Advertisement
ವೆದರ್ ಮಿರರ್

ಹವಾಮಾನ ವರದಿ | 01-09-2026 | ಯಾವ ಜಿಲ್ಲೆಗಳಲ್ಲಿ ಇನ್ನೂ ಮಳೆಯ ಸಾಧ್ಯತೆ…?

Share

ಸೆಪ್ಟೆಂಬರ್ 2ರ ಬೆಳಿಗ್ಗೆ 8 ಗಂಟೆವರೆಗಿನ ಮುನ್ಸೂಚನೆಯಂತೆ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ತೀವ್ರತೆ ಕಡಿಮೆಯಾಗಿದ್ದು, ಹಲವು ಜಿಲ್ಲೆಗಳಲ್ಲಿ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ. ಇದೇ ವೇಳೆ ಸೆಪ್ಟೆಂಬರ್ 4ರಿಂದ ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಮಳೆ ಮತ್ತಷ್ಟು ಕಡಿಮೆಯಾಗುವ ಲಕ್ಷಣಗಳು ಕಂಡುಬರುತ್ತಿವೆ.

ಕರಾವಳಿಯಲ್ಲಿ ಮಳೆ ಕಡಿಮೆಯಾಗುವ ಸೂಚನೆ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಬಿಟ್ಟುಬಿಟ್ಟು ಸಣ್ಣ ಹನಿ ಮಳೆಯಾಗುವ ಸಾಧ್ಯತೆ ಇದೆ. ಮಳೆಯ ನಡುವಿನ ಬಿಡುವಿನ ಅವಧಿ ಹೆಚ್ಚಾಗುವ ನಿರೀಕ್ಷೆಯಿದೆ. ಈಗಿನ ಮುನ್ಸೂಚನೆಯ ಪ್ರಕಾರ ಸೆಪ್ಟೆಂಬರ್ 4ರಿಂದ ಕರಾವಳಿ ಜಿಲ್ಲೆಗಳಲ್ಲಿ ಮಳೆ ಮತ್ತಷ್ಟು ಕಡಿಮೆಯಾಗಲಿದ್ದು, ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.

ಮಲೆನಾಡಿನಲ್ಲೂ ಮಳೆಯ ತೀವ್ರತೆ ಇಳಿಕೆ : ಕೊಡಗಿನ ಭಾಗಮಂಡಲ, ತಲಕಾವೇರಿ ಸುತ್ತಮುತ್ತ ಒಂದೆರಡು ಕಡೆ ಸಣ್ಣ ಪ್ರಮಾಣದ ಮಳೆಯಾಗಬಹುದು. ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳ ಕರಾವಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಸಾಧ್ಯತೆ ಇದೆ. ಚಿಕ್ಕಮಗಳೂರಿನ ಉಳಿದ ಭಾಗಗಳಲ್ಲಿ ಬಿಸಿಲು ಹಾಗೂ ಮೋಡದ ವಾತಾವರಣ ಇರಬಹುದು. ಶಿವಮೊಗ್ಗದ ಇತರ ಭಾಗಗಳಲ್ಲಿ ಅಲ್ಲಲ್ಲಿ ಮೋಡ ಅಥವಾ ತುಂತುರು ಮಳೆಯ ಸಾಧ್ಯತೆ ಇದೆ. ಸೆಪ್ಟೆಂಬರ್ 4ರಿಂದ ಮಲೆನಾಡು ಜಿಲ್ಲೆಗಳಲ್ಲೂ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ ಲಕ್ಷಣಗಳಿವೆ.

ಉತ್ತರ ಒಳನಾಡಿನಲ್ಲಿ ಅಲ್ಲಲ್ಲಿ ಮಳೆ :  ಗದಗ ಮತ್ತು ಹಾವೇರಿ ಜಿಲ್ಲೆಗಳ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದ್ದು, ಉಳಿದ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಮೋಡದ ವಾತಾವರಣ ಇರಬಹುದು. ಆದರೆ ಮುಂದಿನ 10 ದಿನಗಳ ಅವಧಿಯಲ್ಲಿ ಉತ್ತರ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿಯುವ ಸೂಚನೆಗಳಿವೆ.

ದಕ್ಷಿಣ ಒಳನಾಡಿನಲ್ಲಿ ಕೆಲವೆಡೆ ಸಾಮಾನ್ಯ ಮಳೆ : ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ತುಮಕೂರು ಹಾಗೂ ದಾವಣಗೆರೆ ಜಿಲ್ಲೆಗಳ ಒಂದೆರಡು ಕಡೆ ಸಾಮಾನ್ಯ ಮಳೆಯಾಗುವ ಸಾಧ್ಯತೆ ಇದೆ. ಉಳಿದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು. ಮುಂದಿನ 10 ದಿನಗಳಲ್ಲೂ ದಕ್ಷಿಣ ಒಳನಾಡಿನ ಹಲವು ಭಾಗಗಳಲ್ಲಿ ಮಳೆಯ ಸಾಧ್ಯತೆ ಹಾಗೂ ಕೆಲವೆಡೆ ಗುಡುಗಿನ ಸಾಧ್ಯತೆ ಮುಂದುವರಿಯಲಿದೆ.

ವಾಯುಭಾರ ಕುಸಿತದ ಪ್ರಭಾವವೂ ಕಡಿಮೆಯಾಗುವ ಸಾಧ್ಯತೆ :  ಬಾಂಗ್ಲಾದೇಶ ಕರಾವಳಿಯಲ್ಲಿ ರೂಪುಗೊಂಡಿದ್ದ ವಾಯುಭಾರ ಕುಸಿತವು ಒಡಿಶಾ, ಛತ್ತೀಸಗಢ, ಜಾರ್ಖಂಡ್, ಬಿಹಾರ, ಮಧ್ಯಪ್ರದೇಶ ಹಾಗೂ ಉತ್ತರ ಪ್ರದೇಶದತ್ತ ಸಾಗಿದ್ದು, ಈ ರಾಜ್ಯಗಳಲ್ಲಿ ಉತ್ತಮ ಮಳೆಯಾಗುವ ಮುನ್ಸೂಚನೆ ಇದೆ.

ವಾಯುಭಾರ ಕುಸಿತ ಕ್ರಮೇಣ ಶಿಥಿಲಗೊಳ್ಳುತ್ತಿದ್ದಂತೆ ಕರ್ನಾಟಕದಲ್ಲೂ ಮಳೆಯ ಪ್ರಮಾಣ ಮತ್ತಷ್ಟು ಕಡಿಮೆಯಾಗುವ ಸಾಧ್ಯತೆ ಇದೆ.

ರೈತರಿಗೆ ಸೂಚನೆ: ಮುಂದಿನ ದಿನಗಳಲ್ಲಿ ನಿರಂತರ ಮಳೆಯ ಬದಲು ಬಿಡುವಿನ ಅವಧಿ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ತೋಟದ ನಿರ್ವಹಣಾ ಚಟುವಟಿಕೆಗಳನ್ನು ಸ್ಥಳೀಯ ಮಳೆಯ ಸ್ಥಿತಿಯನ್ನು ಗಮನಿಸಿಕೊಂಡು ಯೋಜಿಸುವುದು ಸೂಕ್ತ.

Karnataka is likely to see reduced rainfall intensity in the coming days. Coastal and Malnad districts may experience more sunshine with occasional clouds and light showers, while parts of North and South Interior Karnataka may continue to receive isolated rain and thunderstorms over the next 10 days. From September 4, rainfall is expected to reduce further across the Coastal and Malnad regions as the low-pressure system over eastern and central India weakens.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬರದ ನಡುವೆ ರೈತರ ಜಮೀನಿಗೆ ಸಿಎಂ ಭೇಟಿ – ಬೆಳೆ ಹಾನಿ ಪರಿಶೀಲನೆ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗದಗ ಜಿಲ್ಲೆಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ…

7 minutes ago

ಬೆಂಗಳೂರಿನಲ್ಲಿ ಭಾರತದ ಅತಿದೊಡ್ಡ ಕಾಫಿ ಉತ್ಸವ- ತೋಟದಿಂದ ಕಪ್‌ವರೆಗೆ ಭಾರತದ ಕಾಫಿಯ ಹೊಸ ಪಯಣ

ಭಾರತದ ಅತಿದೊಡ್ಡ ಕಾಫಿ ಉತ್ಸವ 2027 ಫೆಬ್ರವರಿ 26ರಿಂದ 28ರವರೆಗೆ ಬೆಂಗಳೂರಿನಲ್ಲಿ ನಡೆಯಲಿದ್ದು,…

8 hours ago

‘ಅರ್ಥ’ ಮತ್ತು ‘ಅಪಾರ್ಥ’ದ ನಡುವೆ ಇರುವ ‘ಪಾ’ ಯಾವುದು?

ಅಪಾರ್ಥವಾಗುವುದು ಮಾನವ ಸಹಜ; ಆದರೆ ಅಪಾರ್ಥವಾಯಿತೆಂಬ ಅರಿವು ಬಂದ ನಂತರ ಮತ್ತೆ ‘ಅರ್ಥ’ದೆಡೆಗೆ…

8 hours ago

ಹವಾಮಾನ ವರದಿ | 31-08-2026 | ಸೆ.3ರಿಂದ ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಸದ್ಯ ವ್ಯಾಪಕ ಭಾರಿ ಮಳೆಯ ಸಾಧ್ಯತೆ ಕಡಿಮೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10…

1 day ago

ತೆಂಗು–ಅಡಿಕೆ ನಡುವೆ ಏಲಕ್ಕಿ, ಮೆಣಸು, ಅರಿಶಿಣ | ತುಮಕೂರಿನಲ್ಲೂ ಬೆಳೆಗಾರರು ಪರ್ಯಾಯ ಆದಾಯದ ಕಡೆಗೆ ಹೆಜ್ಜೆ

ತೆಂಗು–ಅಡಿಕೆ ತೋಟಗಳ ನಡುವೆ ಅರಿಶಿಣ, ಏಲಕ್ಕಿ, ಮೆಣಸು ಬೆಳೆದು ತುಮಕೂರು ಜಿಲ್ಲೆಯ ರೈತರು…

2 days ago

ಮಳೆ ಕೊರತೆ ನೀಗಿಸಲು ಕರ್ನಾಟಕದಲ್ಲಿ ಮೋಡ ಬಿತ್ತನೆ

ಮುಂಗಾರು ಮಳೆಯ ಕೊರತೆ ಎದುರಿಸುತ್ತಿರುವ ರಾಜ್ಯದ ಹಲವು ಭಾಗಗಳಲ್ಲಿ ಮಳೆ ಹೆಚ್ಚಿಸಲು ಸರ್ಕಾರ…

2 days ago