ಹವಾಮಾನ ವರದಿ | 28-09-2026 | ಮುಂಗಾರು ಹಿಂದೆ ಸರಿಯುತ್ತಿದ್ದರೂ ಮಳೆ ಇನ್ನೂ ಮುಗಿದಿಲ್ಲ

September 28, 2026
11:34 AM
ಮುಂಗಾರು ಹಿಂದೆ ಸರಿಯುವ ಪ್ರಕ್ರಿಯೆ ಆರಂಭವಾಗಿದ್ದರೂ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇನ್ನೂ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಕರಾವಳಿ–ಮಲೆನಾಡಿನಲ್ಲಿ ಮುಂದಿನ 10 ದಿನ ಹಾಗೂ ದಕ್ಷಿಣ ಒಳನಾಡಿನಲ್ಲಿ ಅಕ್ಟೋಬರ್ 6ರವರೆಗೆ ಮಳೆಯ ಸಾಧ್ಯತೆ ಇದೆ.

ಕರ್ನಾಟಕದಲ್ಲಿ ಮುಂಗಾರು ಹಿಂದೆ ಸರಿಯುವ ಪ್ರಕ್ರಿಯೆ ಆರಂಭವಾಗಿದ್ದರೂ, ರಾಜ್ಯದ ಹಲವು ಭಾಗಗಳಲ್ಲಿ ಮುಂದಿನ 10 ದಿನಗಳವರೆಗೂ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಸಾಧ್ಯತೆಗಳು ಮುಂದುವರಿಯುವ ಮುನ್ಸೂಚನೆ ಇದೆ. ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಸಂಜೆ ವೇಳೆ ಗುಡುಗು ಮಳೆಯ ಸಾಧ್ಯತೆ ಇದ್ದರೆ, ದಕ್ಷಿಣ ಒಳನಾಡಿನಲ್ಲಿ ಅಕ್ಟೋಬರ್ 6ರವರೆಗೆ ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆಯಿದೆ.

ಕರಾವಳಿ ಕರ್ನಾಟಕ :  ಕಾಸರಗೋಡು ಜಿಲ್ಲೆಯಲ್ಲಿ ಬಿಸಿಲು ಹಾಗೂ ಭಾರಿ ಸೆಖೆಯ ವಾತಾವರಣದೊಂದಿಗೆ ಅಲ್ಲಲ್ಲಿ ಮೋಡ ಕವಿಯುವ ಸಾಧ್ಯತೆ ಇದೆ. ಪೂರ್ವದ ಗಾಳಿಯ ಪ್ರಭಾವ ಹೆಚ್ಚಾದರೆ ಮಾತ್ರ ಒಂದೆರಡು ಕಡೆ ಗುಡುಗು ಸಹಿತ ಸಾಮಾನ್ಯ ಮಳೆ ಬೀಳುವ ಸಾಧ್ಯತೆಯಿದೆ.

ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿಸಿಲು–ಸೆಖೆಯ ನಡುವೆ ಮೋಡದ ವಾತಾವರಣ ಇರಲಿದೆ. ಸಂಜೆ ವೇಳೆಯಲ್ಲಿ ಘಟ್ಟದ ಕೆಳಭಾಗದ ಪ್ರದೇಶಗಳ ಸುತ್ತಮುತ್ತ ಗುಡುಗು ಸಹಿತ ಮಳೆಯ ಸಾಧ್ಯತೆ ಇದೆ. ಉಳಿದ ಪ್ರದೇಶಗಳಲ್ಲಿ ಗಾಳಿಯ ಪ್ರಭಾವ ಹೆಚ್ಚಾದರೆ ಮಾತ್ರ ಮಳೆಯಾಗುವ ಸಾಧ್ಯತೆಯಿದೆ. ಪ್ರಸ್ತುತ ಮುನ್ಸೂಚನೆಯಂತೆ ಕರಾವಳಿ ಜಿಲ್ಲೆಗಳಲ್ಲಿ ಮುಂದಿನ 10 ದಿನಗಳವರೆಗೂ ಮಳೆಯ ಸಾಧ್ಯತೆ ಕಾಣಿಸುತ್ತಿದೆ.

ಮಲೆನಾಡು : ಕೊಡಗು, ಹಾಸನದ ಸಕಲೇಶಪುರ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಬಿಸಿಲಿನ ನಡುವೆ ಅಲ್ಲಲ್ಲಿ ಮೋಡದ ವಾತಾವರಣ ಇರಲಿದೆ. ಸಂಜೆ ವೇಳೆಯಲ್ಲಿ ಕೆಲವು ಕಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.  ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಮಲೆನಾಡು ಪ್ರದೇಶಗಳಲ್ಲಿ ಮಳೆಯ ಸಾಧ್ಯತೆ ತುಸು ಹೆಚ್ಚಿರಬಹುದು.  ಮಲೆನಾಡು ಜಿಲ್ಲೆಗಳಲ್ಲಿಯೂ ಪ್ರಸ್ತುತ ಮುನ್ಸೂಚನೆಯಂತೆ ಮುಂದಿನ 10 ದಿನಗಳವರೆಗೆ ಗುಡುಗು ಮಳೆಯ ಸಾಧ್ಯತೆ ಮುಂದುವರಿಯಲಿದೆ.

ಉತ್ತರ ಒಳನಾಡು : ಹಾವೇರಿ, ಧಾರವಾಡ ಹಾಗೂ ಬಳ್ಳಾರಿ ಜಿಲ್ಲೆಗಳ ಒಂದೆರಡು ಕಡೆ ಸಂಜೆ ವೇಳೆ ಗುಡುಗು ಸಹಿತ ಮಳೆಯ ಸಾಧ್ಯತೆ ಇದೆ. ಉಳಿದ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಇರಲಿದೆ.  ಸೆಪ್ಟೆಂಬರ್ 29ರಂದು ಉತ್ತರ ಕನ್ನಡ ಮತ್ತು ಶಿವಮೊಗ್ಗ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಉತ್ತರ ಒಳನಾಡಿನ ಪ್ರದೇಶಗಳಲ್ಲಿ ಮಳೆಯ ಸಾಧ್ಯತೆ ಕಂಡುಬರುತ್ತಿದೆ. ನಂತರ ಉತ್ತರ ಒಳನಾಡಿನಲ್ಲಿ ಮಳೆಯ ಸಾಧ್ಯತೆಗಳು ಕಡಿಮೆಯಾಗುವ ಮುನ್ಸೂಚನೆ ಇದೆ.

 ದಕ್ಷಿಣ ಒಳನಾಡು :  ತುಮಕೂರು ಜಿಲ್ಲೆಯ ಪಾವಗಡ ಸೇರಿದಂತೆ ಕೆಲವು ಕಡೆ ಈಗಾಗಲೇ ಮಳೆ ಆರಂಭವಾಗಿದೆ. ಇಂದು ಮಧ್ಯಾಹ್ನದ ನಂತರ ಹಾಗೂ ಸಂಜೆ ವೇಳೆಯಲ್ಲಿ ದಕ್ಷಿಣ ಒಳನಾಡಿನ ಹೆಚ್ಚಿನ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಸಾಧ್ಯತೆ ಇದೆ. ಪ್ರಸ್ತುತ ಮುನ್ಸೂಚನೆಯಂತೆ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಅಕ್ಟೋಬರ್ 6ರವರೆಗೆ ಗುಡುಗು ಸಹಿತ ಮಳೆಯ ಸಾಧ್ಯತೆ ಇದೆ.

ಬಂಗಾಳಕೊಲ್ಲಿ ವ್ಯವಸ್ಥೆ ದುರ್ಬಲ :  ಬಂಗಾಳಕೊಲ್ಲಿಯ ಥೈಲ್ಯಾಂಡ್ ಮತ್ತು ಮ್ಯಾನ್ಮಾರ್ ಕರಾವಳಿ ಭಾಗದಲ್ಲಿ ಉಂಟಾಗಿದ್ದ ವಾಯುಭಾರ ಕುಸಿತ ಈಗಾಗಲೇ ಶಿಥಿಲಗೊಳ್ಳುತ್ತಿದೆ. ಅರಬ್ಬಿ ಸಮುದ್ರದ ಕಡೆಯಿಂದ ಶ್ರೀಲಂಕಾ ಹಾಗೂ ತಮಿಳುನಾಡು ಕರಾವಳಿ ಮೂಲಕ ರಾಜ್ಯದತ್ತ ಗಾಳಿ ಪ್ರವೇಶಿಸುತ್ತಿರುವುದು ಸದ್ಯದ ಮಳೆಯ ವಾತಾವರಣಕ್ಕೆ ಒಂದು ಕಾರಣವಾಗಿದೆ. ಹಿಂಗಾರು ಮಾರುತಗಳು ಇನ್ನಷ್ಟೇ ಆರಂಭವಾಗಬೇಕಿದೆ.

