Advertisement
ವೆದರ್ ಮಿರರ್

ಹವಾಮಾನ ವರದಿ | 12.09.2026 | ಸೆ.15ರಿಂದ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು? ಕರಾವಳಿ–ಮಲೆನಾಡಿನಲ್ಲಿ ಸದ್ಯ ಬಿಸಿಲಿನ ವಾತಾವರಣ

Share

ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ ಸಾಧ್ಯತೆ ಇದ್ದರೂ, ಸೆ. 15–16ರಿಂದ ರಾಜ್ಯದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಮಳೆ ಚುರುಕಾಗುವ ಲಕ್ಷಣಗಳಿವೆ. ಶ್ರೀಲಂಕಾದ ದಕ್ಷಿಣ ಕರಾವಳಿ ಭಾಗದಲ್ಲಿ ಸೆ.14ರ ವೇಳೆಗೆ ಪ್ರಬಲ ವಾಯುಭಾರ ಕುಸಿತ ಉಂಟಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ರಾಜ್ಯದ ಹವಾಮಾನದಲ್ಲಿ ಮುಂದಿನ ದಿನಗಳಲ್ಲಿ ಬದಲಾವಣೆ ಕಾಣಿಸಿಕೊಳ್ಳುವ ನಿರೀಕ್ಷೆಯಿದೆ.

ಕರಾವಳಿ, ಮಲೆನಾಡಿನಲ್ಲಿ ಬಿಸಿಲು

ಕಾಸರಗೋಡು ಸೇರಿದಂತೆ ರಾಜ್ಯದ ಕರಾವಳಿ ಜಿಲ್ಲೆಗಳು ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಅಧಿಕ ತಾಪಮಾನದೊಂದಿಗೆ ಬಿಸಿಲಿನ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ. ಅಲ್ಲಲ್ಲಿ ಮೋಡ ಕವಿದ ವಾತಾವರಣ ಕಂಡುಬರಬಹುದು.

ಉತ್ತರ ಒಳನಾಡಿನಲ್ಲಿ ಅಲ್ಲಲ್ಲಿ ಮಳೆ

ಉತ್ತರ ಒಳನಾಡಿನ ಕಲಬುರ್ಗಿ, ಯಾದಗಿರಿ ಹಾಗೂ ಬೀದರ್ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಸಾಧ್ಯತೆ ಇದೆ. ಉಳಿದ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಇರಲಿದೆ.

ಮೈಸೂರು–ಚಾಮರಾಜನಗರದಲ್ಲಿ ಗುಡುಗು ಸಹಿತ ಮಳೆ

ದಕ್ಷಿಣ ಒಳನಾಡಿನ ಮೈಸೂರು ಸುತ್ತಮುತ್ತ ಹಾಗೂ ಚಾಮರಾಜನಗರ ಜಿಲ್ಲೆಯ ಅಲ್ಲಲ್ಲಿ ಗುಡುಗು ಸಹಿತ ಮಳೆ ಬೀಳುವ ಸಾಧ್ಯತೆ ಇದೆ. ಉಳಿದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಬಿಸಿಲು ಮತ್ತು ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.

ಸೆ.15ರಿಂದ ದಕ್ಷಿಣ ಒಳನಾಡಿನಲ್ಲಿ ಮಳೆ ಸಾಧ್ಯತೆ

ಸೆ. 14ರಂದು ಶ್ರೀಲಂಕಾದ ದಕ್ಷಿಣ ಕರಾವಳಿ ಭಾಗದಲ್ಲಿ ಪ್ರಬಲ ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿವೆ. ಈ ವಾಯುಭಾರ ಕುಸಿತದ ಪರಿಣಾಮ ಬಂಗಾಳಕೊಲ್ಲಿಯ ಗಾಳಿಯು ದಕ್ಷಿಣದತ್ತ ಸೆಳೆಯಲ್ಪಡುವ ಸಾಧ್ಯತೆ ಇದ್ದು, ಇದರ ಪರಿಣಾಮವಾಗಿ ಸೆ. 15–16ರಿಂದ ರಾಜ್ಯದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆ ಆರಂಭವಾಗುವ ಸಾಧ್ಯತೆ ಇದೆ.

ಸುಮಾರು ಸೆ. 17–18ರ ನಂತರ ಕರಾವಳಿ ಜಿಲ್ಲೆಗಳಲ್ಲೂ, ಸೆ.19ರ ನಂತರ ಉತ್ತರ ಒಳನಾಡು ಜಿಲ್ಲೆಗಳಲ್ಲೂ ಮಳೆಯ ಸಾಧ್ಯತೆ ಕಂಡುಬರುತ್ತಿದೆ.

ಮುಂದಿನ ಕೆಲವು ದಿನಗಳಲ್ಲಿ ಈ ವಾಯುಭಾರ ಕುಸಿತದ ಚಲನೆ ಮತ್ತು ತೀವ್ರತೆಯನ್ನು ಆಧರಿಸಿ ಮಳೆಯ ವ್ಯಾಪ್ತಿ ಹಾಗೂ ಪ್ರಮಾಣದಲ್ಲಿ ಬದಲಾವಣೆ ಆಗುವ ಸಾಧ್ಯತೆ ಇದೆ.

ರೈತರಿಗೆ ಏನು ಮುಖ್ಯ?

