ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಒಂದೆರಡು ಸ್ಥಳಗಳಲ್ಲಿ ಮಳೆಯಾಗಿದ್ದು ಉತ್ತರ ಒಳನಾಡಿನಲ್ಲಿ ಒಣಹವೆ ಇತ್ತು. ಪ್ರಮುಖವಾಗಿ ತುಮಕೂರು ಜಿಲ್ಲೆಯ ಸಿರಾ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆಯಲ್ಲಿ ತಲಾ 3 ಸೆಮೀ ಮಳೆಯಾಗಿದೆ. ಚಿಕ್ಕಮಗಳೂರಿನ ಯಗಟಿ, ಬೇಲೂರಿನಲ್ಲಿ ತಲಾ 2 ಸೆ ಮೀ , ಧರ್ಮಸ್ಥಳ ಬರ್ಗೂರು, ಉಪ್ಪಿನಂಗಡಿ, ಬೆಳ್ತಂಗಡಿ ಯಲ್ಲಿ ತಲಾ 1 ಸೆ ಮೀ ಮಳೆಯಾಗಿದೆ. ರಾಜ್ಯದಲ್ಲಿ ಅತೀ ಹೆಚ್ಚು ಉಷ್ಣಾಂಶ 42 ಡಿಗ್ರಿ ಸೆಲ್ಸಿಯಸ್ ಕಲಬುರ್ಗಿಯಲ್ಲಿ ದಾಖಲಾಗಿದೆ.
ಹವಾಮಾನ ಮಾಹಿತಿ ಪಡೆಯಲು “ದ ರೂರಲ್ ಮಿರರ್.ಕಾಂ” ವ್ಯಾಟ್ಸಪ್ ಚಾನೆಲ್ ಫಾಲೋ ಮಾಡಿ – ಇಲ್ಲಿ ಕ್ಲಿಕ್ ಮಾಡಿರಿ..
ಇಂದು ಮತ್ತೆ ನಾಳೆ ಮಂಡ್ಯ, ಮೈಸೂರು, ಚಿಕ್ಕಮಗಳೂರು, ತುಮಕೂರು , ರಾಮನಗರ ಹಾಗೂ ಹಾಸನ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆಯಿದೆ. ಮುಂದಿನ 7 ದಿನಗಳವರೆಗೆ ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರಕನ್ನಡ, ಉತ್ತರ ಒಳನಾಡಿನ ಬೀದರ್, ಕಲ್ಬುರ್ಗಿ, ರಾಯಚೂರು, ಗದಗ, ಯಾದಗಿರಿ, ಹಾವೇರಿ, ದಕ್ಷಿಣ ಒಳನಾಡಿನ ಮಂಡ್ಯ, ಮೈಸೂರು, ಚಿಕ್ಕಮಗಳೂರು, ಬೆಂಗಳೂರು ಗ್ರಾಮಾಂತರ ಚಿಕ್ಕಬಳ್ಳಾಪುರ , ಕೋಲಾರ, ಹಾಸನ ಜಿಲ್ಲೆಗಳಲ್ಲಿ ಹಗುರದಿಂದ ಸಾಧರಣ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರು ಹಾಗೂ ಸುತ್ತಮುತ್ತ ಮುಂದಿನ 24 ಗಂಟೆಗಳಲ್ಲಿ ಭಾಗಶ: ಮೋಡ ಕವಿದ ವಾತಾವರಣ ವಿರಲಿದ್ದು ಹಗುರದಿಂದ ಸಾಧಾರಣ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಗರಿಷ್ಠ 34 ಕನಿಷ್ಠ 21 ಡಿಗ್ರಿ ಸೆಲ್ಸಿಯಸ್ ತಾಪಮಾನ ಸಂಭವ.
ಹವಾಮಾನ ಮಾಹಿತಿ ಪಡೆಯಲು “ದ ರೂರಲ್ ಮಿರರ್.ಕಾಂ” ವ್ಯಾಟ್ಸಪ್ ಚಾನೆಲ್ ಫಾಲೋ ಮಾಡಿ – ಇಲ್ಲಿ ಕ್ಲಿಕ್ ಮಾಡಿರಿ..