ಮುಂಗಾರು ಹಿಂದೆ ಸರಿಯುವ ಪ್ರಕ್ರಿಯೆ ಈಗಾಗಲೇ ಆರಂಭವಾಗಿದೆ. ಆದರೆ ಕರ್ನಾಟಕದಲ್ಲಿ ಅದರ ಅಧಿಕೃತ ಹಿಂತೆಗೆತ ಅಕ್ಟೋಬರ್ 15ರ ಸುಮಾರಿಗೆ ನಡೆಯುವ ಸಾಧ್ಯತೆ ಇದೆ.

ರೈತರು ಗಮನಿಸಬೇಕಾದದ್ದು :  ಈಗ ರಾಜ್ಯದ ಎಲ್ಲ ಭಾಗಗಳಲ್ಲೂ ನಿರಂತರ ಮಳೆ ಬೀಳುವ ಪರಿಸ್ಥಿತಿ ಇಲ್ಲ. ಬದಲಾಗಿ ಬಿಸಿಲಿನ ನಡುವೆ ಸ್ಥಳೀಯವಾಗಿ ಮೋಡ ಕವಿದು, ಮಧ್ಯಾಹ್ನ ಅಥವಾ ಸಂಜೆ ಗುಡುಗು ಸಹಿತ ಮಳೆ ಬೀಳುವ ಮಾದರಿ ಮುಂದುವರಿಯುವ ಸಾಧ್ಯತೆ ಹೆಚ್ಚು. ಹೀಗಾಗಿ ಗುಡುಗು ಸಹಿತ ಮಳೆಯ ಸಂದರ್ಭದಲ್ಲಿ ತೆರೆದ ಪ್ರದೇಶಗಳಲ್ಲಿ ಕೆಲಸ ಮಾಡುವುದನ್ನು ತಪ್ಪಿಸುವುದು, ವಿದ್ಯುತ್ ಉಪಕರಣಗಳು ಮತ್ತು ಕೃಷಿ ಯಂತ್ರೋಪಕರಣಗಳನ್ನು ಸುರಕ್ಷಿತವಾಗಿ ಇಡುವುದು ಅಗತ್ಯ.  ಸ್ಥಳೀಯ ಗುಡುಗು ಮಳೆಯ ಸಾಧ್ಯತೆ ಮುಂದುವರಿಯುತ್ತಿರುವುದರಿಂದ ರೈತರು ದಿನನಿತ್ಯದ ಮುನ್ಸೂಚನೆಯನ್ನು ಗಮನಿಸುವುದು ಮುಖ್ಯ.

ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ-ಹವಾಮಾನ ಬದಲಾವಣೆ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಫಾಲೋಮಾಡಲು ಇಲ್ಲಿ ಕ್ಲಿಕ್‌ ಮಾಡಿ

Karnataka is likely to continue experiencing localized thunderstorms over the next several days even as the southwest monsoon withdrawal process has begun. Coastal and Malnad districts may receive evening thunderstorms for up to around 10 days, while southern interior Karnataka could see thunderstorm activity until October 6. Northern interior Karnataka is expected to remain comparatively drier, except for isolated rainfall around September 29. The current weather pattern is partly influenced by winds arriving from the Arabian Sea through the Sri Lankan and Tamil Nadu coastal regions, while the northeast monsoon is yet to begin.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಸದ್ಯಕ್ಕೆ ರಾಜ್ಯದಲ್ಲಿ ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ- ಸಚಿವ ಜಾರ್ಜ್ ಸ್ಪಷ್ಟನೆ
September 28, 2026
11:19 AM
by: ದ ರೂರಲ್ ಮಿರರ್.ಕಾಂ
ಸೂಪರ್ ಎಲ್ ನಿನೋ ಆತಂಕ – ಫೆಬ್ರವರಿವರೆಗೆ 4.51 ಲಕ್ಷ ತಾಪಮಾನ ಸಂಬಂಧಿ ಸಾವುಗಳ ಅಂದಾಜು
September 28, 2026
10:46 AM
by: ದ ರೂರಲ್ ಮಿರರ್.ಕಾಂ
ಬದುಕಿನ ಬ್ಯಾಗೇಜು
September 28, 2026
7:26 AM
by: ದ ರೂರಲ್ ಮಿರರ್.ಕಾಂ
ಬ್ಯಾಂಕ್‌ ಮುಷ್ಕರ ಮುಂದೂಡಿಕೆ – ಇಂದು ಎಂದಿನಂತೆ ಬ್ಯಾಂಕ್‌ ಸೇವೆ
September 28, 2026
6:44 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror