ಕರ್ನಾಟಕದಲ್ಲಿ ಮುಂಗಾರು ಸಂಪೂರ್ಣವಾಗಿ ಹಿಂದೆ ಸರಿಯುವ ಮುನ್ನವೇ ಮಳೆಯ ವಾತಾವರಣದಲ್ಲಿ ಬದಲಾವಣೆಯ ಲಕ್ಷಣಗಳು ಗೋಚರಿಸುತ್ತಿವೆ. ಸೆ. 28ರಿಂದ ರಾಜ್ಯದ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಭಾಗಗಳಲ್ಲಿ ಗುಡುಗು ಸಹಿತ ಮಳೆಯ ಸಾಧ್ಯತೆ ಇದ್ದು, ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಸೆ. 29 ಮತ್ತು 30ರಂದು ಮಳೆ ಚಟುವಟಿಕೆ ಹೆಚ್ಚಾಗುವ ಮುನ್ಸೂಚನೆ ಇದೆ.
ಕರಾವಳಿಯಲ್ಲಿ ಹೇಗಿರಲಿದೆ ಹವಾಮಾನ? : ಸೆ.27ರ ಬೆಳಿಗ್ಗೆ 8 ಗಂಟೆಯವರೆಗೆ ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಇರಲಿದೆ. ಕರಾವಳಿ ತೀರದ ಕೆಲವೆಡೆ ಹಾಗೂ ಕರ್ನಾಟಕ–ಕೇರಳ ಗಡಿಭಾಗದ ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯಿದೆ. ಆದರೆ ಸೆ. 28ರಿಂದ ಕರಾವಳಿ ಜಿಲ್ಲೆಗಳ ಹಲವೆಡೆ ಹಿಂಗಾರು ರೀತಿಯ ಗುಡುಗು ಸಹಿತ ಮಳೆ ಆರಂಭವಾಗುವ ಲಕ್ಷಣಗಳಿವೆ.
ಮಲೆನಾಡಿನಲ್ಲೂ ಮಳೆ ಸಾಧ್ಯತೆ : ಕೊಡಗು ಜಿಲ್ಲೆಯಲ್ಲಿ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ, ಕುದುರೆಮುಖ ಹಾಗೂ ಶೃಂಗೇರಿ ಸುತ್ತಮುತ್ತಲಿನ ಪ್ರದೇಶಗಳಲ್ಲಿ ತುಂತುರು ಮಳೆಯ ಸಾಧ್ಯತೆಯಿದೆ. ಹಾಸನದ ಸಕಲೇಶಪುರ, ಚಿಕ್ಕಮಗಳೂರಿನ ಉಳಿದ ಭಾಗಗಳು ಹಾಗೂ ಶಿವಮೊಗ್ಗ ಜಿಲ್ಲೆಯಲ್ಲಿ ಬಿಸಿಲು ಮತ್ತು ಅಲ್ಲಲ್ಲಿ ಮೋಡದ ವಾತಾವರಣ ಇರಲಿದೆ.
ಸೆ. 28ರಿಂದ ಮಲೆನಾಡಿನ ಹೆಚ್ಚಿನ ಭಾಗಗಳಲ್ಲಿ ಗುಡುಗು ಸಹಿತ ಮಳೆ ಆರಂಭವಾಗುವ ಸಾಧ್ಯತೆಯಿದೆ.
ಉತ್ತರ ಒಳನಾಡಿನಲ್ಲಿ ಸೆ.29–30ರಂದು ಮಳೆ : ಧಾರವಾಡ, ಗದಗ, ವಿಜಯಪುರ ಹಾಗೂ ಕೊಪ್ಪಳ ಜಿಲ್ಲೆಗಳ ಕೆಲವೆಡೆ ಮತ್ತು ಬಾಗಲಕೋಟೆ, ರಾಯಚೂರು ಜಿಲ್ಲೆಗಳ ಒಂದೆರಡು ಕಡೆ ಸಾಮಾನ್ಯ ಮಳೆಯ ಸಾಧ್ಯತೆಯಿದೆ. ಸೆ. 29 ಮತ್ತು 30ರಂದು ಬೆಳಗಾವಿ, ಧಾರವಾಡ, ಹಾವೇರಿ, ಗದಗ ಹಾಗೂ ಬಾಗಲಕೋಟೆ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಸಾಧ್ಯತೆ ಇದೆ. ಉಳಿದ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಮೋಡದ ವಾತಾವರಣ ಇರುವ ಸಾಧ್ಯತೆಯಿದೆ.
ದಕ್ಷಿಣ ಒಳನಾಡಿಗೂ ಮಳೆ : ಹಾಸನ ಜಿಲ್ಲೆಯ ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯಿದ್ದು, ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ಮೋಡ ಕವಿದ ವಾತಾವರಣ ಇರಲಿದೆ. ಸೆ. 28ರಿಂದ ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಸಾಧ್ಯತೆಯಿದೆ.
ಮಳೆಯ ವಾತಾವರಣಕ್ಕೆ ಕಾರಣವೇನು? : ಪ್ರಸ್ತುತ ವಾಯುಭಾರ ಕುಸಿತವು ಉತ್ತರ ಪ್ರದೇಶದ ಉತ್ತರ ಭಾಗಗಳು, ಉತ್ತರಾಖಂಡ ಮತ್ತು ಹಿಮಾಚಲ ಪ್ರದೇಶಗಳಲ್ಲಿ ಭಾರಿ ಮಳೆಗೆ ಕಾರಣವಾಗಿದ್ದು, ಮುಂದಿನ ಎರಡು ದಿನಗಳಲ್ಲಿ ಅಲ್ಲಿಯೇ ಕ್ರಮೇಣ ಶಿಥಿಲಗೊಳ್ಳುವ ಲಕ್ಷಣಗಳಿವೆ.
ಇದೇ ವೇಳೆ ಬಂಗಾಳಕೊಲ್ಲಿಯ ಥೈಲ್ಯಾಂಡ್–ಮ್ಯಾನ್ಮಾರ್ ಕರಾವಳಿ ಭಾಗದಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಸೆ. 29–30ರ ವೇಳೆಗೆ ಅಲ್ಲಿಯೇ ಶಿಥಿಲಗೊಳ್ಳುವ ಸಾಧ್ಯತೆಯಿದೆ.
ಮುಂಗಾರು ಇನ್ನೂ ಅಧಿಕೃತವಾಗಿ ಸಂಪೂರ್ಣವಾಗಿ ಹಿಂದೆ ಸರಿದಿಲ್ಲ. ಹೀಗಾಗಿ ರಾಜ್ಯದಲ್ಲಿ ಹಿಂಗಾರು ಮಳೆ ಅಧಿಕೃತವಾಗಿ ಆರಂಭವಾಗಿದೆ ಎಂದು ಹೇಳಲು ಸಾಧ್ಯವಿಲ್ಲ. ಆದರೆ ಸೆ. 28ರಿಂದ ಮುಂದಿನ ಒಂದು ವಾರದ ಅವಧಿಯಲ್ಲಿ ಅರಬ್ಬಿ ಸಮುದ್ರದ ಗಾಳಿಯು ಶ್ರೀಲಂಕಾ ಮತ್ತು ತಮಿಳುನಾಡು ಕರಾವಳಿ ಮೂಲಕ ಭೂಭಾಗದತ್ತ ಪ್ರವೇಶಿಸುವ ವಾತಾವರಣ ನಿರ್ಮಾಣವಾಗುವ ಸಾಧ್ಯತೆಯಿದೆ. ಇದರ ಪರಿಣಾಮವಾಗಿ ಕರ್ನಾಟಕದ ಹಲವು ಭಾಗಗಳಲ್ಲಿ ಹಿಂಗಾರು ಮಳೆಯ ರೀತಿಯ ಗುಡುಗು ಸಹಿತ ಮಳೆ ಕಂಡುಬರುವ ಸಾಧ್ಯತೆಯಿದೆ.
ಒಟ್ಟಿನಲ್ಲಿ, ಸೆ. 28ರಿಂದ ರಾಜ್ಯದಲ್ಲಿ ಮಳೆಯ ವಾತಾವರಣ ಮತ್ತೆ ಚುರುಕಾಗುವ ಸಾಧ್ಯತೆಯಿದ್ದು, ಕರಾವಳಿ ಮತ್ತು ಮಲೆನಾಡಿನ ನಂತರ ದಕ್ಷಿಣ ಹಾಗೂ ಉತ್ತರ ಒಳನಾಡಿನ ಕೆಲವು ಭಾಗಗಳಿಗೂ ಮಳೆ ವಿಸ್ತರಿಸುವ ಮುನ್ಸೂಚನೆ ಇದೆ.
ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ-ಹವಾಮಾನ ಬದಲಾವಣೆ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಫಾಲೋಮಾಡಲು ಇಲ್ಲಿ ಕ್ಲಿಕ್ ಮಾಡಿ
Karnataka is likely to witness a renewed spell of rainfall from September 28, with thunderstorm activity expected across several coastal, Malnad and South Interior districts. Parts of North Interior Karnataka may receive thunderstorms on September 29–30. Although the southwest monsoon has not completely withdrawn, changing wind patterns from the Arabian Sea through Sri Lanka and the Tamil Nadu coast could bring rainfall resembling the northeast monsoon pattern during the coming week.
ಅಡಿಕೆ ಸಿಪ್ಪೆ, ಸೋಗೆ ಮತ್ತು ಇತರ ಕೃಷಿ ಅವಶೇಷಗಳಿಂದ ಕಾರ್ಬನ್ ನ್ಯಾನೋಸ್ಫಿಯರ್ಗಳನ್ನು ಅಭಿವೃದ್ಧಿಪಡಿಸಿ,…
ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ಮರುನಾಮಕರಣ ಮಾಡುವ ಪ್ರಸ್ತಾವನೆಗೆ ಬೆಳ್ಳಾರೆ…
ಸುಬ್ರಹ್ಮಣ್ಯದಲ್ಲಿ ಐದು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಶ್ರೀ ಹೋಮಿಯೋಕೇರ್ ಗುತ್ತಿಗಾರಿಗೆ ಸ್ಥಳಾಂತರಗೊಂಡಿದ್ದು, ಎಸ್ಎಂಎಸ್ಜಿ ಕಾಂಪ್ಲೆಕ್ಸ್ನಲ್ಲಿ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಗುಡುಗು…
ಕರ್ನಾಟಕದಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಜುಲೈ 1ರಿಂದ ಅಕ್ಟೋಬರ್ 14ರವರೆಗೆ ದಾಖಲೆಯ…