Advertisement
ವೆದರ್ ಮಿರರ್

ಹವಾಮಾನ ವರದಿ | 22-02-2026 | ಸುಳ್ಯ–ಸುಬ್ರಹ್ಮಣ್ಯ, ಕೊಡಗಿನಲ್ಲಿ ಮಳೆ ಮುಂದುವರಿಕೆ ಸಾಧ್ಯತೆ | ಫೆ.25 ಬಳಿಕ ರಾಜ್ಯದಲ್ಲಿ ಬಿಸಿಲು ಹೆಚ್ಚಳ ನಿರೀಕ್ಷೆ

Share

23.02.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ರಾಜ್ಯದಲ್ಲಿ ಮುಂದಿನ ಕೆಲ ದಿನಗಳಲ್ಲಿ ಮಿಶ್ರ ವಾತಾವರಣದ ಲಕ್ಷಣಗಳು ಮುಂದುವರಿಯಲಿದ್ದು, ಕರಾವಳಿ ಹಾಗೂ ಮಲೆನಾಡಿನ ಕೆಲ ಭಾಗಗಳಲ್ಲಿ ಮಳೆಯ ಸಾಧ್ಯತೆ ಇದ್ದರೂ, ಫೆಬ್ರವರಿ 25ರ ನಂತರ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಬಿಸಿಲು ಮತ್ತು ಒಣಹವೆ ಹೆಚ್ಚಾಗುವ ನಿರೀಕ್ಷೆ ಇದೆ.

ಕರಾವಳಿ ಜಿಲ್ಲೆಗಳಾದ ಕಾಸರಗೋಡು, ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿಸಿಲಿನೊಂದಿಗೆ ಮಧ್ಯಾಹ್ನ ನಂತರ ಅಲ್ಲಲ್ಲಿ ಮೋಡದ ವಾತಾವರಣ ಕಂಡುಬರುವ ಸಾಧ್ಯತೆ ಇದೆ. ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಹಾಗೂ ಸುಬ್ರಹ್ಮಣ್ಯ ಭಾಗಗಳಲ್ಲಿ ರಾತ್ರಿ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಈ ಭಾಗಗಳಲ್ಲಿ ಫೆಬ್ರವರಿ 27ರವರೆಗೆ ಮೋಡ ಮತ್ತು ಅಲ್ಲಲ್ಲಿ ಮಳೆಯ ಸಾಧ್ಯತೆ ಮುಂದುವರಿಯಬಹುದು.

ಮಲೆನಾಡಿನ ಕೊಡಗು ಜಿಲ್ಲೆಯ ಕೆಲ ಭಾಗಗಳಲ್ಲಿ ರಾತ್ರಿ ಸಾಮಾನ್ಯ ಮಳೆಯ ಸಾಧ್ಯತೆ ಇದೆ. ಹಾಸನ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಶಿವಮೊಗ್ಗ ಜಿಲ್ಲೆಯಲ್ಲಿ ಮಧ್ಯಾಹ್ನ ನಂತರ ಮೋಡದ ವಾತಾವರಣ ಇರಬಹುದು. ಕೊಡಗು ಜಿಲ್ಲೆಯಲ್ಲಿ ಫೆಬ್ರವರಿ 27ರವರೆಗೆ ಮಳೆಯ ಸಾಧ್ಯತೆ ಮುಂದುವರಿಯಬಹುದು.

ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಮಧ್ಯಾಹ್ನ ನಂತರ ಮೋಡದ ವಾತಾವರಣ ಕಂಡುಬರುವ ಸಾಧ್ಯತೆ ಇದೆ. ಗುಲ್ಬರ್ಗ ಜಿಲ್ಲೆಯ ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆ ಇದ್ದರೂ, ಫೆಬ್ರವರಿ 25ರ ನಂತರ ಮಳೆಯ ಸಾಧ್ಯತೆ ಕಡಿಮೆಯಾಗಲಿದೆ.

ದಕ್ಷಿಣ ಒಳನಾಡಿನ ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಹಾಗೂ ಚಿತ್ರದುರ್ಗ ಜಿಲ್ಲೆಗಳಲ್ಲಿ ಮಧ್ಯಾಹ್ನ ನಂತರ ಮೋಡದ ವಾತಾವರಣ ಹಾಗೂ ರಾತ್ರಿ ತುಂತುರು ಮಳೆಯ ಸಾಧ್ಯತೆ ಇದೆ. ಆದರೆ ಫೆಬ್ರವರಿ 25ರ ನಂತರ ಈ ಭಾಗಗಳಲ್ಲಿಯೂ ಬಿಸಿಲು ಹೆಚ್ಚಾಗುವ ನಿರೀಕ್ಷೆ ಇದೆ.

