Advertisement
MIRROR FOCUS

ಮುಂದಿನ 7 ದಿನಗಳಲ್ಲಿ ರಾಜ್ಯ ಹಲವೆಡೆ ಸಾಧಾರಣ ಮಳೆ | ಹವಾಮಾನ ಇಲಾಖೆ ಮುನ್ಸೂಚನೆ

Share

ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಒಂದೆರಡು ಸ್ಥಳಗಳಲ್ಲಿ ಮಳೆಯಾಗಿದ್ದು ಉತ್ತರ ಒಳನಾಡಿನಲ್ಲಿ ಒಣಹವೆ ಇತ್ತು.  ಪ್ರಮುಖವಾಗಿ ತುಮಕೂರು ಜಿಲ್ಲೆಯ ಸಿರಾ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆಯಲ್ಲಿ ತಲಾ 3 ಸೆಮೀ ಮಳೆಯಾಗಿದೆ.  ಚಿಕ್ಕಮಗಳೂರಿನ ಯಗಟಿ, ಬೇಲೂರಿನಲ್ಲಿ ತಲಾ 2 ಸೆ ಮೀ , ಧರ್ಮಸ್ಥಳ ಬರ್ಗೂರು, ಉಪ್ಪಿನಂಗಡಿ, ಬೆಳ್ತಂಗಡಿ ಯಲ್ಲಿ ತಲಾ 1 ಸೆ ಮೀ ಮಳೆಯಾಗಿದೆ. ರಾಜ್ಯದಲ್ಲಿ ಅತೀ ಹೆಚ್ಚು ಉಷ್ಣಾಂಶ 42 ಡಿಗ್ರಿ ಸೆಲ್ಸಿಯಸ್ ಕಲಬುರ್ಗಿಯಲ್ಲಿ ದಾಖಲಾಗಿದೆ. 

ಹವಾಮಾನ ಮಾಹಿತಿ ಪಡೆಯಲು  “ದ ರೂರಲ್‌ ಮಿರರ್.ಕಾಂ” ವ್ಯಾಟ್ಸಪ್‌ ಚಾನೆಲ್‌ ಫಾಲೋ ಮಾಡಿ –  ಇಲ್ಲಿ ಕ್ಲಿಕ್‌ ಮಾಡಿರಿ..

ಇಂದು ಮತ್ತೆ ನಾಳೆ ಮಂಡ್ಯ, ಮೈಸೂರು, ಚಿಕ್ಕಮಗಳೂರು, ತುಮಕೂರು , ರಾಮನಗರ ಹಾಗೂ ಹಾಸನ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆಯಿದೆ.  ಮುಂದಿನ 7 ದಿನಗಳವರೆಗೆ ಕರಾವಳಿಯ ದಕ್ಷಿಣ ಕನ್ನಡ,  ಉಡುಪಿ, ಉತ್ತರಕನ್ನಡ, ಉತ್ತರ ಒಳನಾಡಿನ ಬೀದರ್, ಕಲ್ಬುರ್ಗಿ, ರಾಯಚೂರು, ಗದಗ, ಯಾದಗಿರಿ, ಹಾವೇರಿ, ದಕ್ಷಿಣ ಒಳನಾಡಿನ ಮಂಡ್ಯ, ಮೈಸೂರು, ಚಿಕ್ಕಮಗಳೂರು, ಬೆಂಗಳೂರು ಗ್ರಾಮಾಂತರ ಚಿಕ್ಕಬಳ್ಳಾಪುರ , ಕೋಲಾರ, ಹಾಸನ ಜಿಲ್ಲೆಗಳಲ್ಲಿ  ಹಗುರದಿಂದ ಸಾಧರಣ ಮಳೆಯಾಗುವ ಸಾಧ್ಯತೆಯಿದೆ.  ಬೆಂಗಳೂರು ಹಾಗೂ ಸುತ್ತಮುತ್ತ ಮುಂದಿನ 24 ಗಂಟೆಗಳಲ್ಲಿ ಭಾಗಶ: ಮೋಡ ಕವಿದ ವಾತಾವರಣ ವಿರಲಿದ್ದು ಹಗುರದಿಂದ ಸಾಧಾರಣ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಗರಿಷ್ಠ 34 ಕನಿಷ್ಠ 21 ಡಿಗ್ರಿ ಸೆಲ್ಸಿಯಸ್ ತಾಪಮಾನ ಸಂಭವ.

ಹವಾಮಾನ ಮಾಹಿತಿ ಪಡೆಯಲು  “ದ ರೂರಲ್‌ ಮಿರರ್.ಕಾಂ” ವ್ಯಾಟ್ಸಪ್‌ ಚಾನೆಲ್‌ ಫಾಲೋ ಮಾಡಿ –  ಇಲ್ಲಿ ಕ್ಲಿಕ್‌ ಮಾಡಿರಿ..

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 10-09-2026 | ಕರ್ನಾಟಕದಲ್ಲಿ ಮಳೆ ಏಕೆ ಇಳಿಮುಖವಾಗುತ್ತಿದೆ..?

ಸೆ.11ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಕಡಿಮೆಯಾಗಲಿದ್ದು, ಬಿಸಿಲು ಹೆಚ್ಚಾಗುವ ಲಕ್ಷಣಗಳಿವೆ.…

3 hours ago

ರಾಜ್ಯದಲ್ಲಿ ವಿದ್ಯುತ್‌ ಸಂಕಷ್ಟದ ಸುಳಿವು – ರಾತ್ರಿ 6.30 ರಿಂದ 9ರವರೆಗೆ ಪೂರೈಕೆ ವ್ಯತ್ಯಯ ಸಾಧ್ಯತೆ

ದುರ್ಬಲ ಮುಂಗಾರು ಮತ್ತು ಜಲ–ಪವನ ವಿದ್ಯುತ್‌ ಉತ್ಪಾದನೆ ಕುಸಿತದಿಂದ ರಾಜ್ಯದಲ್ಲಿ ವಿದ್ಯುತ್‌ ಪೂರೈಕೆಯ…

3 hours ago

ಪರಿಸರ ಸ್ನೇಹಿ ಗೌರಿ-ಗಣೇಶ ಹಬ್ಬ : ಮಂಗಳೂರು ಮಹಾನಗರಪಾಲಿಕೆ ಸೂಚನೆ

2026ರ ಗೌರಿ-ಗಣೇಶ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸುವಂತೆ ಮಂಗಳೂರು ಮಹಾನಗರಪಾಲಿಕೆ ಸೂಚಿಸಿದ್ದು, POP…

17 hours ago

ಹವಾಮಾನ ವರದಿ | 09-09-2026 | ಕರ್ನಾಟಕದಲ್ಲಿ ಮಳೆಯ ಚಿತ್ರಣ ಬದಲಾಗುತ್ತಿದೆ – ಸೆ.11ರಿಂದ ಕರಾವಳಿಯಲ್ಲಿ ಬದಲಾವಣೆ

ಕರ್ನಾಟಕದಲ್ಲಿ ಮಳೆಯ ಸಾಧ್ಯತೆ ಒಟ್ಟಾರೆ ಇಳಿಮುಖವಾಗುತ್ತಿದ್ದು, ಕರಾವಳಿಯಲ್ಲಿ ಸೆ.11ರಿಂದ ಮಳೆ ಕಡಿಮೆಯಾಗುವ ಲಕ್ಷಣಗಳಿವೆ.…

1 day ago

ಕ್ಯಾಂಪ್ಕೋ ಅಭಿವೃದ್ಧಿಯ ಹಾದಿಯಲ್ಲಿ: ₹2,900 ಕೋಟಿ ಅಡಿಕೆ ವ್ಯವಹಾರದ ನಡುವೆ ಮುಂದಿರುವ ಸವಾಲುಗಳೇನು?

2025-26ರಲ್ಲಿ ಕ್ಯಾಂಪ್ಕೋದ ಅಡಿಕೆ ಖರೀದಿ ಪ್ರಮಾಣ ಹಿಂದಿನ ವರ್ಷಕ್ಕಿಂತ ಕಡಿಮೆಯಾಗಿದ್ದರೂ, ಬೆಲೆ ಏರಿಕೆಯಿಂದ…

1 day ago

ಅಡಿಕೆಯಷ್ಟೇ ಅಲ್ಲ ಅದೇ ಮರಕ್ಕೆ ವೆನಿಲ್ಲಾ ಬಳ್ಳಿ | ಅಸ್ಸಾಂನಲ್ಲಿ ಅಡಿಕೆಯ ಜೊತೆಗೆ ಇನ್ನೊಂದು ಬೆಳೆ..

ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…

2 days ago