ಹವಾಮಾನ ವರದಿ | 31-08-2026 | ಸೆ.3ರಿಂದ ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ

August 31, 2026
2:46 PM
ಕರ್ನಾಟಕದಲ್ಲಿ ಸದ್ಯ ವ್ಯಾಪಕ ಭಾರಿ ಮಳೆಯ ಸಾಧ್ಯತೆ ಕಡಿಮೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10 ದಿನಗಳಲ್ಲೂ ಅಲ್ಲಲ್ಲಿ ಸಣ್ಣ ಅವಧಿಯ ಮಳೆ ಮುಂದುವರಿಯುವ ಸಾಧ್ಯತೆಯಿದೆ. ಸೆ.2ರಿಂದ ಉತ್ತರ ಒಳನಾಡಿನ ಕೆಲವು ಜಿಲ್ಲೆಗಳು, ಸೆ.3ರಿಂದ ದಕ್ಷಿಣ ಒಳನಾಡು ಹಾಗೂ ಸೆ.5ರಿಂದ ಮಲೆನಾಡಿನಲ್ಲಿ ಮಳೆ ಚಟುವಟಿಕೆ ಹೆಚ್ಚಾಗುವ ಸಾಧ್ಯತೆಯಿದೆ.

01.09.2026ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆ

ಕರಾವಳಿ ಕರ್ನಾಟಕ : ಕಾಸರಗೋಡು ಸೇರಿದಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಬಿಸಿಲು, ಅಲ್ಲಲ್ಲಿ ಮೋಡದ ವಾತಾವರಣ ಇರಲಿದ್ದು, ದಿನದ ಅವಧಿಯಲ್ಲಿ ಒಂದೆರಡು ಕಡೆ ಸಣ್ಣ ಅವಧಿಯ ಸಾಮಾನ್ಯ ಮಳೆ ಸಾಧ್ಯತೆಯಿದೆ. ಘಟ್ಟದ ಕೆಳಭಾಗದ ಪ್ರದೇಶಗಳಲ್ಲಿ ತುಸು ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ.

ಸದ್ಯದ ಮುನ್ಸೂಚನೆಯಂತೆ ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯ ಸಾಧ್ಯತೆ ಕಡಿಮೆ. ಮುಂದಿನ 10 ದಿನಗಳಲ್ಲಿಯೂ ಅಲ್ಲಲ್ಲಿ ದಿನಕ್ಕೆ ಒಂದೆರಡು ಬಾರಿ ಸಣ್ಣ ಅವಧಿಯ ಮಳೆಯಾಗುವ ಸಾಧ್ಯತೆ ಮುಂದುವರಿಯಲಿದೆ.

ಮಲೆನಾಡು :ಕೊಡಗು, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಕರಾವಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಒಂದೆರಡು ಸಾಮಾನ್ಯ ಮಳೆ ಸಾಧ್ಯತೆಯಿದೆ. ಸಕಲೇಶಪುರ ಸೇರಿದಂತೆ ಮಲೆನಾಡಿನ ಇತರ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡ ಇರಬಹುದು.

ಸದ್ಯದ ಮುನ್ಸೂಚನೆಯ ಪ್ರಕಾರ ಸೆಪ್ಟೆಂಬರ್ 5ರಿಂದ ಮಲೆನಾಡಿನ ಅಲ್ಲಲ್ಲಿ ಮಳೆ ಆರಂಭವಾಗುವ ಸಾಧ್ಯತೆ ಇದೆ. ಆದರೆ ಇನ್ನೂ ಕೆಲವು ದಿನಗಳಿರುವುದರಿಂದ ಮುನ್ಸೂಚನೆಯಲ್ಲಿ ಬದಲಾವಣೆ ಸಾಧ್ಯ.

ಉತ್ತರ ಒಳನಾಡು : ಉತ್ತರ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಇರಲಿದೆ.

ಸದ್ಯದ ಮುನ್ಸೂಚನೆಯಂತೆ ಸೆಪ್ಟೆಂಬರ್ 2ರಿಂದ ಬೆಳಗಾವಿ, ಧಾರವಾಡ, ಹಾವೇರಿ, ಬಾಗಲಕೋಟೆ ಹಾಗೂ ಗದಗ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಸಾಧ್ಯತೆ ಇದೆ. ಉಳಿದ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಮುಂದಿನ 10 ದಿನಗಳವರೆಗೆ ಗಮನಾರ್ಹ ಮಳೆಯ ಸಾಧ್ಯತೆ ಕಂಡುಬರುತ್ತಿಲ್ಲ.

ದಕ್ಷಿಣ ಒಳನಾಡು : ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ಸುತ್ತಮುತ್ತ ಪ್ರದೇಶಗಳಲ್ಲಿ ಮಧ್ಯಾಹ್ನದ ನಂತರ ಒಂದೆರಡು ಕಡೆ ಸಾಮಾನ್ಯ ಮಳೆ ಸಾಧ್ಯತೆಯಿದೆ. ಉಳಿದ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದೊಂದಿಗೆ ಒಂದೆರಡು ಕಡೆ ತುಂತುರು ಮಳೆ ಸಾಧ್ಯತೆ ಇದೆ.

