ಹವಾಮಾನ ವರದಿ | 09-09-2026 | ಕರ್ನಾಟಕದಲ್ಲಿ ಮಳೆಯ ಚಿತ್ರಣ ಬದಲಾಗುತ್ತಿದೆ – ಸೆ.11ರಿಂದ ಕರಾವಳಿಯಲ್ಲಿ ಬದಲಾವಣೆ

September 9, 2026
1:50 PM
ಕರ್ನಾಟಕದಲ್ಲಿ ಮಳೆಯ ಸಾಧ್ಯತೆ ಒಟ್ಟಾರೆ ಇಳಿಮುಖವಾಗುತ್ತಿದ್ದು, ಕರಾವಳಿಯಲ್ಲಿ ಸೆ.11ರಿಂದ ಮಳೆ ಕಡಿಮೆಯಾಗುವ ಲಕ್ಷಣಗಳಿವೆ. ಮಲೆನಾಡಿನಲ್ಲಿ ಸೆ.13ರವರೆಗೆ ಹಾಗೂ ಉತ್ತರ–ದಕ್ಷಿಣ ಒಳನಾಡಿನಲ್ಲಿ ಸೆ.15ರವರೆಗೆ ಅಲ್ಲಲ್ಲಿ ಮಳೆಯ ಸಾಧ್ಯತೆ ಇದ್ದರೂ, ಜೋರು ಮಳೆಯ ನಿರೀಕ್ಷೆ ಕಡಿಮೆಯಾಗಿದೆ.

ಕಾಸರಗೋಡು ಸೇರಿದಂತೆ ಕರಾವಳಿ ಜಿಲ್ಲೆಗಳಲ್ಲಿ ಇಂದು ಮಧ್ಯಾಹ್ನದ ನಂತರ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ ಸಾಧ್ಯತೆಯಿದ್ದರೂ, ಸೆ.11ರಿಂದ ಮಳೆಯ ಅವಕಾಶ ಕಡಿಮೆಯಾಗುವ ಲಕ್ಷಣಗಳಿವೆ. ಮಲೆನಾಡಿನಲ್ಲಿ ಸೆ.13ರವರೆಗೆ ಹಾಗೂ ದಕ್ಷಿಣ ಒಳನಾಡಿನಲ್ಲಿ ಸೆ.15ರವರೆಗೆ ಅಲ್ಲಲ್ಲಿ ಸಾಮಾನ್ಯ ಮಳೆ ಮುಂದುವರಿಯಬಹುದು. ಇದೇ ವೇಳೆ ಸೆ.11ರ ಸುಮಾರಿಗೆ ಉತ್ತರ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗುವ ಸಾಧ್ಯತೆಯಿದ್ದು, ಅದರ ಪರಿಣಾಮ ಮಹಾರಾಷ್ಟ್ರ ಸೇರಿದಂತೆ ಉತ್ತರ ಭಾರತದ ಹಲವು ರಾಜ್ಯಗಳಲ್ಲಿ ಉತ್ತಮ ಮಳೆಯಾಗಬಹುದು.

Advertisement

ಕರಾವಳಿಯಲ್ಲಿ ಇಂದು ಅಲ್ಲಲ್ಲಿ ಮಳೆ; ಸೆ.11ರಿಂದ ಮಳೆ ಇಳಿಮುಖ : ಕಾಸರಗೋಡು ಸೇರಿದಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯಲಿದೆ. ಕರಾವಳಿ ತೀರದ ಸುತ್ತಮುತ್ತ ಪ್ರದೇಶಗಳಲ್ಲಿ ಮಧ್ಯಾಹ್ನದ ನಂತರ, ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಒಂದೆರಡು ಸುತ್ತು ಸಾಮಾನ್ಯ ಮಳೆಯಾಗುವ ಸಾಧ್ಯತೆಯಿದೆ.

ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಒಳಭಾಗಗಳಲ್ಲಿ ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆಯಿದೆ. ಆದರೆ ಕಾಸರಗೋಡು ಹಾಗೂ ದಕ್ಷಿಣ ಕನ್ನಡದ ಉಳಿದ ಭಾಗಗಳಲ್ಲಿ ಮಳೆಯ ಸಾಧ್ಯತೆ ಕಡಿಮೆಯಿದೆ. ಈಗಿನ ಮುನ್ಸೂಚನೆಯಂತೆ ಸೆಪ್ಟೆಂಬರ್ 11ರಿಂದ ಕರಾವಳಿಯಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯಲಿದ್ದು, ಮಳೆಯ ಸಾಧ್ಯತೆ ಮತ್ತಷ್ಟು ಕಡಿಮೆಯಾಗುವ ಲಕ್ಷಣಗಳಿವೆ.

ಮಲೆನಾಡಿನಲ್ಲಿ ಸೆ.13ರವರೆಗೆ ಅಲ್ಲಲ್ಲಿ ಮಳೆ : ಕೊಡಗು, ಹಾಸನದ ಸಕಲೇಶಪುರ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಮೋಡದ ವಾತಾವರಣದೊಂದಿಗೆ ಮಧ್ಯಾಹ್ನದ ನಂತರ ಅಥವಾ ರಾತ್ರಿ ಅಲ್ಲಲ್ಲಿ ಒಂದೆರಡು ಸುತ್ತು ಸಾಮಾನ್ಯ ಮಳೆಯಾಗುವ ಸಾಧ್ಯತೆಯಿದೆ.

ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಮಳೆಯ ಪ್ರಮಾಣ ಸ್ವಲ್ಪ ಹೆಚ್ಚಿರಬಹುದು.  ಈಗಿನ ಮುನ್ಸೂಚನೆಯ ಪ್ರಕಾರ ಮಲೆನಾಡಿನ ಈ ಮಳೆಯ ವಾತಾವರಣ ಸೆಪ್ಟೆಂಬರ್ 13ರವರೆಗೆ ಮುಂದುವರಿಯುವ ಲಕ್ಷಣಗಳಿವೆ.

ಉತ್ತರ ಒಳನಾಡಿನಲ್ಲಿ ಸೆ.12–15ರ ನಡುವೆ ಮಳೆ : ಬೆಳಗಾವಿ, ಧಾರವಾಡ ಹಾಗೂ ಹಾವೇರಿ ಜಿಲ್ಲೆಗಳಲ್ಲಿ ಬಿಸಿಲು ಮತ್ತು ಅಲ್ಲಲ್ಲಿ ಮೋಡದ ವಾತಾವರಣದೊಂದಿಗೆ ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯಿದೆ. ಉಳಿದ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು. ಆದರೆ, ಈಗಿನ ಮುನ್ಸೂಚನೆಯಂತೆ ಸೆಪ್ಟೆಂಬರ್ 12ರಿಂದ 15ರವರೆಗೆ ಉತ್ತರ ಒಳನಾಡಿನ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಮಳೆಯಾಗುವ ಸಾಧ್ಯತೆ ಇದೆ.

ದಕ್ಷಿಣ ಒಳನಾಡಿನಲ್ಲಿ ಸೆ.15ರವರೆಗೆ ಮಳೆ : ಮೈಸೂರು, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ಬೆಂಗಳೂರು ನಗರ, ಕೋಲಾರ ಜಿಲ್ಲೆಗಳಲ್ಲಿ ಸಂಜೆ ವೇಳೆಯಲ್ಲಿ ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆಯಿದೆ. ಜೋರು ಮಳೆಯ ಸಾಧ್ಯತೆ ಸದ್ಯ ಕಡಿಮೆಯಾಗಿದೆ. ಉಳಿದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು. ಈಗಿನ ಮುನ್ಸೂಚನೆಯಂತೆ ಸೆಪ್ಟೆಂಬರ್ 15ರವರೆಗೆ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ ಮುಂದುವರಿಯುವ ಸಾಧ್ಯತೆ ಇದೆ.

ಸೆ.11ರಂದು ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ? : ಬಂಗಾಳಕೊಲ್ಲಿಯ ಗಾಳಿಯು ಸದ್ಯ ಪೆಸಿಫಿಕ್ ಮಹಾಸಾಗರದ ಕಡೆಗೆ ನಿರಂತರವಾಗಿ ಚಲಿಸುತ್ತಿರುವ ನಡುವೆಯೇ, ಸೆಪ್ಟೆಂಬರ್ 11ರಿಂದ ವಿಯೆಟ್ನಾಂ–ಥಾಯ್ಲೆಂಡ್ ಭಾಗದಿಂದ ಗಾಳಿ ಮತ್ತೆ ಉತ್ತರ ಬಂಗಾಳಕೊಲ್ಲಿಯ ಕಡೆಗೆ ಬೀಸಲು ಆರಂಭಿಸುವ ಲಕ್ಷಣಗಳಿವೆ. ಇದರ ಪರಿಣಾಮವಾಗಿ ಸೆ.11ರ ಸುಮಾರಿಗೆ ಉತ್ತರ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗುವ ಸಾಧ್ಯತೆ ಇದೆ. ಈ ಹವಾಮಾನ ವ್ಯವಸ್ಥೆ ಸೆ.14–15ರವರೆಗೆ ಮುಂದುವರಿಯುವ ಸಾಧ್ಯತೆಯೂ ಇದೆ.  ಇದರ ಪರಿಣಾಮವಾಗಿ ಮಹಾರಾಷ್ಟ್ರ ಸೇರಿದಂತೆ ಉತ್ತರ ಭಾರತದ ಹಲವು ರಾಜ್ಯಗಳಲ್ಲಿ ಉತ್ತಮ ಮಳೆಯಾಗುವ ನಿರೀಕ್ಷೆಯಿದೆ.

ಆದರೆ, ಈ ವಾಯುಭಾರ ಕುಸಿತದ ಪರಿಣಾಮ ಕರ್ನಾಟಕದಲ್ಲಿ ಮಳೆ ಹೆಚ್ಚಾಗುವ ಬದಲು ಮಳೆಯ ಸಾಧ್ಯತೆಗಳು ಕಡಿಮೆಯಾಗುವ ಲಕ್ಷಣಗಳಿವೆ. ಹೀಗಾಗಿ ಬಂಗಾಳಕೊಲ್ಲಿಯಲ್ಲಿ ಹವಾಮಾನ ವ್ಯವಸ್ಥೆ ರೂಪುಗೊಂಡರೂ ಅದರ ನೇರ ಪ್ರಯೋಜನ ಕರ್ನಾಟಕಕ್ಕೆ ಸಿಗುವ ಸಾಧ್ಯತೆ ಸದ್ಯ ಕಡಿಮೆಯಾಗಿದೆ.

ರೈತರಿಗೆ ಸಲಹೆ:  ರಾಜ್ಯದಲ್ಲಿ ಜೋರು ಮಳೆಯ ಸಾಧ್ಯತೆ ಸದ್ಯ ಕಡಿಮೆಯಾಗಿದ್ದು, ಮುಂದಿನ ದಿನಗಳಲ್ಲಿ ಮಳೆಯ ವಿತರಣೆ ಸ್ಥಳೀಯವಾಗಿರುವ ಸಾಧ್ಯತೆ ಹೆಚ್ಚು. ಕರಾವಳಿಯಲ್ಲಿ ಸೆ.11 ರಿಂದ ಮಳೆ ಇಳಿಮುಖವಾಗುವ ಲಕ್ಷಣವಿರುವುದರಿಂದ ಗಮನಿಸಿಬೇಕಿದೆ. ಆದರೆ ಮಲೆನಾಡು ಹಾಗೂ ಒಳನಾಡಿನಲ್ಲಿ ಮಧ್ಯಾಹ್ನದ ನಂತರ ಅಥವಾ ಸಂಜೆ ಸ್ಥಳೀಯ ಮಳೆಯ ಸಾಧ್ಯತೆ ಇರುವುದರಿಂದ ಗಮನಿಸುವುದು ಸೂಕ್ತ.

ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ-ಹವಾಮಾನ ಬದಲಾವಣೆ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಫಾಲೋಮಾಡಲು ಇಲ್ಲಿ ಕ್ಲಿಕ್‌ ಮಾಡಿ

Rainfall activity is expected to weaken across Karnataka. Coastal areas may receive isolated normal showers today, but rainfall chances are likely to decrease from September 11. Malnad may continue to receive scattered rain until September 13, while parts of North and South Interior Karnataka may see isolated rainfall through September 15. A possible low-pressure system over the North Bay of Bengal around September 11 could bring good rain to Maharashtra and several northern states, but its influence on Karnataka rainfall currently appears limited.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಕ್ಯಾಂಪ್ಕೋ ಅಭಿವೃದ್ಧಿಯ ಹಾದಿಯಲ್ಲಿ: ₹2,900 ಕೋಟಿ ಅಡಿಕೆ ವ್ಯವಹಾರದ ನಡುವೆ ಮುಂದಿರುವ ಸವಾಲುಗಳೇನು?
September 9, 2026
6:43 AM
by: ಅರುಣ್‌ ಕುಮಾರ್ ಕಾಂಚೋಡು
ಅಡಿಕೆಯಷ್ಟೇ ಅಲ್ಲ ಅದೇ ಮರಕ್ಕೆ ವೆನಿಲ್ಲಾ ಬಳ್ಳಿ | ಅಸ್ಸಾಂನಲ್ಲಿ ಅಡಿಕೆಯ ಜೊತೆಗೆ ಇನ್ನೊಂದು ಬೆಳೆ..
September 8, 2026
11:10 PM
by: ದ ರೂರಲ್ ಮಿರರ್.ಕಾಂ
ದೇಶಾದ್ಯಂತ ಮುಂಗಾರು ಬಿತ್ತನೆ 1,086 ಲಕ್ಷ ಹೆಕ್ಟೇರ್ ದಾಟಿದೆ – ಕರ್ನಾಟಕದಲ್ಲಿ ಭತ್ತ, ದ್ವಿದಳ ಧಾನ್ಯ ಕೃಷಿ ಕುಸಿತ
September 8, 2026
10:02 PM
by: ದ ರೂರಲ್ ಮಿರರ್.ಕಾಂ
ಜಾನುವಾರುಗಳ ಮೇವಿನ ಕೊರತೆಗೆ ಅಜೋಲಾ ಪರಿಹಾರ – ರಾಜ್ಯದಲ್ಲಿ 12 ಸಾವಿರ ಘಟಕಗಳ ಸ್ಥಾಪನೆಗೆ ಚಾಲನೆ
September 8, 2026
9:38 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror