Advertisement
ವೆದರ್ ಮಿರರ್

ಹವಾಮಾನ ವರದಿ | 01-04-2026 | ಕರಾವಳಿ-ಮಲೆನಾಡಿನಲ್ಲಿ ಗುಡುಗು ಮಳೆ ಮುಂದುವರಿಕೆ – ಏ.10 ರಿಂದ ಮತ್ತೆ ಮಳೆ ಚುರುಕು ಸಾಧ್ಯತೆ!

Share

ರಾಜ್ಯದ ವಿವಿಧ ಭಾಗಗಳಲ್ಲಿ ಮಳೆಯ ಚಟುವಟಿಕೆ ಮುಂದುವರಿದಿದ್ದು, ವಿಶೇಷವಾಗಿ ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಉತ್ತಮ ಮಳೆ ಮುಂದುವರಿಯುವ ಸಾಧ್ಯತೆ ಇದೆ.

ಕರಾವಳಿ ಪ್ರದೇಶ :  ಕಾಸರಗೋಡು ಭಾಗದಲ್ಲಿ ಮೋಡದ ವಾತಾವರಣವಿದ್ದು, ತೇವಾಂಶ ಹೆಚ್ಚಾದರೆ ಮುಂಜಾನೆ ಸಾಮಾನ್ಯ ಮಳೆಯ ಸಾಧ್ಯತೆ ಇದೆ.
ಸಂಜೆ ವೇಳೆಗೆ ಬೆಳ್ತಂಗಡಿ, ಧರ್ಮಸ್ಥಳ, ಕಾರ್ಕಳ, ಹೆಬ್ರಿ ಭಾಗಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.

ಈ ಮಳೆಯು ಏಪ್ರಿಲ್ 4ರವರೆಗೆ ಮುಂದುವರಿಯಲಿದ್ದು, ನಂತರ ಸ್ವಲ್ಪ ಕಡಿಮೆಯಾಗುತ್ತದೆ. ಆದರೆ ಏಪ್ರಿಲ್ 10ರಿಂದ ಮತ್ತೆ ಮಳೆಯ ಚಟುವಟಿಕೆ ಹೆಚ್ಚಾಗುವ ಸಾಧ್ಯತೆ ಇದೆ.

ಮಲೆನಾಡು ಪ್ರದೇಶ : ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಿದ್ದು,  ಸಂಜೆ ಗುಡುಗು ಸಹಿತ ಮಳೆಯ ನಿರೀಕ್ಷೆ ಇದೆ.
ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿ ಮೋಡದ ವಾತಾವರಣ ಹಾಗೂ ಒಂದೆರಡು ಕಡೆ ಮಳೆಯ ಸಾಧ್ಯತೆ ಇದೆ.

ಏಪ್ರಿಲ್ 5ರಿಂದ ಮಳೆ ಕಡಿಮೆಯಾಗಲಿದೆ, ಏಪ್ರಿಲ್ 10ರಿಂದ ಮತ್ತೆ ಚುರುಕಾಗುವ ಸೂಚನೆ ಇದೆ.

ಉತ್ತರ ಒಳನಾಡು : ಬೆಳಗಾವಿ, ಧಾರವಾಡ, ಬಾಗಲಕೋಟೆ, ವಿಜಯಪುರ ಜಿಲ್ಲೆಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಇದೆ.
ಹಾವೇರಿ, ಗದಗ, ವಿಜಯನಗರ, ಬಳ್ಳಾರಿ ಭಾಗಗಳಲ್ಲಿ ತುಂತುರು ಮಳೆ ಹಾಗೂ ಮೋಡದ ವಾತಾವರಣ ಕಾಣಿಸಬಹುದು.

ಏಪ್ರಿಲ್ 2ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳು ಕಾಣಿಸುತ್ತಿವೆ.

ದಕ್ಷಿಣ ಒಳನಾಡು :  ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಮೋಡದ ವಾತಾವರಣ ಮುಂದುವರಿಯಲಿದೆ.
ಮಳೆಯ ಸಾಧ್ಯತೆ ಕಡಿಮೆ ಇದ್ದರೂ, ಗಾಳಿಯ ದಿಕ್ಕು ಬದಲಾಗಿದ್ರೆ ಮೈಸೂರು ಭಾಗದಲ್ಲಿ ಸಾಮಾನ್ಯ ಮಳೆಯ ಸಾಧ್ಯತೆ ಇದೆ.

ಏಪ್ರಿಲ್ 10ರಿಂದ ಮತ್ತೆ ಮಳೆಯ ವಾತಾವರಣ ಉಂಟಾಗುವ ಲಕ್ಷಣಗಳಿವೆ.

