Advertisement
ಸುದ್ದಿಗಳು

ಹವಾಮಾನ ವರದಿ | 25-01-2026 | ಕರಾವಳಿ–ಮಲೆನಾಡಿನಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ

Share

26.01.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು ಸೇರಿದಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಬಿಸಿಲಿನ ವಾತಾವರಣದೊಂದಿಗೆ ಸಂಜೆ ರಾತ್ರಿ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಈಗಿನಂತೆ ಜನವರಿ 26ರಂದು ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. 28 ರಿಂದ ಬಿಸಿಲು ಹಾಗೂ ಒಣ ಹವೆ ಮುಂದುವರಿಯಬಹುದು.

ಮಲೆನಾಡು : ರಾಜ್ಯದ ಮಲೆನಾಡು ಜಿಲ್ಲೆಗಳಾದ ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಸಂಜೆ ಅಥವಾ ರಾತ್ರಿ ಮೋಡದ ವಾತಾವರಣದ ಮುನ್ಸೂಚನೆ ಇದ್ದು, ಜನವರಿ 26ರಂದು ಸಂಜೆ ಗುಡುಗು ಸಹಿತ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. 28ರಿಂದ ಒಣ ಹವೆ ಮುಂದುವರಿಯಲಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

ಉತ್ತರ ಕನ್ನಡ : ರಾಜ್ಯದ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಒಣ ಹವೆ ಮುಂದುವರಿಯಲಿದೆ. ಈಗಿನಂತೆ ಜನವರಿ 26ರಂದು ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು.

ದಕ್ಷಿಣ ಒಳನಾಡು : ರಾಜ್ಯದ ದಕ್ಷಿಣ ಒಳನಾಡು ಜಿಲ್ಲೆಗಳಾದ ಚಾಮರಾಜನಗರ. ಹಾಗೂ ಮೈಸೂರು ಜಿಲ್ಲೆಗಳಲ್ಲಿ ರಾತ್ರಿ ಅಥವಾ ಮುಂಜಾನೆ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಉಳಿದ ಜಿಲ್ಲೆಗಳಲ್ಲಿ ರಾತ್ರಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.ಈಗಿನಂತೆ ರಾಜ್ಯದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಜನವರಿ 26, 27ರಂದು ಅಲ್ಲಲ್ಲಿ ಮೋಡ ಹಾಗೂ ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆ ಇದೆ.

ಬಂಗಾಳಕೊಲ್ಲಿಯ ಉಷ್ಣ ಮಾರುತ ಪರಿಚಲನೆ ಮುಂದುವರಿದಿದ್ದರ ಪರಿಣಾಮದಿಂದ ತಮಿಳುನಾಡು ಕಡೆಯಿಂದ ತೇವಾಂಶ ಭರಿತ ಗಾಳಿಯು ಬೀಸುತ್ತಿರುವುದರಿಂದ ಈ ಮಳೆಯ ವಾತಾವರಣವು ಸೃಷ್ಟಿಯಾಗಿದೆ. ಜೊತೆಗೆ ಚಳಿಯ ಪ್ರಮಾಣವು ಕಡಿಮೆಯಾಗಿದೆ. ಉತ್ತರ ಭಾರತದಲ್ಲಿ ಈ ತಿಂಗಳ ಅಂತ್ಯದವರಗೂ ಅಲ್ಲಲ್ಲಿ ಮಳೆ ಮುಂದುವರಿಯುವ ಲಕ್ಷಣಗಳಿವೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಚಂಡಮಾರುತಗಳು ಏಕೆ ಕಡಿಮೆಯಾಗುತ್ತಿವೆ? ಎಲ್ ನಿನೋದಿಂದ ಮಳೆ–ಬಿಸಿಲಿನ ಚಿತ್ರಣ ಬದಲಾಗುತ್ತಿದೆಯೇ?

ವಾಯುಭಾರ ಕುಸಿತಗಳು ಚಂಡಮಾರುತವಾಗಿ ಬಲಗೊಳ್ಳಲು ಸಮುದ್ರದ ಉಷ್ಣತೆ ಮಾತ್ರವಲ್ಲದೆ ತೇವಾಂಶ, ವಿಂಡ್ ಶಿಯರ್…

12 minutes ago

ಹವಾಮಾನ ವರದಿ | 11-09-2026 | ಸೆ.12ರಿಂದ ಬಿಸಿಲು ಹೆಚ್ಚಳ, ಕೆಲವೆಡೆ ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂದಿನ ಕೆಲವು ದಿನ ಬಿಸಿಲಿನ ವಾತಾವರಣ ಹೆಚ್ಚಾಗುವ…

5 hours ago

ಕ್ಯಾಂಪ್ಕೊ ದಾಖಲೆ ಸಾಧನೆ – ₹3,735 ಕೋಟಿ ವಹಿವಾಟು, ₹49.62 ಕೋಟಿ ಲಾಭ – 14% ಡಿವಿಡೆಂಡ್ ಶಿಫಾರಸು

2025-26ರಲ್ಲಿ ಕ್ಯಾಂಪ್ಕೊ ₹3,735 ಕೋಟಿ ವಹಿವಾಟು ಮತ್ತು ₹49.62 ಕೋಟಿ ಲಾಭ ದಾಖಲಿಸಿದ್ದು,…

10 hours ago

ಸಂಪತ್ತು ಹೆಚ್ಚಾದರೆ ಬದುಕು ಶ್ರೀಮಂತವಾಗುತ್ತದೆಯೇ..?

ಸಂಪತ್ತು ಮತ್ತು ಸೌಲಭ್ಯಗಳು ಹೆಚ್ಚಿರುವುದೇ ನಿಜವಾದ ಶ್ರೀಮಂತಿಕೆಯಲ್ಲ; ಅವುಗಳನ್ನು ವಿವೇಕದಿಂದ ಬಳಸುವ ಮನಸ್ಸು…

22 hours ago

ಹವಾಮಾನ ವರದಿ | 10-09-2026 | ಕರ್ನಾಟಕದಲ್ಲಿ ಮಳೆ ಏಕೆ ಇಳಿಮುಖವಾಗುತ್ತಿದೆ..?

ಸೆ.11ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಕಡಿಮೆಯಾಗಲಿದ್ದು, ಬಿಸಿಲು ಹೆಚ್ಚಾಗುವ ಲಕ್ಷಣಗಳಿವೆ.…

1 day ago

ರಾಜ್ಯದಲ್ಲಿ ವಿದ್ಯುತ್‌ ಸಂಕಷ್ಟದ ಸುಳಿವು – ರಾತ್ರಿ 6.30 ರಿಂದ 9ರವರೆಗೆ ಪೂರೈಕೆ ವ್ಯತ್ಯಯ ಸಾಧ್ಯತೆ

ದುರ್ಬಲ ಮುಂಗಾರು ಮತ್ತು ಜಲ–ಪವನ ವಿದ್ಯುತ್‌ ಉತ್ಪಾದನೆ ಕುಸಿತದಿಂದ ರಾಜ್ಯದಲ್ಲಿ ವಿದ್ಯುತ್‌ ಪೂರೈಕೆಯ…

1 day ago