ಹವಾಮಾನ ವರದಿ | 22-05-2026 | ಕರ್ನಾಟಕದಲ್ಲಿ ಇನ್ನೂ ಎರಡು ದಿನ ಮಳೆ ಸಾಧ್ಯತೆ – ಮೇ 30ರ ಸುಮಾರಿಗೆ ಮುಂಗಾರು ಪ್ರವೇಶ ಸಾಧ್ಯತೆ

May 22, 2026
1:14 PM
ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಸಂಜೆ ಹಾಗೂ ರಾತ್ರಿ ಮಳೆಯ ಸಾಧ್ಯತೆ ಇದೆ. ಮೇ 24ರಿಂದ ಮಳೆ ಕಡಿಮೆಯಾಗಲಿದ್ದು, ಮೇ 30ರ ಸುಮಾರಿಗೆ ಮುಂಗಾರು ಕರ್ನಾಟಕ ಪ್ರವೇಶಿಸುವ ನಿರೀಕ್ಷೆ ಇದೆ.

ಕರ್ನಾಟಕದ ವಿವಿಧ ಭಾಗಗಳಲ್ಲಿ ಇನ್ನೂ ಕೆಲವು ದಿನ ಸಂಜೆ ಹಾಗೂ ರಾತ್ರಿ ವೇಳೆ ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದ್ದು, ಮೇ 24ರಿಂದ ಹಲವೆಡೆ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳು ಕಾಣಿಸುತ್ತಿವೆ. ಇದೇ ವೇಳೆ ಮುಂಗಾರು ಮಾರುತಗಳು ಮೇ 30ರ ಸುಮಾರಿಗೆ ರಾಜ್ಯಕ್ಕೆ ಪ್ರವೇಶಿಸುವ ಸಾಧ್ಯತೆ ಇದೆ.

ಕರಾವಳಿಯಲ್ಲಿ ಸಂಜೆ ಮಳೆ, ಬಳಿಕ ಇಳಿಮುಖ :  ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಹಲವೆಡೆ ಸಂಜೆ ಮತ್ತು ರಾತ್ರಿ ವೇಳೆ ಮಳೆಯ ಮುನ್ಸೂಚನೆ ಇದೆ. ಘಟ್ಟದ ಕೆಳಭಾಗಗಳಲ್ಲಿ ಕೆಲವೆಡೆ ಗುಡುಗು ಸಹಿತ ಮಳೆಯ ಸಾಧ್ಯತೆಯೂ ಇದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಮೋಡ ಕವಿದ ವಾತಾವರಣದೊಂದಿಗೆ ತುಂತುರು ಮಳೆಯ ಲಕ್ಷಣಗಳಿವೆ.

ಪ್ರಸ್ತುತ ಸ್ಥಿತಿಯಂತೆ ಮೇ 24ರಿಂದ ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಸೂಚನೆಗಳಿವೆ.

ಮಲೆನಾಡಿನಲ್ಲಿ ಗುಡುಗು ಸಹಿತ ಮಳೆ : ಕೊಡಗು ಜಿಲ್ಲೆಯಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದ್ದರೆ, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಹಲವೆಡೆ ಸಂಜೆ ಮತ್ತು ರಾತ್ರಿ ವೇಳೆ ಗುಡುಗು ಸಹಿತ ಮಳೆಯ ಸಾಧ್ಯತೆ ಇದೆ.

ಮೇ 24ರಿಂದ ಮಲೆನಾಡು ಭಾಗಗಳಲ್ಲೂ ಮಳೆ ಇಳಿಮುಖವಾಗುವ ನಿರೀಕ್ಷೆ ವ್ಯಕ್ತವಾಗಿದೆ.

ಉತ್ತರ ಒಳನಾಡಿನಲ್ಲಿ ಗುಡುಗು ಸಾಧ್ಯತೆ : ಬಾಗಲಕೋಟೆ, ಗದಗ, ವಿಜಯಪುರ, ಕಲಬುರ್ಗಿ, ಬೀದರ್, ಯಾದಗಿರಿ, ರಾಯಚೂರು, ಕೊಪ್ಪಳ ಹಾಗೂ ಬಳ್ಳಾರಿ ಜಿಲ್ಲೆಗಳ ಹಲವೆಡೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.

ಬೆಳಗಾವಿ, ಧಾರವಾಡ ಹಾಗೂ ಹಾವೇರಿ ಜಿಲ್ಲೆಗಳಲ್ಲಿ ಗಾಳಿಯ ಒತ್ತಡ ಹೆಚ್ಚಾದರೆ ಮಾತ್ರ ಮಳೆಯ ಸಾಧ್ಯತೆ ಇದೆ ಎಂದು ತಿಳಿಸಲಾಗಿದೆ.

ದಕ್ಷಿಣ ಒಳನಾಡಿನಲ್ಲೂ ಮಳೆಯ ವಾತಾವರಣ : ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು ನಗರ ಹಾಗೂ ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ದಾವಣಗೆರೆ ಮತ್ತು ವಿಜಯನಗರ ಜಿಲ್ಲೆಗಳಲ್ಲೂ ಸಂಜೆ ಹಾಗೂ ರಾತ್ರಿ ವೇಳೆ ಗುಡುಗು ಸಹಿತ ಮಳೆಯ ಮುನ್ಸೂಚನೆ ನೀಡಲಾಗಿದೆ.

ಈ ಭಾಗಗಳಲ್ಲೂ ಮೇ 24ರಿಂದ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.

ಮುಂಗಾರು ಚಟುವಟಿಕೆ ಏನಿದೆ?: ದಕ್ಷಿಣ ಸಮುದ್ರ ಭಾಗದಿಂದ ಬೀಸುತ್ತಿರುವ “ಸೋಮಾಲಿ ಜೆಟ್‌ ವೇವ್ಸ್” ಪರಿಣಾಮದಿಂದ ರಾಜ್ಯದಲ್ಲಿ ಮಳೆಯ ಚಟುವಟಿಕೆ ಮುಂದುವರಿದಿದೆ. ದಕ್ಷಿಣ ಸಮುದ್ರ ಭಾಗದ ತಿರುಗುವಿಕೆ ಆಸ್ಟ್ರೇಲಿಯಾದ ನೈರುತ್ಯ ಕರಾವಳಿಯತ್ತ ಚಲಿಸುತ್ತಿದ್ದಂತೆ ಮುಂಗಾರು ಮಾರುತಗಳು ಚುರುಕಾಗುವ ಸಾಧ್ಯತೆ ಇದೆ.

ಈಗಿನ ಲೆಕ್ಕಾಚಾರದಂತೆ ಮೇ 30ರ ಸುಮಾರಿಗೆ ಮುಂಗಾರು ಕರ್ನಾಟಕ ಪ್ರವೇಶಿಸುವ ನಿರೀಕ್ಷೆ ಇದೆ.

Rainfall activity is likely to continue across many parts of Karnataka till May 24, especially during evenings and nights. Coastal, Malnad, North Interior and South Interior districts may receive scattered thunderstorms. Weather analysts indicate that monsoon winds may enter Karnataka around May 30.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಕೃಷಿ ಯೋಜನೆಯ ಪ್ರಗತಿಯಲ್ಲಿ ತುಮಕೂರಿಗೆ ರಾಜ್ಯದಲ್ಲೇ ಮೊದಲ ಸ್ಥಾನ
October 12, 2026
12:17 PM
by: ದ ರೂರಲ್ ಮಿರರ್.ಕಾಂ
ಬರಗಾಲದಲ್ಲೂ ಬೆಳೆ ಉಳಿಸಿದ ಸಾವಯವ ಕೃಷಿ – ಸಾವಯವ ಕೃಷಿ ಅಬ್ಬರಿಸಿ ಬರುವುದಿಲ್ಲ- ಮುಗ್ಗರಿಸಿ ಬೀಳುವುದಿಲ್ಲ..!
October 12, 2026
7:30 AM
by: ಮಹೇಶ್ ಪುಚ್ಚಪ್ಪಾಡಿ
ರಾಜ್ಯಾದ್ಯಂತ ನವರಾತ್ರಿ ಸಂಭ್ರಮ : ಶಕ್ತಿಪೀಠಗಳಲ್ಲಿ ವಿಶೇಷ ಪೂಜೆ, ಮಂಗಳೂರು–ಮಡಿಕೇರಿ–ಶ್ರೀರಂಗಪಟ್ಟಣದಲ್ಲಿ ದಸರಾ ಸಂಭ್ರಮ
October 11, 2026
10:37 AM
by: ದ ರೂರಲ್ ಮಿರರ್.ಕಾಂ
ಪಶ್ಚಿಮ ಘಟ್ಟ ಉಳಿಸಿ, ಉತ್ತರ ಕನ್ನಡ ರಕ್ಷಿಸಿ : ಬೇಡ್ತಿ–ಅಘನಾಶಿನಿ ನದಿ ತಿರುವು ಯೋಜನೆಗೆ ವಿರೋಧ
October 11, 2026
10:24 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror