26.01.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕರಾವಳಿ : ಕಾಸರಗೋಡು ಸೇರಿದಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಬಿಸಿಲಿನ ವಾತಾವರಣದೊಂದಿಗೆ ಸಂಜೆ ರಾತ್ರಿ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಈಗಿನಂತೆ ಜನವರಿ 26ರಂದು ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. 28 ರಿಂದ ಬಿಸಿಲು ಹಾಗೂ ಒಣ ಹವೆ ಮುಂದುವರಿಯಬಹುದು.
ಮಲೆನಾಡು : ರಾಜ್ಯದ ಮಲೆನಾಡು ಜಿಲ್ಲೆಗಳಾದ ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಸಂಜೆ ಅಥವಾ ರಾತ್ರಿ ಮೋಡದ ವಾತಾವರಣದ ಮುನ್ಸೂಚನೆ ಇದ್ದು, ಜನವರಿ 26ರಂದು ಸಂಜೆ ಗುಡುಗು ಸಹಿತ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. 28ರಿಂದ ಒಣ ಹವೆ ಮುಂದುವರಿಯಲಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ
ಉತ್ತರ ಕನ್ನಡ : ರಾಜ್ಯದ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಒಣ ಹವೆ ಮುಂದುವರಿಯಲಿದೆ. ಈಗಿನಂತೆ ಜನವರಿ 26ರಂದು ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು.
ದಕ್ಷಿಣ ಒಳನಾಡು : ರಾಜ್ಯದ ದಕ್ಷಿಣ ಒಳನಾಡು ಜಿಲ್ಲೆಗಳಾದ ಚಾಮರಾಜನಗರ. ಹಾಗೂ ಮೈಸೂರು ಜಿಲ್ಲೆಗಳಲ್ಲಿ ರಾತ್ರಿ ಅಥವಾ ಮುಂಜಾನೆ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಉಳಿದ ಜಿಲ್ಲೆಗಳಲ್ಲಿ ರಾತ್ರಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.ಈಗಿನಂತೆ ರಾಜ್ಯದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಜನವರಿ 26, 27ರಂದು ಅಲ್ಲಲ್ಲಿ ಮೋಡ ಹಾಗೂ ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆ ಇದೆ.
ಬಂಗಾಳಕೊಲ್ಲಿಯ ಉಷ್ಣ ಮಾರುತ ಪರಿಚಲನೆ ಮುಂದುವರಿದಿದ್ದರ ಪರಿಣಾಮದಿಂದ ತಮಿಳುನಾಡು ಕಡೆಯಿಂದ ತೇವಾಂಶ ಭರಿತ ಗಾಳಿಯು ಬೀಸುತ್ತಿರುವುದರಿಂದ ಈ ಮಳೆಯ ವಾತಾವರಣವು ಸೃಷ್ಟಿಯಾಗಿದೆ. ಜೊತೆಗೆ ಚಳಿಯ ಪ್ರಮಾಣವು ಕಡಿಮೆಯಾಗಿದೆ. ಉತ್ತರ ಭಾರತದಲ್ಲಿ ಈ ತಿಂಗಳ ಅಂತ್ಯದವರಗೂ ಅಲ್ಲಲ್ಲಿ ಮಳೆ ಮುಂದುವರಿಯುವ ಲಕ್ಷಣಗಳಿವೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ




