Advertisement
ಸುದ್ದಿಗಳು

ಹವಾಮಾನ ವರದಿ | 26-02-2026 | ಸೆಖೆ ನಡುವೆ ಸಂಜೆ ಮಳೆ ಸಾಧ್ಯತೆ | ಕರಾವಳಿ, ಮಲೆನಾಡು ಮತ್ತು ಮೈಸೂರು ಭಾಗಗಳಿಗೆ ಎಚ್ಚರಿಕೆ

Share

27.02.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ ಜಿಲ್ಲೆಗಳು : ಕರ್ನಾಟಕದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು ಭಾಗಗಳಲ್ಲಿ ಬಿಸಿಲು ಮತ್ತು ಸೆಖೆಯ ಜೊತೆಗೆ ಅಲ್ಲಲ್ಲಿ ಮೋಡದ ವಾತಾವರಣ ಕಂಡುಬರುವ ಸಾಧ್ಯತೆ ಇದೆ. ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ, ಸುಬ್ರಹ್ಮಣ್ಯ ಸುತ್ತಮುತ್ತ ಭಾಗಗಳಲ್ಲಿ ಸಂಜೆ ಸಾಮಾನ್ಯ ಮಳೆಯ ಸಾಧ್ಯತೆ ಇದೆ. ಗಾಳಿಯ ಪ್ರಭಾವ ಹೆಚ್ಚಿದ್ದಲ್ಲಿ ಬೆಳ್ತಂಗಡಿ ಹಾಗೂ ಧರ್ಮಸ್ಥಳ ಭಾಗಗಳಲ್ಲಿಯೂ ಮಳೆಯಾಗುವ ಸಾಧ್ಯತೆ ಇದೆ.

ಮಲೆನಾಡು ಜಿಲ್ಲೆಗಳು :  ಕೊಡಗು ಜಿಲ್ಲೆಯ ಹಲವು ಭಾಗಗಳಲ್ಲಿ, ವಿಶೇಷವಾಗಿ ಸೋಮವಾರಪೇಟೆ ಸುತ್ತಮುತ್ತ ಪ್ರದೇಶಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಹಾಸನ ಮತ್ತು ಚಿಕ್ಕಮಗಳೂರು ಜಿಲ್ಲೆಗಳ ಕರಾವಳಿ ಗಡಿಭಾಗಗಳಲ್ಲಿ ಕೂಡಾ ಸಂಜೆ ವೇಳೆಗೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಶಿವಮೊಗ್ಗ ಜಿಲ್ಲೆಯ ಕೆಲವು ಭಾಗಗಳಲ್ಲಿ ಮೋಡ ಕವಿದ ವಾತಾವರಣ ಕಂಡುಬರುವ ಸಾಧ್ಯತೆ ಇದೆ.

ಉತ್ತರ ಒಳನಾಡು :  ರಾಜ್ಯದ ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಕಳೆದ ಎರಡು ದಿನಗಳ ಕಾಲ ಅನಿರೀಕ್ಷಿತ ಮಳೆಯಾಗಿತ್ತು. ಆದರೆ ಇಂದಿನ ಮುನ್ಸೂಚನೆಯ ಪ್ರಕಾರ ಈ ಭಾಗದಲ್ಲಿ ಮಳೆಯ ಸಾಧ್ಯತೆ ಕಡಿಮೆ ಇದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

ದಕ್ಷಿಣ ಒಳನಾಡು : ಮೈಸೂರು ಜಿಲ್ಲೆಯ ಕೆಲವು ಭಾಗಗಳಲ್ಲಿ ಸಂಜೆ ಹಾಗೂ ರಾತ್ರಿ ವೇಳೆಗೆ ಸಾಮಾನ್ಯ ಮಳೆಯಾಗುವ ಸಾಧ್ಯತೆ ಇದೆ.

ಮಳೆಗೆ ಕಾರಣವೇನು? :  ಬಂಗಾಳಕೊಲ್ಲಿ ಅಥವಾ ಅರಬ್ಬಿ ಸಮುದ್ರದಲ್ಲಿ ಯಾವುದೇ ಪ್ರಮುಖ ಹವಾಮಾನ ವ್ಯವಸ್ಥೆ ಇಲ್ಲದಿದ್ದರೂ, ಹೆಚ್ಚಿದ ತಾಪಮಾನ ಮತ್ತು ವಾತಾವರಣದ ತೇವಾಂಶದಿಂದ ಸ್ಥಳೀಯ ಮೋಡಗಳ ರಚನೆ ನಡೆಯುತ್ತಿದೆ. ಹಿಂದಿನ ವಾಯುಭಾರ ಕುಸಿತದ ಪರಿಣಾಮವಾಗಿ ತೇವಾಂಶ ಹೆಚ್ಚಾಗಿದ್ದು, ಇದರ ಪರಿಣಾಮವಾಗಿ ಸಂಜೆ ವೇಳೆಯಲ್ಲಿ ಸ್ಥಳೀಯವಾಗಿ ಮಳೆಯಾಗುತ್ತಿದೆ.

