Advertisement
ವೆದರ್ ಮಿರರ್

ಹವಾಮಾನ ವರದಿ | 18-03-2026 | ಗುಡುಗು-ಆಲಿಕಲ್ಲು ಮಳೆ ಅಲರ್ಟ್‌ | ರಾಜ್ಯಾದ್ಯಂತ ಹವಾಮಾನ ಬದಲಾವಣೆ..!

Share

ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಇಂದು ಸಂಜೆ ಹಾಗೂ ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದ್ದು, ಗಾಳಿಯ ದಿಕ್ಕು ಸ್ಪಷ್ಟವಾಗಿಲ್ಲದ ಕಾರಣ ಕೆಲವು ಕಡೆ ಆಲಿಕಲ್ಲು ಮಳೆಯೂ ದಾಖಲಾಗುವ ಸಾಧ್ಯತೆ ಇದೆ.

ರಾಜ್ಯದಲ್ಲಿ ಹವಾಮಾನದಲ್ಲಿ ಏಕಾಏಕಿ ಬದಲಾವಣೆ ಕಾಣಿಸಿಕೊಂಡಿದ್ದು, ಮಾರ್ಚ್‌ 19ರ ಬೆಳಿಗ್ಗೆ 8 ಗಂಟೆವರೆಗಿನ ಮುನ್ಸೂಚನೆಯ ಪ್ರಕಾರ ಬಹುತೇಕ ಜಿಲ್ಲೆಗಳಲ್ಲಿ ಸಂಜೆ ಹಾಗೂ ರಾತ್ರಿ ಗುಡುಗು-ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇದೆ.

ಕರಾವಳಿ ಜಿಲ್ಲೆಗಳು :  ಕಾಸರಗೋಡು, ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಸಂಜೆ ಮತ್ತು ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಆದರೆ ಕರಾವಳಿ ತೀರ ಪ್ರದೇಶಗಳಲ್ಲಿ ಸಂಜೆ ಮಳೆ ಕಡಿಮೆಯಾಗಿದ್ದರೆ ಮುಂಜಾನೆ ವೇಳೆಯಲ್ಲಿ ಮಳೆಯಾಗುವ ಸಾಧ್ಯತೆ ಇದೆ.

ಮಲೆನಾಡು ಜಿಲ್ಲೆಗಳು :  ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಸಂಜೆ ಹಾಗೂ ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.

ಉತ್ತರ ಒಳನಾಡು : ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಬಾಗಲಕೋಟೆ, ದಾವಣಗೆರೆ, ವಿಜಯನಗರ, ಬಳ್ಳಾರಿ, ಕೊಪ್ಪಳ, ವಿಜಯಪುರ, ಕಲಬುರ್ಗಿ, ರಾಯಚೂರು, ಯಾದಗಿರಿ ಹಾಗೂ ಬೀದರ್ ಜಿಲ್ಲೆಗಳ ಕೆಲ ಭಾಗಗಳಲ್ಲಿ ಗುಡುಗು-ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇದೆ.

ದಕ್ಷಿಣ ಒಳನಾಡು : ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮಾಂತರ ಮತ್ತು ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು (ಪಾವಗಢ ಸೇರಿ) ಹಾಗೂ ಚಿತ್ರದುರ್ಗ ಜಿಲ್ಲೆಗಳಲ್ಲೂ ಸಂಜೆ ಮತ್ತು ರಾತ್ರಿ ಮಳೆಯ ಮುನ್ಸೂಚನೆ ನೀಡಲಾಗಿದೆ.

 ಗಾಳಿಯ ವೇಗ ಅತಿ ನಿಧಾನವಾಗಿದ್ದು ಹಾಗೂ ನಿರ್ದಿಷ್ಟ ದಿಕ್ಕು ಇಲ್ಲದ ಕಾರಣ ಕೆಲ ಭಾಗಗಳಲ್ಲಿ ಆಲಿಕಲ್ಲು ಸಹಿತ ಮಳೆಯ ಘಟನೆಗಳು ಕಂಡು ಬರುತ್ತಿವೆ.

ರಾಜ್ಯದಲ್ಲಿ ಈ ಮಳೆಯ ಚಟುವಟಿಕೆಗಳು ಮಾರ್ಚ್‌ 20ರವರೆಗೆ ಮುಂದುವರಿಯುವ ಲಕ್ಷಣಗಳಿದ್ದು, ಬಳಿಕ ಮಾರ್ಚ್‌ 25 ಅಥವಾ 27ರವರೆಗೆ ಕರಾವಳಿಯ ಕಾಸರಗೋಡು, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳು ಹಾಗೂ ಮಲೆನಾಡಿನ ಕೊಡಗು ಜಿಲ್ಲೆಯಲ್ಲಿ ಮಳೆ ಮುಂದುವರಿಯುವ ಸಾಧ್ಯತೆ ಇದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

Thunderstorms with rain are likely across most districts of Karnataka, especially during evening and night hours. The rainfall activity may continue until March 20 statewide, while coastal districts like Dakshina Kannada, Udupi and Kodagu region may receive intermittent rains until March 25–27.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ದಕ್ಷಿಣ ಕನ್ನಡ–ಉಡುಪಿ ಭಾಗದಲ್ಲಿ 8–10% ಎಳೆ ಅಡಿಕೆ ಉದುರಿದೆ…!, ರಾಜ್ಯದಲ್ಲಿ ಎಲೆಚುಕ್ಕೆ ರೋಗದಿಂದ 88,559 ಹೆಕ್ಟೇರ್ ಹಾನಿ

ದಕ್ಷಿಣ ಕನ್ನಡ ಮತ್ತು ಉಡುಪಿ ಭಾಗದಲ್ಲಿ 8–10% ಎಳೆ ಅಡಿಕೆ ಉದುರುವುದಾಗಿ ಅಂದಾಜಿಸಲಾಗಿದ್ದು,…

8 hours ago

ಚಾಮರಾಜನಗರ–ಬೆಳಗಾವಿಯಲ್ಲಿ ಭಾರೀ ಆಲಿಕಲ್ಲು ಮಳೆ | ಬಿಸಿಲಿನ ನಡುವೆ ಇಳೆ ತಂಪು, ರೈತರಿಗೆ ಆತಂಕ

ಚಾಮರಾಜನಗರ ಮತ್ತು ಬೆಳಗಾವಿಯಲ್ಲಿ ಭಾರೀ ಆಲಿಕಲ್ಲು ಮಳೆ ಸುರಿದು ರೈತರು ಆತಂಕಗೊಂಡಿದ್ದಾರೆ. ಬೆಂಗಳೂರಿನ…

9 hours ago

ವಿದ್ಯುತ್ ಕೊರತೆಯ ನಿರ್ಣಾಯಕ ಸಮಸ್ಯೆಗೆ ಪರಿಹಾರ : ದೇಶದ ಸ್ಥಾಪಿತ ಸಾಮರ್ಥ್ಯ 520 ಗಿಗಾ ವ್ಯಾಟ್‌ ದಾಟಿತು

ದೇಶದಲ್ಲಿ ವಿದ್ಯುತ್ ಉತ್ಪಾದನಾ ಸಾಮರ್ಥ್ಯವನ್ನು 520 ಗಿಗಾ ವ್ಯಾಟ್‌ಗಿಂತ ಹೆಚ್ಚು ಮಟ್ಟಕ್ಕೆ ಹೆಚ್ಚಿಸಲಾಗಿದೆ…

9 hours ago

ಅಡಿಕೆ ಹಾನಿಕಾರಕವಲ್ಲ – ಅಧ್ಯಯನ ಪ್ರಗತಿಯಲ್ಲಿ | ಹಾಳೆತಟ್ಟೆ ಹಾನಿಕಾರಕವಲ್ಲ

ಅಡಿಕೆಯ ಆರೋಗ್ಯ ಪರಿಣಾಮ ಹಾಗೂ ಸುರಕ್ಷತೆ ಕುರಿತು ರಾಷ್ಟ್ರೀಯ ಮಟ್ಟದ ಸಂಸ್ಥೆಗಳೊಂದಿಗೆ ಸಂಯುಕ್ತ…

17 hours ago

ಗಿರಿಪ್ರದೇಶಗಳಲ್ಲಿ ಸ್ವಚ್ಛತಾ ಅಭಿಯಾನ | ಮುಳ್ಳಯ್ಯನಗಿರಿ–ಸೀತಾಳಯ್ಯಗಿರಿಯಲ್ಲಿ ಜಾಗೃತಿ ಕಾರ್ಯ

ಮುಳ್ಳಯ್ಯನಗಿರಿ ಮತ್ತು ಸೀತಾಳಯ್ಯಗಿರಿ ಪ್ರದೇಶಗಳಲ್ಲಿ ಸ್ವಚ್ಛತಾ ಅಭಿಯಾನ ನಡೆಸಿ ಪ್ರವಾಸಿಗರಿಗೆ ಜಾಗೃತಿ ಮೂಡಿಸಲಾಯಿತು.…

18 hours ago

ಹಾಲು ಉತ್ಪಾದಕರಿಗೆ ಸಿಹಿ ಸುದ್ದಿ | ಲೀಟರ್‌ಗೆ ₹2 ಹೆಚ್ಚಳ ಘೋಷಿಸಿದ ಕೋಮುಲ್

ಯುಗಾದಿ ಹಿನ್ನೆಲೆ ಕೋಲಾರ ಜಿಲ್ಲೆಯಲ್ಲಿ ಹಾಲಿನ ದರ ಲೀಟರ್‌ಗೆ ₹2 ಹೆಚ್ಚಳ ಮಾಡಲಾಗಿದೆ.…

18 hours ago