Advertisement
ವೆದರ್ ಮಿರರ್

ಹವಾಮಾನ ವರದಿ | 22-03-2026 | ಕರಾವಳಿಯಲ್ಲಿ ಸಂಜೆ ಮಳೆ, ಒಳನಾಡಿನಲ್ಲಿ ಬಿಸಿಲು – ಕರ್ನಾಟಕದ ಹವಾಮಾನ ಹೇಗಿರಲಿದೆ..?

Share

2026 ಜೂನ್‌ 23ರ ಬೆಳಿಗ್ಗೆ 8 ಗಂಟೆವರೆಗಿನ ರಾಜ್ಯದ ಹವಾಮಾನ ಮುನ್ಸೂಚನೆ ಪ್ರಕಾರ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಮಧ್ಯಾಹ್ನ ನಂತರ ಸಾಮಾನ್ಯ ಮಳೆಯಾಗುವ ಸಾಧ್ಯತೆ ಇದೆ. ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಮೋಡದ ವಾತಾವರಣ ಮುಂದುವರಿಯಲಿದ್ದು, ಮಳೆಯ ಸಾಧ್ಯತೆ ಕಡಿಮೆ.

ಕರಾವಳಿ ಪ್ರದೇಶ : ಕಾಸರಗೋಡು ಜಿಲ್ಲೆಯಲ್ಲಿ ದಿನದ ವೇಳೆ ಬಿಸಿಲು ಕಂಡುಬರುವ ಸಾಧ್ಯತೆ ಇದ್ದು, ಸಂಜೆ ವೇಳೆಗೆ ಕೆಲವೆಡೆ ಮೋಡದ ವಾತಾವರಣ ಉಂಟಾಗಬಹುದು. ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಧ್ಯಾಹ್ನ ನಂತರ ಮತ್ತು ಸಂಜೆ ವೇಳೆಗೆ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಕೆಲವು ಕಡೆ ಗುಡುಗು ಸಹ ಇರಬಹುದಾಗಿದೆ.

ಮಲೆನಾಡು ಪ್ರದೇಶ :  ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಭಾಗಗಳಲ್ಲಿ ಮಧ್ಯಾಹ್ನ ನಂತರ ಸಾಮಾನ್ಯ ಮಳೆಯಾಗುವ ಸೂಚನೆಗಳಿವೆ. ಸಣ್ಣ ಪ್ರಮಾಣದ ಗುಡುಗು ಸಾಧ್ಯತೆಯೂ ಇದೆ.

ಉತ್ತರ ಒಳನಾಡು :  ರಾಜ್ಯದ ಉತ್ತರ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ದಿನಪೂರ್ತಿ ಬಿಸಿಲು ಹಾಗೂ ಸಂಜೆ, ರಾತ್ರಿ ವೇಳೆಯಲ್ಲಿ ಮೋಡ ಕವಿದ ವಾತಾವರಣ ಇರಲಿದೆ. ಮಳೆಯ ಸಾಧ್ಯತೆ ಕಾಣಿಸುತ್ತಿಲ್ಲ.

ದಕ್ಷಿಣ ಒಳನಾಡು:  ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಸಹ ಬಿಸಿಲು ಮತ್ತು ಮೋಡದ ವಾತಾವರಣ ಮುಂದುವರಿಯಲಿದ್ದು, ಮಳೆಯ ಸಾಧ್ಯತೆ ಕಡಿಮೆ ಎಂದು ಅಂದಾಜಿಸಲಾಗಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

ವಾತಾವರಣದ ಸ್ಥಿತಿ :  ಅರಬ್ಬಿ ಸಮುದ್ರದ ಮೇಲೆ ರೂಪಗೊಂಡಿದ್ದ ಪ್ರತ್ಯಾವರ್ತ ಮಾರುತ (Anti-cyclonic circulation) ಶಿಥಿಲಗೊಳ್ಳುತ್ತಿದ್ದು, ಗಾಳಿಯ ಚಲನೆ ಮತ್ತೆ ಭೂ ಪ್ರದೇಶದ ಕಡೆಗೆ ಯಥಾಸ್ಥಿತಿಗೆ ಮರಳುತ್ತಿದೆ. ಇದರಿಂದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಸಾಮಾನ್ಯ ಮಳೆಯಾಗುವ ಸೂಚನೆಗಳು ಗೋಚರಿಸುತ್ತಿವೆ.

Weather forecast for Karnataka till 8 AM, June 23 indicates chances of light to normal rain in coastal and Malnad regions during afternoon and evening, with possible thunder in isolated areas. North and South interior districts are likely to experience sunny to partly cloudy conditions with minimal rainfall prospects.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಬಿ.ಎಸ್‌ಸಿ. ಕೃಷಿ ನಂತರ ಏನು ? ಉದ್ಯೋಗ, ಉದ್ಯಮ ಮತ್ತು ಉನ್ನತ ಶಿಕ್ಷಣದ ಅತ್ಯುತ್ತಮ ಅವಕಾಶಗಳು ಇಲ್ಲಿವೆ

ಬಿ.ಎಸ್‌ಸಿ. ಕೃಷಿ ಪದವೀಧರರಿಗೆ ಸರ್ಕಾರಿ ಉದ್ಯೋಗ, ಖಾಸಗಿ ಕಂಪನಿಗಳು, ಬ್ಯಾಂಕಿಂಗ್, ಸಂಶೋಧನೆ ಮತ್ತು…

4 hours ago

ಅಡಿಕೆ–ಕಾಳುಮೆಣಸು ಬೆಳೆ ವಿಮೆ: ರೈತರ ನೋಂದಣಿಗೆ ಆ.17 ಅಂತಿಮ ದಿನ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2026-27ನೇ ಸಾಲಿನ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ಅಡಿಕೆ…

4 hours ago

ಹವಾಮಾನ ವರದಿ | 10.08.2026 | ಕರ್ನಾಟಕದಲ್ಲಿ ಬಿಟ್ಟು ಬಿಟ್ಟು ಸಾಮಾನ್ಯ ಮಳೆ; ಆಗಸ್ಟ್‌ 12ರಂದು ಕರಾವಳಿಯಲ್ಲಿ ಮಳೆ ಹೆಚ್ಚಳ ಸಾಧ್ಯತೆ

ಮಧ್ಯಪ್ರದೇಶದಲ್ಲಿ ಹೊಸ ತಿರುವಿಕೆ ಪರಿಣಾಮ: ಕರಾವಳಿ, ಮಲೆನಾಡಿನಲ್ಲಿ ಮಳೆ ಚುರುಕು ಸಾಧ್ಯತೆ ಕರ್ನಾಟಕದ…

19 hours ago

ಕಡಿಮೆ ನೀರು, ಕಡಿಮೆ ಗೊಬ್ಬರ… ಹೆಚ್ಚು ಇಳುವರಿ – ಕೃಷಿಯಲ್ಲಿ ಹೊಸ ಕ್ರಾಂತಿ

ಕಡಿಮೆ ಸಂಪನ್ಮೂಲ ಬಳಸಿ ಹೆಚ್ಚು ಉತ್ಪಾದನೆ ಪಡೆಯಲು ಸ್ಮಾರ್ಟ್ ಸಂಪನ್ಮೂಲ ನಿರ್ವಹಣೆ ಅಗತ್ಯವಾಗಿದೆ.…

1 day ago

ಬರದತ್ತ ಇಂಗ್ಲೆಂಡ್‌ – ಆಹಾರ ಕೊರತೆ, ಕಾಡ್ಗಿಚ್ಚಿನ ಎಚ್ಚರಿಕೆ – ಕೃಷಿಗೆ ಭಾರಿ ಹೊಡೆತ – ರೈತರಿಗೆ ₹4,400 ಕೋಟಿ ನಷ್ಟದ ಅಂದಾಜು

ತೀವ್ರ ಬರ ಮತ್ತು ಉಷ್ಣಾಂಶದಿಂದ ಇಂಗ್ಲೆಂಡ್‌ನಲ್ಲಿ ಕೃಷಿ ಉತ್ಪಾದನೆ ಕುಸಿದಿದ್ದು, ಆಹಾರ ಕೊರತೆ…

1 day ago

ಹವಾಮಾನ ವರದಿ | 09.08.2026 | ಕರಾವಳಿಯಲ್ಲಿ ಭಾರಿ ಮಳೆ ಸಾಧ್ಯತೆ ಕ್ಷೀಣ; ಆಗಸ್ಟ್‌ 11ರಿಂದ ಮಲೆನಾಡಿನಲ್ಲೂ ಮಳೆ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಸಣ್ಣ ಅವಧಿಯ ಸಾಮಾನ್ಯ ಮಳೆ ಮಾತ್ರ; ಮಲೆನಾಡಿನಲ್ಲಿ ಮಳೆ ಕಡಿಮೆಯಾಗುವ…

2 days ago