Parts of Coastal Karnataka, Malnad, and Mysuru region are likely to receive light to moderate evening showers due to high temperature and atmospheric moisture. No major weather system is active, but localized cloud formation may trigger rainfall in select areas.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಹಲವು ರಾಜ್ಯಗಳಲ್ಲಿ ಮುಂದಿನ 2 ದಿನ ಭಾರೀ ಮಳೆ ಸಾಧ್ಯತೆ – ಆರೆಂಜ್ ಅಲರ್ಟ್

ದೇಶದ ಹಲವು ರಾಜ್ಯಗಳಲ್ಲಿ ಮುಂದಿನ ಎರಡು ದಿನ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಕರ್ನಾಟಕದ…

5 hours ago

ಬರಪೀಡಿತ ವಿಜಯಪುರದಲ್ಲಿ ಹಸಿರಿನ ಕ್ರಾಂತಿ

ವಿಜಯಪುರ ಜಿಲ್ಲೆಯಲ್ಲಿ ಕೋಟಿ ವೃಕ್ಷ ಅಭಿಯಾನ ಸೇರಿದಂತೆ ವಿವಿಧ ಯೋಜನೆಗಳ ಮೂಲಕ ಹಸಿರು…

5 hours ago

ಅಡಿಕೆ ತೋಟದಿಂದ ನ್ಯಾನೋತಂತ್ರಜ್ಞಾನದವರೆಗೆ…! ಬೆಳೆಗಾರರಿಗೆ ಹೊಸ ಮೌಲ್ಯ ಸೃಷ್ಟಿಸುವ ಸಂಶೋಧನೆ

ಅಡಿಕೆ ಸಿಪ್ಪೆ, ಸೋಗೆ ಮತ್ತು ಇತರ ಕೃಷಿ ಅವಶೇಷಗಳಿಂದ ಕಾರ್ಬನ್ ನ್ಯಾನೋಸ್ಫಿಯರ್‌ಗಳನ್ನು ಅಭಿವೃದ್ಧಿಪಡಿಸಿ,…

19 hours ago

ದಕ್ಷಿಣ ಕನ್ನಡ ಜಿಲ್ಲೆ ಮರುನಾಮಕರಣಕ್ಕೆ ಬೆಳ್ಳಾರೆ ಬಳಕೆದಾರರ ವೇದಿಕೆ ವಿರೋಧ- ಜನಮತ ಸಂಗ್ರಹಕ್ಕೆ ಆಗ್ರಹ

ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ಮರುನಾಮಕರಣ ಮಾಡುವ ಪ್ರಸ್ತಾವನೆಗೆ ಬೆಳ್ಳಾರೆ…

21 hours ago

ಗುತ್ತಿಗಾರಿನಲ್ಲಿ ಚಣಿಲ ಹೋಮಿಯೋಪಥಿ ಕ್ಲಿನಿಕ್‌ ಆರಂಭ

ಸುಬ್ರಹ್ಮಣ್ಯದಲ್ಲಿ ಐದು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಶ್ರೀ ಹೋಮಿಯೋಕೇರ್‌ ಗುತ್ತಿಗಾರಿಗೆ ಸ್ಥಳಾಂತರಗೊಂಡಿದ್ದು, ಎಸ್‌ಎಂಎಸ್‌ಜಿ ಕಾಂಪ್ಲೆಕ್ಸ್‌ನಲ್ಲಿ…

21 hours ago

ಹವಾಮಾನ ವರದಿ | 16-10-2026 | ಕರ್ನಾಟಕದಲ್ಲಿ ಇನ್ನೂ 10 ದಿನ ಮಳೆ? ಅ.19ರ ನಂತರ ಹಿಂಗಾರು ಮಾರುತಗಳ ಆಗಮನದ ನಿರೀಕ್ಷೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಗುಡುಗು…

22 hours ago