ವಿಶೇಷ ಹವಾಮಾನ ಸೂಚನೆ :  ಬಂಗಾಳಕೊಲ್ಲಿ ಮತ್ತು ಅರಬ್ಬಿ ಸಮುದ್ರದಲ್ಲಿ ಪ್ರತ್ಯಾವರ್ತ ಮಾರುತಗಳು ಚುರುಕಾಗುತ್ತಿದ್ದು, ಇದು ಮುಂದುವರಿದರೆ ಮುಂಗಾರು ದುರ್ಬಲವಾಗುವ ಸಾಧ್ಯತೆ ಇದೆ.  ಹವಾಮಾನ ವರದಿಗಳ ಪ್ರಕಾರ, ಜೂನ್ ತಿಂಗಳಲ್ಲಿ ಎಲ್‌ನಿನೋ ಪರಿಣಾಮದಿಂದ ಮುಂಗಾರು ದುರ್ಬಲವಾಗುವ ಸೂಚನೆಗಳಿವೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

Rainfall activity continues across coastal and Malnad regions of Karnataka until April 4, followed by a brief reduction. Weather models indicate rainfall may intensify again from April 10. El Niño conditions may weaken the upcoming monsoon.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಮಂಗಳೂರು ಅಡಿಕೆ ಮಾರುಕಟ್ಟೆ | ಸ್ಥಿರತೆಯಿಂದ ಏರಿಕೆಯತ್ತ ಮುಖ ಮಾಡಿದ ಧಾರಣೆ

ಅಡಿಕೆ ಮಾರುಕಟ್ಟೆ ಸ್ಥಿರದಿಂದ ಏರಿಕೆಯತ್ತ ಸಾಗುತ್ತಿದೆ. ಜೂನ್-ಜುಲೈನಲ್ಲಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.

1 hour ago

ಜನಗಣತಿ 2026 – ಏಪ್ರಿಲ್ 1ರಿಂದ ಸ್ವಯಂ-ಎಣಿಕೆ ಆರಂಭ – ಸಹಕರಿಸಲು ಜಿಲ್ಲಾಧಿಕಾರಿ ಕರೆ

ಏಪ್ರಿಲ್ 1ರಿಂದ 15ರವರೆಗೆ ಸ್ವಯಂ-ಎಣಿಕೆ ಆರಂಭವಾಗಿದೆ. ಏಪ್ರಿಲ್ 16ರಿಂದ ಮನೆಗಳಿಗೆ ಭೇಟಿ ನೀಡಿ…

2 hours ago

ಮಳೆಯ ನಡುವೆಯೂ ಉರಿಯುವ ಬಿಸಿಲು..! ಏಪ್ರಿಲ್–ಜೂನ್‌ನಲ್ಲಿ ಹವಾಮಾನ ಸವಾಲು..!

ಏಪ್ರಿಲ್‌ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…

1 day ago

ಗ್ಯಾಸ್ ಸಿಲಿಂಡರ್ ಕೊರತೆ ಪರಿಣಾಮ : ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆ

ಗ್ಯಾಸ್ ಸಿಲಿಂಡರ್ ಕೊರತೆಯಿಂದ ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆಯಾಗಿದೆ. ಕೇಂದ್ರದ ನೀತಿಗಳ…

1 day ago

ಹಸಿರು ಅಮೋನಿಯಾ ಒಪ್ಪಂದಗಳು | ಭಾರತದ ಇಂಧನ ಭದ್ರತೆಗೆ ಹೊಸ ಬಲ..! 2030 ಗುರಿಗೆ ವೇಗ

ಹಸಿರು ಅಮೋನಿಯಾ ಒಪ್ಪಂದಗಳು ಭಾರತದ ಇಂಧನ ಭದ್ರತೆಗೆ ದೊಡ್ಡ ಬಲ ನೀಡಲಿವೆ. 2030ರೊಳಗೆ…

1 day ago

ಕರಾವಳಿಯಲ್ಲಿ ಮಳೆಯ ರಭಸ | ಸುಬ್ರಹ್ಮಣ್ಯ ಆಸುಪಾಸಿನಲ್ಲಿ 50 ಮಿಮೀಗೂ ಹೆಚ್ಚು! ರಾಜ್ಯದ ಹಲವೆಡೆ ಇನ್ನೂ 2 ದಿನ ಮಳೆ ಅಲರ್ಟ್

ಮಾರ್ಚ್ ತಿಂಗಳಲ್ಲಿ ಅಪರೂಪದ ಭಾರೀ ಮಳೆ ಸುಬ್ರಹ್ಮಣ್ಯದಲ್ಲಿ ದಾಖಲಾಗಿದೆ. ರಾಜ್ಯದ ಹಲವೆಡೆ ಇನ್ನೂ…

1 day ago