ಸದ್ಯ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಬಿಸಿಲಿನ ವಾತಾವರಣ ಮುಂದುವರಿದರೂ, ಮುಂದಿನ ವಾರದಿಂದ ಹಂತ ಹಂತವಾಗಿ ರಾಜ್ಯದ ವಿವಿಧ ಭಾಗಗಳಿಗೆ ಮಳೆ ಪ್ರವೇಶಿಸುವ ಸಾಧ್ಯತೆ ಇದೆ. ವಿಶೇಷವಾಗಿ ಸೆ.15–16ರಿಂದ ದಕ್ಷಿಣ ಒಳನಾಡು, ಸೆ.17–18ರ ನಂತರ ಕರಾವಳಿ ಮತ್ತು ಸೆ.19ರ ನಂತರ ಉತ್ತರ ಒಳನಾಡಿನ ಹವಾಮಾನವನ್ನು ರೈತರು ಗಮನಿಸುವುದು ಅಗತ್ಯ.

Karnataka is likely to see mostly sunny and partly cloudy conditions on September 13, with isolated rain over parts of northern and southern interior districts. A strong low-pressure area is expected near the southern coast of Sri Lanka around September 14, which may draw winds southward and trigger thunderstorms over southern interior Karnataka from September 15–16. Rain chances may gradually extend to coastal districts after September 17–18 and northern interior districts after September 19.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಹವಾಮಾನ ವರದಿ | 02-10-2026 | ಸುಳ್ಯದಲ್ಲಿ 100 ಮಿ.ಮೀ.ವರೆಗೆ ಮಳೆ – ಕರಾವಳಿ–ಮಲೆನಾಡಿನಲ್ಲಿ ಮುಂದಿನ 10 ದಿನವೂ ಮಳೆಯ ಸಾಧ್ಯತೆ

ಸುಳ್ಯ ತಾಲೂಕಿನ ಹಲವು ಕಡೆ ನಿನ್ನೆ ಸುಮಾರು 100 ಮಿ.ಮೀ.ನಷ್ಟು ಮಳೆಯಾಗಿದ್ದು, ಕರಾವಳಿ–ಮಲೆನಾಡಿನ…

2 hours ago

ಕಬ್ಬು ಬೆಳೆಗಾರರ ಹಿತರಕ್ಷಣೆಗೆ ಕೇಂದ್ರ ಸರ್ಕಾರ ಬದ್ಧ: ಎಥೆನಾಲ್ ಖರೀದಿ 1,200 ಕೋಟಿ ಲೀಟರ್‌ಗೆ ಏರಿಕೆ

ಕಬ್ಬು ಬೆಳೆಗಾರರ ಹಿತರಕ್ಷಣೆಗೆ ಕೇಂದ್ರ ಸರ್ಕಾರ ಬದ್ಧವಾಗಿದ್ದು, ಪ್ರಸಕ್ತ ಹಂಗಾಮಿನಲ್ಲಿ ಕಬ್ಬಿನ ಪಾವತಿಯ…

7 hours ago

ಅಂತಾರಾಷ್ಟ್ರೀಯ ಕಾಫಿ ದಿನಾಚರಣೆ – ಕಾಫಿ ಬಗ್ಗೆ ಜಾಗೃತಿಗೆ ಚಿಕ್ಕಮಗಳೂರಿನಲ್ಲಿ ಸೈಕಲ್ ಜಾಥಾ

ಅಂತಾರಾಷ್ಟ್ರೀಯ ಕಾಫಿ ದಿನಾಚರಣೆ ಹಿನ್ನೆಲೆಯಲ್ಲಿ ಚಿಕ್ಕಮಗಳೂರಿನಲ್ಲಿ ‘ಸೈಕಲ್ ಫಾರ್ ಕಾಫಿ’ ಜಾಥಾ ಆಯೋಜಿಸಲಾಗಿದ್ದು,…

7 hours ago

ಏಷ್ಯನ್ ಗೇಮ್ಸ್‌ ಕ್ರಿಕೆಟ್‌ : ಚಿನ್ನದ ಪದಕಕ್ಕಾಗಿ ಭಾರತ–ಪಾಕಿಸ್ತಾನ ಫೈನಲ್‌

ಏಷ್ಯನ್‌ ಗೇಮ್ಸ್‌ ಪುರುಷರ ಕ್ರಿಕೆಟ್‌ ಫೈನಲ್‌ನಲ್ಲಿ ಅ.3ರಂದು ಭಾರತ ಮತ್ತು ಪಾಕಿಸ್ತಾನ ಚಿನ್ನದ…

8 hours ago

ಮಳೆ ಕೊರತೆ ಮುಂದುವರಿದರೆ ಬೇಸಿಗೆಯಲ್ಲಿ ನೀರಿನ ಸಮಸ್ಯೆ ಹೇಗಿರಲಿದೆ?

ಮಳೆಯ ಕೊರತೆಯಿಂದ ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆ ಉಲ್ಬಣಿಸುವ ಸಾಧ್ಯತೆ ಹಿನ್ನೆಲೆಯಲ್ಲಿ…

8 hours ago

ಅಡಿಕೆ ಅಕ್ರಮ ಆಮದು ಜಾಲದ ಮೇಲೆ ಇಡಿ ದಾಳಿ – 16 ಕಡೆ ಶೋಧ, ನೂರಾರು ಕೋಟಿ ಹಣದ ವಹಿವಾಟಿನ ತನಿಖೆ

ಅಸ್ಸಾಂ ಮತ್ತು ಪಶ್ಚಿಮ ಬಂಗಾಳದ 16 ಸ್ಥಳಗಳಲ್ಲಿ ವಿದೇಶಿ ಅಡಿಕೆ ಅಕ್ರಮ ಸಾಗಾಟಕ್ಕೆ…

18 hours ago