ಬಂಗಾಳಕೊಲ್ಲಿಯ ತಮಿಳುನಾಡು ಕರಾವಳಿ ಸಮೀಪ ಉಂಟಾಗಿರುವ ವಾಯುಭಾರ ಕುಸಿತವು ಪೂರ್ವಾಭಿಮುಖವಾಗಿ ಚಲಿಸುತ್ತಿದ್ದು, ಇದರ ಪರಿಣಾಮ ರಾಜ್ಯದಲ್ಲಿ ಮಳೆಯ ಪ್ರಮಾಣ ಕ್ರಮೇಣ ಕಡಿಮೆಯಾಗಲಿದೆ. ಮುಂದಿನ ದಿನಗಳಲ್ಲಿ ಮೋಡದ ವಾತಾವರಣ ಕಡಿಮೆಯಾಗಿ ಬಿಸಿಲು ಹಾಗೂ ಒಣಹವೆ ಮುಂದುವರಿಯುವ ಸಾಧ್ಯತೆ ಇದೆ.

Rain is expected in parts of Coastal Karnataka, especially Sullia and Subrahmanya, and in Kodagu district until February 27, 2026. However, as the low-pressure system over the Bay of Bengal moves eastward, rainfall will decrease, and most districts in Karnataka are likely to experience sunny and dry weather with rising temperatures after February 25, 2026.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಸರ್ಕಾರದ ಸೌಲಭ್ಯಕ್ಕೆ ‘ಫ್ರೂಟ್ಸ್ ಐಡಿ’ ಕಡ್ಡಾಯ | ರೈತರಿಗೆ ಸೂಚನೆ

ಸರ್ಕಾರದ ಸೌಲಭ್ಯ ಪಡೆಯಲು ರೈತರಿಗೆ ‘FRUITS ID’ ಕಡ್ಡಾಯ. ನೋಂದಣಿ ಮಾಡದಿದ್ದರೆ ಭವಿಷ್ಯದ…

39 minutes ago

ಗದಗ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ತಾಪಮಾನ | ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದ ಜಿಲ್ಲಾಧಿಕಾರಿ

ಗದಗ ಜಿಲ್ಲೆಯಲ್ಲಿ ಮುಂದಿನ 3-6 ದಿನ ತೀವ್ರ ಬಿಸಿಗಾಳಿ ಸಾಧ್ಯತೆ. ಸಾರ್ವಜನಿಕರು ಆರೋಗ್ಯದ…

47 minutes ago

ಅಡಿಕೆ ಎಲೆ ಚುಕ್ಕಿ ರೋಗ ನಿರ್ವಹಣೆ | ಗುತ್ತಿಗಾರಿನ ಪ್ರಾತ್ಯಕ್ಷಿಕೆ ತೋಟಕ್ಕೆ ಸಿಪಿಸಿಆರ್‌ಐ ನಿರ್ದೇಶಕರ ಭೇಟಿ | ವೈಜ್ಞಾನಿಕ ಕ್ರಮಗಳು ರೈತರಿಗೆ ಆಶಾಕಿರಣ

ಅಡಿಕೆ ಎಲೆಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್‌ಐ ಪ್ರಾತ್ಯಕ್ಷಿಕೆ ಮುಂದುವರಿದಿದೆ. ವೈಜ್ಞಾನಿಕ ಕ್ರಮಗಳು ಮತ್ತು…

13 hours ago

ದೇಶದ ಹಲವು ರಾಜ್ಯಗಳಲ್ಲಿ ಭಾರಿ ಮಳೆ – ಆಲಿಕಲ್ಲು ಮಳೆಯಿಂದ ರೈತರ ಬೆಳೆ ನಷ್ಟ

ದೇಶದ ಹಲವು ರಾಜ್ಯಗಳಲ್ಲಿ ಭಾರಿ ಮಳೆ ಮತ್ತು ಆಲಿಕಲ್ಲು ಮಳೆಯಿಂದ ಬೆಳೆಗಳಿಗೆ ಹಾನಿಯಾಗಿದೆ.…

1 day ago

ಹವಾಮಾನ ವರದಿ | 05-04-2026 | ರಾಜ್ಯದಲ್ಲಿ ಮಳೆ ಕಡಿಮೆಯ ಸೂಚನೆ – ಕರಾವಳಿ-ಮಲೆನಾಡಿನಲ್ಲಿ ತುಂತುರು ಮಳೆ, ರಾಜ್ಯಾದ್ಯಂತ ಬಿಸಿಲು ಏರಿಕೆ..!

ಕರ್ನಾಟಕದಲ್ಲಿ ಏಪ್ರಿಲ್ 6ರಿಂದ ಮಳೆ ಕಡಿಮೆಯಾಗಲಿದೆ. ರಾಜ್ಯಾದ್ಯಂತ ಬಿಸಿಲು ಮತ್ತು ತಾಪಮಾನ ಏರಿಕೆ…

2 days ago

ಸಾರ್ವಜನಿಕ ಸ್ಥಳಗಳಲ್ಲಿ ಶಿಸ್ತು ಮತ್ತು ನಾಗರಿಕ ಸಂಸ್ಕೃತಿ – ಸಮಾಜದ ನಿಜವಾದ ಅಳತೆ

ಸಾರ್ವಜನಿಕ ಸ್ಥಳಗಳಲ್ಲಿ ಶಿಸ್ತು ಸಮಾಜದ ನಿಜವಾದ ಸಂಸ್ಕೃತಿಯನ್ನು ತೋರಿಸುತ್ತದೆ. ಸಣ್ಣ ಸಣ್ಣ ಸರಿಯಾದ…

2 days ago