ಹವಾಮಾನ ವರದಿ | 29-03-2026 | ಕರ್ನಾಟಕದಲ್ಲಿ ಮತ್ತೆ ಮಳೆ…! ನಿಮ್ಮ ಜಿಲ್ಲೆಯಲ್ಲಿ ಮಳೆ ಇದೆಯಾ..?

March 29, 2026
2:48 PM
ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆಯ ಚಟುವಟಿಕೆ ಮತ್ತೆ ಆರಂಭವಾಗುತ್ತಿದೆ. ಕರಾವಳಿ ಜಿಲ್ಲೆಗಳಲ್ಲಿ ಏಪ್ರಿಲ್ 5 ರವರೆಗೆ ಮಳೆಯ ನಿರೀಕ್ಷೆ ಇದೆ.

ರಾಜ್ಯದ ವಿವಿಧ ಭಾಗಗಳಲ್ಲಿ ಹವಾಮಾನದಲ್ಲಿ ಮತ್ತೆ ಬದಲಾವಣೆ ಕಂಡುಬರುತ್ತಿದ್ದು, ಮುಂದಿನ ಕೆಲವು ದಿನಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.

ಕರಾವಳಿ ಭಾಗ :   ಕರ್ನಾಟಕ ಕರಾವಳಿ ಹಾಗೂ ಕಾಸರಗೋಡು ಜಿಲ್ಲೆಯಲ್ಲಿ ಹೆಚ್ಚಿನ ಅವಧಿ ಮೋಡ ಹಾಗೂ ಹೆಚ್ಚು ತಾಪಮಾನ ಕಂಡುಬರುವ ಸಾಧ್ಯತೆ ಇದ್ದು, ಮಳೆಯ ಸಾಧ್ಯತೆ ಕಡಿಮೆ. ಆದರೆ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಘಟ್ಟದ ಕೆಳಭಾಗದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ, ಕಾರ್ಕಳ, ಹೆಬ್ರಿ ಸುತ್ತಮುತ್ತ ಪ್ರದೇಶಗಳಲ್ಲಿ ಸಂಜೆ ಹಾಗೂ ರಾತ್ರಿ ವೇಳೆ ಗುಡುಗು ಸಹಿತ ಸಾಮಾನ್ಯ ಮಳೆಯ ಸಾಧ್ಯತೆ ಇದೆ.

ಉಳಿದ ಪ್ರದೇಶಗಳಲ್ಲಿ ಗಾಳಿಯ ತೀವ್ರತೆ ಹೆಚ್ಚಾದಲ್ಲಿ ತುಂತುರು ಮಳೆಯ ಸಂಭವ ಇದೆ. ಕೇರಳ-ಕರ್ನಾಟಕ ಗಡಿ ಭಾಗಗಳಲ್ಲಿ ಮುಂಜಾನೆ ತುಂತುರು ಮಳೆಯ ಸಾಧ್ಯತೆ ಕೂಡ ಇದೆ.  ಮುಖ್ಯವಾಗಿ, ಕರಾವಳಿ ಜಿಲ್ಲೆಗಳಲ್ಲಿ ಏಪ್ರಿಲ್ 5ರವರೆಗೆ ಮಳೆಯ ನಿರೀಕ್ಷೆ ಇದೆ.

ಮಲೆನಾಡು ಭಾಗ : ಮಲೆನಾಡು, ಕೊಡಗು ಮತ್ತು ಹಾಸನ ಜಿಲ್ಲೆಗಳಲ್ಲಿ ಸಂಜೆ ಹಾಗೂ ರಾತ್ರಿ ವೇಳೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.

ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳ ಕರಾವಳಿ ಭಾಗಗಳಿಗೆ ಹೊಂದಿಕೊಂಡ ಪ್ರದೇಶಗಳಲ್ಲಿ ಸಹ ಇದೇ ರೀತಿಯ ಮಳೆಯ ಸಾಧ್ಯತೆ ಇದೆ.

ಉಳಿದ ಪ್ರದೇಶಗಳಲ್ಲಿ ಗಾಳಿಯ ಒತ್ತಡ ಹೆಚ್ಚಾದಲ್ಲಿ ತುಂತುರು ಮಳೆಯಾಗುವ ಸಾಧ್ಯತೆ ಇದೆ.

ಉತ್ತರ ಒಳನಾಡು :  ಉತ್ತರ ಒಳನಾಡು ಕರ್ನಾಟಕ , ಮೋಡದ ವಾತಾವರಣ ಇದ್ದರೂ ಮಳೆಯ ಪ್ರಮಾಣ ಕಡಿಮೆ.
ಮಾರ್ಚ್ 30ರಿಂದ ಕೆಲವೆಡೆ ಮಳೆಯ ಚಟುವಟಿಕೆ ಆರಂಭವಾಗುವ ಸಾಧ್ಯತೆ ಇದೆ. 

ದಕ್ಷಿಣ ಒಳನಾಡು : ದಕ್ಷಿಣ ಒಳನಾಡು ಕರ್ನಾಟಕ,  ಮೈಸೂರು, ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಮತ್ತು ಚಿತ್ರದುರ್ಗ ಜಿಲ್ಲೆಗಳಲ್ಲೂ ಸಂಜೆ ಮತ್ತು ರಾತ್ರಿ ಗುಡುಗು ಸಹಿತ ಮಳೆಯ ಸಾಧ್ಯತೆ ಇದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

ಹವಾಮಾನ ಕಾರಣ : ಬಂಗಾಳಕೊಲ್ಲಿಯಲ್ಲಿ ಉಂಟಾದ ಪ್ರತ್ಯಾವರ್ತ ಮಾರುತ ದುರ್ಬಲವಾಗುತ್ತಿದೆಯಾದರೂ ಅದರ ಪ್ರಭಾವ ಏಪ್ರಿಲ್ ಮೊದಲ ವಾರದವರೆಗೆ ಮುಂದುವರಿಯುವ ಸೂಚನೆಗಳಿವೆ.

Karnataka is expected to witness scattered thunder showers across coastal, Malnad, and southern interior regions until early April. Coastal districts may receive intermittent rainfall till April 5 due to the weakening anti-cyclonic circulation over the Bay of Bengal.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಹವಾಮಾನ ವರದಿ | 04-08-2026 | ರಾಜ್ಯದಲ್ಲಿ ಆಗಸ್ಟ್‌ 12 ರವರೆಗೆ ಮಳೆ ಸಾಧ್ಯತೆ – ಮುಂಗಾರು ದುರ್ಬಲವಾಗುವ ಲಕ್ಷಣ
August 4, 2026
2:07 PM
by: ಸಾಯಿಶೇಖರ್ ಕರಿಕಳ
ಗ್ರಾಮೀಣ ಭಾರತದ ಆದಾಯಕ್ಕೆ ಹಿನ್ನಡೆ – ಕಳೆದ ವರ್ಷ ಅರ್ಧದಷ್ಟು ಕುಟುಂಬಗಳ ಆದಾಯದಲ್ಲಿ ಏರಿಕೆಯಾಗಿಲ್ಲ
August 4, 2026
7:45 AM
by: ದ ರೂರಲ್ ಮಿರರ್.ಕಾಂ
ಮುಂದುವರಿದ ಮಳೆ ಅಬ್ಬರ : ಆಗಸ್ಟ್‌ 4ರಂದು ದ ಕ -ಉಡುಪಿ-ಕಾಸರಗೋಡು ಜಿಲ್ಲೆಯ ಕೆಲವು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ
August 3, 2026
10:48 PM
by: ದ ರೂರಲ್ ಮಿರರ್.ಕಾಂ
ಯಡಕುಮೇರಿ ಹಳಿ ದುರಸ್ತಿ ಪೂರ್ಣ : ಮಂಗಳೂರು–ಬೆಂಗಳೂರು ರೈಲು ರೈಲು ಸಂಚಾರ ಪುನರಾರಂಭ
August 3, 2026
10:24 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror