Advertisement
ವೆದರ್ ಮಿರರ್

ಹವಾಮಾನ ವರದಿ | 02-09-2026 | ಉತ್ತರ ಭಾರತದ ವಾಯುಭಾರ ಕುಸಿತ ದುರ್ಬಲವಾಗುವ ಸಾಧ್ಯತೆ

Share

ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯ ಸಾಧ್ಯತೆಯಿದ್ದರೂ, ಜೋರು ಮಳೆಯ ಸಾಧ್ಯತೆ ಕಡಿಮೆಯಿದೆ. ಮಲೆನಾಡಿನಲ್ಲಿ ಸೆ.5 ಅಥವಾ 6 ರಿಂದ ಮತ್ತೆ 4–5 ದಿನ ಮಳೆಯ ಲಕ್ಷಣಗಳಿದ್ದು, ಉತ್ತರ ಮತ್ತು ದಕ್ಷಿಣ ಒಳನಾಡಿನಲ್ಲಿ ಸೆ.9ರವರೆಗೆ ಅಲ್ಲಲ್ಲಿ ಮಳೆ ಮುಂದುವರಿಯುವ ಮುನ್ಸೂಚನೆ ಇದೆ.

Advertisement

ಕರಾವಳಿಯಲ್ಲಿ ಜೋರು ಮಳೆ ಸಾಧ್ಯತೆ ಕಡಿಮೆ : ಕಾಸರಗೋಡು ಸೇರಿದಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಸೆ.3ರ ಬೆಳಿಗ್ಗೆ 8 ಗಂಟೆವರೆಗೆ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಒಂದೆರಡು ತುಂತುರು ಮಳೆಯ ಸಾಧ್ಯತೆ ಇದೆ. ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಸಣ್ಣ ಅವಧಿಯ ಸಾಮಾನ್ಯ ಮಳೆಯಾಗುವ ಸಾಧ್ಯತೆಗಳಿವೆ. ಈಗಿನ ಮುನ್ಸೂಚನೆಯಂತೆ ಕರಾವಳಿ ಜಿಲ್ಲೆಗಳಲ್ಲಿ ಜೋರು ಮಳೆಯ ಸಾಧ್ಯತೆ ಕಡಿಮೆಯಿದ್ದು, ಮುಂದಿನ ಎರಡು ದಿನಗಳ ಕಾಲ ಹಗಲಿನಲ್ಲಿ ಅಲ್ಲಲ್ಲಿ ಒಂದೆರಡು ಸುತ್ತು ಸಾಮಾನ್ಯ ಮಳೆಯಾಗಬಹುದು. ನಂತರ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ ಸಾಧ್ಯತೆಯಿದೆ.

ಮಲೆನಾಡಿನಲ್ಲಿ ಸೆ.5–6ರಿಂದ ಮಳೆ ಹೆಚ್ಚಳದ ಲಕ್ಷಣ :  ಕೊಡಗು, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಕರಾವಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಉಳಿದ ಮಲೆನಾಡು ಪ್ರದೇಶಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು.  ಮುಂದಿನ 2–3 ದಿನ ಇದೇ ರೀತಿಯ ವಾತಾವರಣ ಮುಂದುವರಿಯುವ ಸಾಧ್ಯತೆಯಿದ್ದು, ಸೆಪ್ಟೆಂಬರ್ 5 ಅಥವಾ 6ರಿಂದ ಮುಂದಿನ 4–5 ದಿನಗಳ ಕಾಲ ಮತ್ತೆ ಮಳೆಯ ಚಟುವಟಿಕೆ ಹೆಚ್ಚಾಗುವ ಲಕ್ಷಣಗಳಿವೆ.

ಉತ್ತರ ಒಳನಾಡಿನಲ್ಲಿ ಸೆ.9ರವರೆಗೆ ಮಳೆ ಸಾಧ್ಯತೆ :  ಬೆಳಗಾವಿ, ಹಾವೇರಿ, ಧಾರವಾಡ, ಗದಗ, ಬಾಗಲಕೋಟೆ, ವಿಜಯಪುರ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಹಾಗೂ ಬೀದರ್ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಉಳಿದ ಪ್ರದೇಶಗಳಲ್ಲಿ ಮೋಡ ಕವಿದ ವಾತಾವರಣದೊಂದಿಗೆ ಅಲ್ಲಲ್ಲಿ ತುಂತುರು ಮಳೆಯಾಗುವ ಸಾಧ್ಯತೆಯಿದೆ. ಈಗಿನ ಮುನ್ಸೂಚನೆಯ ಪ್ರಕಾರ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 9ರವರೆಗೆ ಅಲ್ಲಲ್ಲಿ ಮಳೆ ಮುಂದುವರಿಯುವ ಲಕ್ಷಣಗಳಿವೆ.

ದಕ್ಷಿಣ ಒಳನಾಡಿನಲ್ಲೂ ಸೆ.9ರವರೆಗೆ ಮಳೆ : ಮೈಸೂರು, ಹಾಸನ, ಬೆಂಗಳೂರು ಉತ್ತರ, ಚಿಕ್ಕಬಳ್ಳಾಪುರ, ತುಮಕೂರು, ದಾವಣಗೆರೆ ಹಾಗೂ ವಿಜಯನಗರ ಜಿಲ್ಲೆಗಳ ಒಂದೆರಡು ಕಡೆ ಸಾಮಾನ್ಯ ಮಳೆಯ ಸಾಧ್ಯತೆ ಇದೆ. ಚಾಮರಾಜನಗರದ ಗುಂಡ್ಲುಪೇಟೆ ಸುತ್ತಮುತ್ತಲಿನ ಪ್ರದೇಶಗಳಲ್ಲೂ ಮಳೆಯ ಮುನ್ಸೂಚನೆ ಇದ್ದು, ಅಲ್ಲಲ್ಲಿ ಗುಡುಗು ಸಹಿತ ಮಳೆಯ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲೂ ಈಗಿನ ಮುನ್ಸೂಚನೆಯಂತೆ ಸೆಪ್ಟೆಂಬರ್ 9ರವರೆಗೆ ಅಲ್ಲಲ್ಲಿ ಮಳೆಯಾಗುವ ಲಕ್ಷಣಗಳಿವೆ.

ಉತ್ತರ ಭಾರತದ ವಾಯುಭಾರ ಕುಸಿತ ದುರ್ಬಲವಾಗುವ ಸಾಧ್ಯತೆ : ಉತ್ತರ ಭಾರತದ ಭಾಗದಲ್ಲಿದ್ದ ವಾಯುಭಾರ ಕುಸಿತದಂತಹ ಹವಾಮಾನ ವ್ಯವಸ್ಥೆ ಉತ್ತರ ಪ್ರದೇಶ ತಲುಪಿದೆ. ಮುಂದಿನ ಎರಡು ದಿನಗಳಲ್ಲಿ ಈ ವ್ಯವಸ್ಥೆ ಶಿಥಿಲಗೊಳ್ಳುವ ಲಕ್ಷಣಗಳಿವೆ.

ರೈತru ಗಮನಿಸಿ: ಕರಾವಳಿಯಲ್ಲಿ ಸದ್ಯ ಜೋರು ಮಳೆಯ ಸಾಧ್ಯತೆ ಕಡಿಮೆಯಿದ್ದರೂ, ಸ್ಥಳೀಯವಾಗಿ ಸಾಮಾನ್ಯ ಮಳೆ ಬೀಳಬಹುದು. ಮಲೆನಾಡಿನಲ್ಲಿ ಸೆ.5–6ರ ಬಳಿಕ ಮಳೆಯ ಚಟುವಟಿಕೆ ಹೆಚ್ಚಾಗುವ ಸಾಧ್ಯತೆಯಿರುವುದರಿಂದ  ಕೃಷಿ ಚಟುವಟಿಕೆಗಳನ್ನು ಕೈಗೊಳ್ಳುವವರು ಸ್ಥಳೀಯ ಮಳೆ ಮುನ್ಸೂಚನೆಯನ್ನು ಗಮನಿಸುವುದು ಸೂಕ್ತ.

Coastal Karnataka is likely to see mostly sunny and cloudy conditions with occasional light to moderate showers, while the possibility of heavy rain remains low. Rainfall activity may increase again in the Malnad region from September 5–6, while parts of North and South Interior Karnataka may continue to receive scattered rain until around September 9.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಕೃಷಿಗೆ ಸಾಲ ಹೆಚ್ಚಿಸಿ – ಅಲ್ಪಾವಧಿ ಮಾತ್ರವಲ್ಲ, ದೀರ್ಘಾವಧಿ ಸಾಲವೂ ಬೇಕು – ಬ್ಯಾಂಕ್‌ಗಳಿಗೆ ನಿರ್ಮಲಾ ಸೀತಾರಾಮನ್ ಸೂಚನೆ

ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್‌ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…

7 hours ago

E20 ಎಫೆಕ್ಟ್‌ – ಪಶು ಆಹಾರದ ಬೆಲೆ ಏರಿಕೆ, ಹೈನುಗಾರರ ಲೆಕ್ಕಾಚಾರವೇ ಬದಲು..!

E20 ನೀತಿಯಡಿ ಎಥನಾಲ್ ಉತ್ಪಾದನೆಗೆ ಜೋಳ ಸೇರಿದಂತೆ ಧಾನ್ಯಗಳ ಬೇಡಿಕೆ ಹೆಚ್ಚುತ್ತಿರುವ ನಡುವೆ…

16 hours ago

ಬರದ ನಡುವೆ ರೈತರ ಜಮೀನಿಗೆ ಸಿಎಂ ಭೇಟಿ – ಬೆಳೆ ಹಾನಿ ಪರಿಶೀಲನೆ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗದಗ ಜಿಲ್ಲೆಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ…

24 hours ago

ಹವಾಮಾನ ವರದಿ | 01-09-2026 | ಯಾವ ಜಿಲ್ಲೆಗಳಲ್ಲಿ ಇನ್ನೂ ಮಳೆಯ ಸಾಧ್ಯತೆ…?

ಕರ್ನಾಟಕದಲ್ಲಿ ಮಳೆಯ ತೀವ್ರತೆ ಕ್ರಮೇಣ ಕಡಿಮೆಯಾಗುವ ಲಕ್ಷಣಗಳಿದ್ದು, ಸೆಪ್ಟೆಂಬರ್ 4ರಿಂದ ಕರಾವಳಿ ಮತ್ತು…

24 hours ago

ಬೆಂಗಳೂರಿನಲ್ಲಿ ಭಾರತದ ಅತಿದೊಡ್ಡ ಕಾಫಿ ಉತ್ಸವ- ತೋಟದಿಂದ ಕಪ್‌ವರೆಗೆ ಭಾರತದ ಕಾಫಿಯ ಹೊಸ ಪಯಣ

ಭಾರತದ ಅತಿದೊಡ್ಡ ಕಾಫಿ ಉತ್ಸವ 2027 ಫೆಬ್ರವರಿ 26ರಿಂದ 28ರವರೆಗೆ ಬೆಂಗಳೂರಿನಲ್ಲಿ ನಡೆಯಲಿದ್ದು,…

1 day ago

‘ಅರ್ಥ’ ಮತ್ತು ‘ಅಪಾರ್ಥ’ದ ನಡುವೆ ಇರುವ ‘ಪಾ’ ಯಾವುದು?

ಅಪಾರ್ಥವಾಗುವುದು ಮಾನವ ಸಹಜ; ಆದರೆ ಅಪಾರ್ಥವಾಯಿತೆಂಬ ಅರಿವು ಬಂದ ನಂತರ ಮತ್ತೆ ‘ಅರ್ಥ’ದೆಡೆಗೆ…

1 day ago