ಸದ್ಯದ ಮುನ್ಸೂಚನೆಯಂತೆ ಸೆಪ್ಟೆಂಬರ್ 3ರಿಂದ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆ ಆರಂಭವಾಗುವ ಸಾಧ್ಯತೆಯಿದೆ.

ವಾಯುಭಾರ ಕುಸಿತದ ಪರಿಣಾಮ : ಪಶ್ಚಿಮ ಬಂಗಾಳ ಕರಾವಳಿಯಲ್ಲಿರುವ ವಾಯುಭಾರ ಕುಸಿತದ ಪರಿಣಾಮ ಪಶ್ಚಿಮ ಬಂಗಾಳ, ಒಡಿಶಾ, ಜಾರ್ಖಂಡ್, ಮಧ್ಯಪ್ರದೇಶ, ಛತ್ತೀಸ್‌ಗಢ, ಬಿಹಾರ ಹಾಗೂ ಉತ್ತರ ಪ್ರದೇಶಗಳಲ್ಲಿ ಉತ್ತಮ ಮಳೆಯ ಸಾಧ್ಯತೆ ಇದೆ.

ಆದರೆ ಈ ವ್ಯವಸ್ಥೆಯ ಪರಿಣಾಮ ಕರ್ನಾಟಕದಲ್ಲಿ ಸದ್ಯಕ್ಕೆ ಅಷ್ಟಾಗಿ ಗೋಚರಿಸುತ್ತಿಲ್ಲ. ರಾಜ್ಯದಲ್ಲಿ ಮುಂದಿನ ಕೆಲವು ದಿನಗಳಲ್ಲಿ ಪ್ರಾದೇಶಿಕವಾಗಿ ಸಣ್ಣ ಪ್ರಮಾಣದ ಮಳೆಯೇ ಹೆಚ್ಚು ಕಂಡುಬರುವ ಸಾಧ್ಯತೆಯಿದೆ.

 ರೈತರಿಗೆ ಸೂಚನೆ :  ಕರಾವಳಿಯಲ್ಲಿ ಸದ್ಯ ಭಾರಿ ಮಳೆಯ ಆತಂಕ ಕಡಿಮೆ. ಮಲೆನಾಡಿನಲ್ಲಿ ಸೆ.5ರಿಂದ ಹಾಗೂ ದಕ್ಷಿಣ ಒಳನಾಡಿನಲ್ಲಿ ಸೆ.3ರಿಂದ ಮಳೆಯ ಚಟುವಟಿಕೆ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಮುಂದಿನ ದಿನಗಳ ಮುನ್ಸೂಚನೆಯನ್ನು ಗಮನಿಸುವುದು ಅಗತ್ಯ. ಉತ್ತರ ಒಳನಾಡಿನಲ್ಲೂ ಸೆ.2ರಿಂದ ಕೆಲವು ಜಿಲ್ಲೆಗಳಲ್ಲಿ ಮಳೆ ಕಾಣಿಸಿಕೊಳ್ಳುವ ಸಾಧ್ಯತೆಯಿದೆ.

Karnataka is unlikely to receive widespread heavy rainfall in the immediate period. Coastal districts may see occasional light showers, while rainfall activity could increase in parts of North Interior Karnataka from September 2, South Interior Karnataka from September 3 and Malnad from September 5.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಹವಾಮಾನ ವರದಿ |13-09-2026 | ಕರ್ನಾಟಕದಲ್ಲಿ ಮಳೆ ಮತ್ತೆ ಹಂತ ಹಂತವಾಗಿ ಚುರುಕಾಗಬಹುದೇ?
September 13, 2026
12:16 PM
by: ಸಾಯಿಶೇಖರ್ ಕರಿಕಳ
ರೈತರ ಆದಾಯ ಹೆಚ್ಚಿಸಲು ಬಹುಬೆಳೆ, ಪಶುಸಂಗೋಪನೆ, ಮೀನುಗಾರಿಕೆಗೆ ಒತ್ತು
September 13, 2026
8:13 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 12.09.2026 | ಸೆ.15ರಿಂದ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು? ಕರಾವಳಿ–ಮಲೆನಾಡಿನಲ್ಲಿ ಸದ್ಯ ಬಿಸಿಲಿನ ವಾತಾವರಣ
September 12, 2026
12:52 PM
by: ಸಾಯಿಶೇಖರ್ ಕರಿಕಳ
ಹಸುವಿನ ಹಾಲಿಗೆ ಬದಲಾಗಿ ‘ಲ್ಯಾಬ್‌ ಹಾಲು’ – ಇನ್ನು ಕೇವಲ ವಿಜ್ಞಾನಕಲ್ಪನೆ ಅಲ್ಲ..! ಹೊಸ ಅಧ್ಯಯನದ ಲೆಕ್ಕಾಚಾರ
September 12, 2026
7:30 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror