Advertisement
ವೆದರ್ ಮಿರರ್

ಹವಾಮಾನ ವರದಿ | 29-09-2026 | ಅ.6 ರವರೆಗೆ ಹಲವು ಜಿಲ್ಲೆಗಳಲ್ಲಿ ಮಳೆಯ ಸಾಧ್ಯತೆ

Share

ಕರ್ನಾಟಕದಲ್ಲಿ ಮಳೆಯ ವಾತಾವರಣ ಮತ್ತೆ ಚುರುಕಾಗಿದ್ದು, ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಗುಡುಗು ಸಹಿತ ಮಳೆಯ ಸಾಧ್ಯತೆ ಇದೆ. ಅರಬ್ಬಿ ಸಮುದ್ರದ ಗಾಳಿಯು ಶ್ರೀಲಂಕಾ ಹಾಗೂ ತಮಿಳುನಾಡು ಕರಾವಳಿ ಮೂಲಕ ರಾಜ್ಯದತ್ತ ಪ್ರವೇಶಿಸುತ್ತಿರುವುದು ಈ ಮಳೆಯ ವಾತಾವರಣಕ್ಕೆ ಪ್ರಮುಖ ಕಾರಣವಾಗಿದೆ. ಈಗಿನ ಮುನ್ಸೂಚನೆಯಂತೆ ರಾಜ್ಯದ ಹಲವು ಭಾಗಗಳಲ್ಲಿ ಅಕ್ಟೋಬರ್ 6ರವರೆಗೆ ಮಳೆಯ ಸಾಧ್ಯತೆ ಮುಂದುವರಿಯಲಿದೆ.

ಕರಾವಳಿಯಲ್ಲಿ ಮೋಡಗಳ ಕೊರತೆ; ಗಾಳಿ ಬಲಗೊಂಡರೆ ಮಳೆ :  ಕಾಸರಗೋಡು ಸೇರಿದಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಸಂಜೆ ವೇಳೆ ಅಲ್ಲಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಆದರೆ ಶ್ರೀಲಂಕಾ ಹಾಗೂ ತಮಿಳುನಾಡು ಕಡೆಯಿಂದ ಬೀಸುತ್ತಿರುವ ಗಾಳಿಗೆ ಮಲೆನಾಡು ಭಾಗಗಳಲ್ಲಿ ಅರಬ್ಬಿ ಸಮುದ್ರದ ಗಾಳಿ ತಡೆಯಾಗುತ್ತಿರುವುದರಿಂದ ಕರಾವಳಿ ಭಾಗದಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಮೋಡಗಳು ಜಮೆಯಾಗುತ್ತಿಲ್ಲ.

ಹೀಗಾಗಿ ತಮಿಳುನಾಡು ಕಡೆಯಿಂದ ಬೀಸುವ ಗಾಳಿ ಮತ್ತಷ್ಟು ಪ್ರಬಲಗೊಂಡರೆ ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಸಾಧ್ಯತೆ ಹೆಚ್ಚಾಗಬಹುದು. ಈಗಿನ ಮುನ್ಸೂಚನೆಯಂತೆ ಕರಾವಳಿ ಜಿಲ್ಲೆಗಳಲ್ಲಿ ಅಕ್ಟೋಬರ್ 6ರವರೆಗೆ ಮಳೆಯ ಸಾಧ್ಯತೆ ಇದೆ.

ಮಲೆನಾಡಿನಲ್ಲಿ ಸಂಜೆ ಗುಡುಗು ಸಹಿತ ಮಳೆ :  ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಮಧ್ಯಾಹ್ನದ ನಂತರ ಹಾಗೂ ಸಂಜೆ ವೇಳೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.  ಮಲೆನಾಡಿನ ಜಿಲ್ಲೆಗಳಲ್ಲಿ ಹವಾಮಾನ ಚಟುವಟಿಕೆ ಮುಂದುವರಿಯುವ ಸಾಧ್ಯತೆ ಇದ್ದು, ಅಕ್ಟೋಬರ್ 6ರವರೆಗೆ ಮಳೆಯ ನಿರೀಕ್ಷೆ ಇದೆ.

ಉತ್ತರ ಒಳನಾಡಿನಲ್ಲಿ ಕೆಲವೆಡೆ ಮಳೆ : ಉತ್ತರ ಒಳನಾಡಿನ ಕೆಲವು ಭಾಗಗಳಲ್ಲಿ ಈಗಾಗಲೇ ಮಳೆಯಾಗುತ್ತಿದೆ. ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಬಾಗಲಕೋಟೆ ಹಾಗೂ ಬಳ್ಳಾರಿ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.

ಉಳಿದ ಜಿಲ್ಲೆಗಳಲ್ಲಿ ಬಿಸಿಲಿನ ನಡುವೆ ಅಲ್ಲಲ್ಲಿ ಮೋಡ ಕವಿದ ವಾತಾವರಣ ಇರಬಹುದು. ಈಗಿನ ಮುನ್ಸೂಚನೆಯಂತೆ ಬೆಳಗಾವಿ, ಧಾರವಾಡ ಹಾಗೂ ಹಾವೇರಿ ಜಿಲ್ಲೆಗಳಲ್ಲಿ ಅಕ್ಟೋಬರ್ 2ರವರೆಗೆ ಮಳೆ ಮುಂದುವರಿಯುವ ಸಾಧ್ಯತೆ ಇದೆ. ಉಳಿದ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಮೋಡದ ವಾತಾವರಣ ಮುಂದುವರಿಯಬಹುದು.

ದಕ್ಷಿಣ ಒಳನಾಡಿನಲ್ಲೂ ಮಳೆ ಚುರುಕು:  ದಕ್ಷಿಣ ಒಳನಾಡಿನ ದಾವಣಗೆರೆ, ವಿಜಯನಗರ, ಚಿತ್ರದುರ್ಗ, ಮೈಸೂರು, ಮಂಡ್ಯ ಹಾಗೂ ಚಾಮರಾಜನಗರ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಸಾಧ್ಯತೆ ಇದೆ.  ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೋಲಾರ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲೂ ಅಲ್ಲಲ್ಲಿ ಸಾಮಾನ್ಯ ಮಳೆಯಾಗುವ ಸಾಧ್ಯತೆ ಇದೆ.

ಈಗಿನ ಮುನ್ಸೂಚನೆಯಂತೆ ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಅಕ್ಟೋಬರ್ 6ರವರೆಗೆ ಮಳೆಯ ವಾತಾವರಣ ಮುಂದುವರಿಯುವ ಲಕ್ಷಣಗಳಿವೆ.

ಅರಬ್ಬಿ ಸಮುದ್ರದ ಗಾಳಿಯಿಂದ ಮಳೆ :  ಪ್ರಸ್ತುತ ಅರಬ್ಬಿ ಸಮುದ್ರದಿಂದ ಬೀಸುವ ಗಾಳಿಯು ಶ್ರೀಲಂಕಾ ಹಾಗೂ ತಮಿಳುನಾಡು ಕರಾವಳಿ ಮೂಲಕ ರಾಜ್ಯದತ್ತ ಪ್ರವೇಶಿಸುತ್ತಿದೆ. ಈ ಗಾಳಿಯ ಚಲನೆಯಿಂದ ರಾಜ್ಯದ ವಿವಿಧ ಭಾಗಗಳಲ್ಲಿ ತೇವಾಂಶದ ಲಭ್ಯತೆ ಹೆಚ್ಚಾಗಿ, ಮಧ್ಯಾಹ್ನದ ನಂತರ ಹಾಗೂ ಸಂಜೆ ವೇಳೆ ಗುಡುಗು ಸಹಿತ ಮಳೆಯ ವಾತಾವರಣ ನಿರ್ಮಾಣವಾಗುತ್ತಿದೆ.

ಈ ಗಾಳಿಯ ಪ್ರಭಾವ ಅಕ್ಟೋಬರ್ 6ರ ನಂತರ ಕಡಿಮೆಯಾಗುವ ಲಕ್ಷಣಗಳು ಕಂಡುಬರುತ್ತಿವೆ. ಹೀಗಾಗಿ ಅಕ್ಟೋಬರ್ ಮೊದಲ ವಾರದವರೆಗೆ ಮಳೆಯ ಚಟುವಟಿಕೆ ಮುಂದುವರಿಯುವ ಸಾಧ್ಯತೆ ಇದ್ದು, ನಂತರ ಹವಾಮಾನದಲ್ಲಿ ಮತ್ತಷ್ಟು ಬದಲಾವಣೆಯಾಗುವ ನಿರೀಕ್ಷೆಯಿದೆ.

ರೈತರು ಕೊಯ್ಲು, ಕೃಷಿ ಕೆಲಸಗಳನ್ನು ಕೈಗೊಳ್ಳುವಾಗ ಸ್ಥಳೀಯ ಮಳೆಯ ಮುನ್ಸೂಚನೆಯನ್ನು ಗಮನಿಸುವುದು ಸೂಕ್ತ.

ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ-ಹವಾಮಾನ ಬದಲಾವಣೆ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಫಾಲೋಮಾಡಲು ಇಲ್ಲಿ ಕ್ಲಿಕ್‌ ಮಾಡಿ

Rainfall activity is expected to continue across several parts of Karnataka, with coastal, Malnad and South Interior districts likely to receive thunderstorms and rain through the first week of October. Coastal Karnataka may see evening thunderstorms, although the formation of clouds is currently being restricted by the interaction between winds from Sri Lanka and Tamil Nadu and Arabian Sea winds. Malnad districts including Kodagu, Hassan, Chikkamagaluru and Shivamogga may receive afternoon and evening thunderstorms until October 6. Parts of North Interior Karnataka, particularly Belagavi, Dharwad and Haveri, may continue receiving rain until October 2, while South Interior Karnataka may see rainfall activity until October 6. The current rainfall pattern is associated with Arabian Sea winds entering Karnataka through the Sri Lankan and Tamil Nadu coastal regions, with their influence expected to weaken after around October 6.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಕಾಳುಮೆಣಸು ಮಾರುಕಟ್ಟೆಯಲ್ಲಿ ಏನಾಗುತ್ತಿದೆ?

ಆಗಮನ ಕಡಿಮೆಯಾಗಿದ್ದರೂ ದೇಶದ ಕಾಳುಮೆಣಸು ಬೆಲೆಯಲ್ಲಿ ಇಳಿಕೆ ಕಂಡುಬಂದಿದ್ದು, ದಾಸ್ತಾನು ಮತ್ತು ಬೇಡಿಕೆ…

7 minutes ago

ಕೃಷಿ ವೆಚ್ಚ ಕಡಿಮೆ ಮಾಡಲು ಇಲ್ಲಿ ರೈತರ ಹೊಸ ಹೆಜ್ಜೆ…

ರಾಸಾಯನಿಕ ಗೊಬ್ಬರ ಮತ್ತು ಕೀಟನಾಶಕಗಳ ವೆಚ್ಚ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಉತ್ತರ ಪ್ರದೇಶದ ಚಿತ್ರಕೂಟದ…

5 hours ago

‘ರೋಸ್ಟೆಡ್ ಅಡಿಕೆ’ ಆಮದು ವರ್ಗೀಕರಣಕ್ಕೆ ಮತ್ತೊಂದು ತಿರುವು – ಹೈಕೋರ್ಟ್ ತೀರ್ಪು ಉಲ್ಲೇಖಿಸಿ ಅರ್ಜಿ ತಿರಸ್ಕರಿಸಿದ ಮುಂಬೈ ಪ್ರಾಧಿಕಾರ

‘ರೋಸ್ಟೆಡ್ ಅಡಿಕೆ’ಯನ್ನು ಯಾವ ಸುಂಕ ವರ್ಗದಡಿ ಪರಿಗಣಿಸಬೇಕು ಎಂಬ ವಿವಾದಕ್ಕೆ ಮುಂಬೈ CAAR…

14 hours ago

ಬರಕ್ಕೆ ರಾಗಿ ಕೂಡ ಸೋಲುತ್ತಿದೆ – ‘ಬರ ನಿರೋಧಕ’ ಎಂದರೆ ಮಳೆ ಇಲ್ಲದಿದ್ದರೂ ಬೆಳೆಯುತ್ತದೆ ಎಂದಲ್ಲ!

ಮಳೆ ಇಲ್ಲದಿದ್ದರೆ ರಾಗಿ ಸೇರಿದಂತೆ ಬರ ಸಹಿಷ್ಣು ಬೆಳೆಗಳೂ ಉಳಿಯುವುದಿಲ್ಲ ಎಂಬುದನ್ನು ಕರ್ನಾಟಕದ…

15 hours ago

₹2,000ಕ್ಕಿಂತ ಹೆಚ್ಚಿನ UPI ವಹಿವಾಟಿನ MDRಗೆ ತಡೆ ನೀಡಲು ಸುಪ್ರೀಂ ಕೋರ್ಟ್ ನಿರಾಕರಣೆ

₹2,000ಕ್ಕಿಂತ ಹೆಚ್ಚಿನ ನಿರ್ದಿಷ್ಟ UPI ವ್ಯಾಪಾರಿ ವಹಿವಾಟುಗಳಿಗೆ MDR ವಿಧಿಸುವ ಕೇಂದ್ರದ ನಿರ್ಧಾರಕ್ಕೆ…

22 hours ago

ಚೆಸ್ ಒಲಿಂಪಿಯಾಡ್‌ನಲ್ಲಿ ಭಾರತಕ್ಕೆ ಎರಡು ಪದಕ: ಪುರುಷರಿಗೆ ಬೆಳ್ಳಿ, ಮಹಿಳೆಯರಿಗೆ ಕಂಚು – ಪ್ರಧಾನಿ ಮೋದಿ ಅಭಿನಂದನೆ

ಸಮರ್ಕಂಡ್‌ನಲ್ಲಿ ನಡೆದ ಫಿಡೆ ಚೆಸ್ ಒಲಿಂಪಿಯಾಡ್‌ನಲ್ಲಿ ಭಾರತದ ಪುರುಷರ ತಂಡ ಬೆಳ್ಳಿ ಹಾಗೂ…

23 hours ago