು, ಹಗಲಿನ ಉಷ್ಣಾಂಶ ಏರಿಕೆಯಾಗುವ ಸಾಧ್ಯತೆ ಇದೆ. ಇದರಿಂದ ಬಿಸಿಲಿನ ತೀವ್ರತೆ ಹೆಚ್ಚಾಗುವ ನಿರೀಕ್ಷೆ ಇದೆ.

ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮೋಡದ ವಾತಾವರಣ : ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು ನಗರ ಮತ್ತು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಮತ್ತು ಚಿತ್ರದುರ್ಗ ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣ ಕಂಡುಬರುತ್ತಿದ್ದು, ಫೆಬ್ರವರಿ 20ರಿಂದ ತುಂತುರು ಮಳೆಯಾಗುವ ಸಾಧ್ಯತೆ ಇದೆ.  ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

ವಾಯುಭಾರ ಕುಸಿತದಿಂದ ಮಳೆ :  ಶ್ರೀಲಂಕಾ ಸಮೀಪ ಉಂಟಾಗಿರುವ ವಾಯುಭಾರ ಕುಸಿತ ಮುಂದಿನ 2–3 ದಿನಗಳಲ್ಲಿ ಉತ್ತರ ಭಾಗದತ್ತ ಚಲಿಸುವ ಸಾಧ್ಯತೆ ಇದೆ. ಇದರ ಪರಿಣಾಮವಾಗಿ ಕರ್ನಾಟಕದ ಹಲವು ಭಾಗಗಳಲ್ಲಿ ಮೋಡದ ವಾತಾವರಣ ಹಾಗೂ ಮಳೆಯಾಗುವ ಲಕ್ಷಣಗಳಿವೆ.

A low-pressure system near Sri Lanka is expected to bring cloudy conditions and light rainfall across coastal, Malnad, and parts of south interior Karnataka from February 20. Coastal districts like Dakshina Kannada and Udupi and Malnad regions including Chikkamagaluru and Shivamogga may receive light showers, while north interior Karnataka is likely to experience rising temperatures without rainfall.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಪೂರ್ವ ಮುಂಗಾರು ಸಿಡಿಲು, ಗಾಳಿ ಮಳೆಗೆ ಮುನ್ನೆಚ್ಚರಿಕೆ ವಹಿಸಿ : ವಿಜಯನಗರ ಜಿಲ್ಲಾಧಿಕಾರಿ ಸೂಚನೆ
March 10, 2026
6:48 AM
by: ಮಿರರ್‌ ಡೆಸ್ಕ್
ರಾಜ್ಯದಲ್ಲಿ ಟ್ರಾನ್ಸ್ಫಾರ್ಮರ್ ಕೊರತೆ: ಕೇರಳದಿಂದ ಖರೀದಿಗೆ ಸರ್ಕಾರ ನಿರ್ಧಾರ
March 10, 2026
6:43 AM
by: ದ ರೂರಲ್ ಮಿರರ್.ಕಾಂ
ಭತ್ತದ ಗದ್ದೆಯಿಂದ ಅಡಿಕೆ ತೋಟ | ಮಣ್ಣಿನ ಆರೋಗ್ಯದ ಮೇಲೆ ಪರಿಣಾಮ ಬಿಚ್ಚಿಟ್ಟ ಸಂಶೋಧನೆ
March 9, 2026
10:09 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 09-03-2026 | ಕರಾವಳಿ–ಮಲೆನಾಡಿನಲ್ಲಿ ಇಂದು ಸಂಜೆ ಗುಡುಗು ಮಳೆಯ ಸಾಧ್ಯತೆ | ಮಾರ್ಚ್ ಮಧ್ಯಭಾಗದಲ್ಲಿ ಮಳೆ ಚಟುವಟಿಕೆ ಹೆಚ್ಚಳ..?
March 9, 2026
2:16 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror