Advertisement
ವೆದರ್ ಮಿರರ್

ಹವಾಮಾನ ವರದಿ | 24-03-2026 | ಕರ್ನಾಟಕದಲ್ಲಿ ಮತ್ತೆ ಮಳೆ ಅಲರ್ಟ್‌ | ಈ ದಿನದಿಂದ ಮಳೆ ವ್ಯಾಪ್ತಿ ಹೆಚ್ಚಳ ಸಾಧ್ಯತೆ..!

Share

ರಾಜ್ಯದ ವಿವಿಧ ಭಾಗಗಳಲ್ಲಿ ಸಂಜೆ ವೇಳೆಗೆ ಗುಡುಗು ಸಹಿತ ಮಳೆಯ ಸಾಧ್ಯತೆ ಇದ್ದು, ಮಾರ್ಚ್‌ 27 ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ನಿರೀಕ್ಷೆಯಿದೆ. ಕರಾವಳಿ, ಮಲೆನಾಡು, ಉತ್ತರ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲೂ ಸ್ಥಳೀಯ ತೇವಾಂಶದ ಮೋಡಗಳ ಪರಿಣಾಮವಾಗಿ ಚದುರಿದ ಮಳೆಯ ಸಾಧ್ಯತೆಗಳಿವೆ.

ಕರಾವಳಿ ಭಾಗ :  ಕಾಸರಗೋಡು ಜಿಲ್ಲೆಯಲ್ಲಿ ಬಿಸಿಲಿನ ನಡುವೆಯೇ ಮಧ್ಯಾಹ್ನ ನಂತರ ಅಲ್ಲಲ್ಲಿ ಮೋಡ ಕವಿದ ವಾತಾವರಣ ಕಾಣಿಸಿಕೊಳ್ಳುವ ಸಾಧ್ಯತೆ ಇದೆ. ಗಾಳಿಯ ಒತ್ತಡ ಹೆಚ್ಚಾದರೆ ಸಂಜೆ ವೇಳೆಗೆ ಕೆಲ ಭಾಗಗಳಲ್ಲಿ ಸಾಮಾನ್ಯ ಮಳೆಯಾಗುವ ನಿರೀಕ್ಷೆ ಇದೆ.
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಘಟ್ಟದ ಕೆಳಭಾಗದ ಪ್ರದೇಶಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ನೀಡಲಾಗಿದೆ. ಉಳಿದ ಭಾಗಗಳಲ್ಲಿಯೂ ಗಾಳಿಯ ಒತ್ತಡ ಹೆಚ್ಚಾದರೆ ಚದುರಿದ ಮಳೆಯ ಸಾಧ್ಯತೆಗಳಿವೆ.
ಉತ್ತರ ಕನ್ನಡ ಜಿಲ್ಲೆಯಲ್ಲಿ ಧಾರವಾಡ ಮತ್ತು ಬೆಳಗಾವಿ ಗಡಿಭಾಗದ ಕಡೆ ಸಂಜೆ ವೇಳೆಗೆ ಮಳೆ ಸಾಧ್ಯತೆ ಇದೆ.  ಪ್ರಸ್ತುತ ಕೆಲವೇ ಭಾಗಗಳಲ್ಲಿ ಮಳೆ ಜೋರಾಗುವ ಲಕ್ಷಣಗಳಿದ್ದು, ಹೆಚ್ಚಿನ ಭಾಗಗಳಲ್ಲಿ ಮೋಡಕ್ಕೆ ತಕ್ಕಷ್ಟು ಮಳೆಯಾಗದಿರಬಹುದು. ಆದರೆ ಮಾರ್ಚ್‌ 27ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ನಿರೀಕ್ಷೆ ಇದೆ.

ಮಲೆನಾಡು ಭಾಗ :  ಕೊಡಗು, ಹಾಸನ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳ ಹಲವು ಕಡೆಗಳಲ್ಲಿ ಸಂಜೆ ವೇಳೆಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಮಾರ್ಚ್‌ 27ರಿಂದ ಮಳೆಯ ಪ್ರಮಾಣ ಹೆಚ್ಚಾಗುವ ನಿರೀಕ್ಷೆಯಿದ್ದು, ಈ ಸ್ಥಿತಿ ಏಪ್ರಿಲ್‌ ಮೊದಲ ವಾರದವರೆಗೆ ಮುಂದುವರಿಯುವ ಲಕ್ಷಣಗಳಿವೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

ಉತ್ತರ ಒಳನಾಡು :  ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಬಾಗಲಕೋಟೆ, ವಿಜಯಪುರ, ದಾವಣಗೆರೆ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳಲ್ಲಿಯೂ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಇದೆ.
ಉಳಿದ ಜಿಲ್ಲೆಗಳಲ್ಲಿ ಗಾಳಿಯ ಒತ್ತಡ ಹೆಚ್ಚಾದರೆ ಚದುರಿದ ಮಳೆಯಾಗಬಹುದು. ಮಾರ್ಚ್‌ 27ರಿಂದ ಮಳೆಯ ಪ್ರಮಾಣ ಸ್ವಲ್ಪ ಕಡಿಮೆಯಾಗುವ ಲಕ್ಷಣಗಳಿದ್ದರೂ, ಮಾರ್ಚ್‌ 30ರಿಂದ ಮತ್ತೆ ಬಹುತೇಕ ಭಾಗಗಳಲ್ಲಿ ಮಳೆಯ ನಿರೀಕ್ಷೆ ಇದೆ.

ದಕ್ಷಿಣ ಒಳನಾಡು :  ಮೈಸೂರು, ಚಿತ್ರದುರ್ಗ ಮತ್ತು ತುಮಕೂರು ಜಿಲ್ಲೆಗಳ ಕೆಲ ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಇದೆ.
ಉಳಿದ ಜಿಲ್ಲೆಗಳಲ್ಲಿಯೂ ಗಾಳಿಯ ಒತ್ತಡ ಹೆಚ್ಚಾದರೆ ಮಳೆಯಾಗಬಹುದು. ಈ ಮಳೆ ಸ್ಥಿತಿ ಏಪ್ರಿಲ್‌ ಮೊದಲ ವಾರದವರೆಗೆ ಮುಂದುವರಿಯುವ ಸಾಧ್ಯತೆ ಇದೆ.

ವಾತಾವರಣದ ಹಿನ್ನೆಲೆ :  ಬಂಗಾಳಕೊಲ್ಲಿ ಮತ್ತು ಅರಬ್ಬಿ ಸಮುದ್ರ ಭಾಗದಲ್ಲಿ ಪ್ರತ್ಯಾವರ್ತ ಮಾರುತಗಳು (Anti-cyclonic circulation) ದುರ್ಬಲಗೊಂಡಿದ್ದರೂ ಇನ್ನೂ ಮುಂದುವರಿದಿವೆ. ಸಮುದ್ರದ ಕಡೆಯಿಂದ ಬೀಸುವ ತೇವಾಂಶಭರಿತ ಗಾಳಿ ಮತ್ತು ಹೆಚ್ಚಿದ ತಾಪಮಾನದಿಂದ ಸ್ಥಳೀಯ ತೇವಾಂಶದ ಮೋಡಗಳು ರೂಪುಗೊಳ್ಳುತ್ತಿದ್ದು, ರಾಜ್ಯದ ಹಲವು ಪ್ರದೇಶಗಳಲ್ಲಿ ಚದುರಿದ ಮಳೆಯ ಪರಿಸ್ಥಿತಿ ಕಂಡುಬರುತ್ತಿದೆ.

Scattered thunderstorms with evening rainfall are likely across Coastal, Malnad, North Interior, and South Interior Karnataka till March 27, after which rainfall coverage is expected to increase. Moisture-laden winds from the Arabian Sea and Bay of Bengal combined with high temperatures are triggering localized convective clouds, leading to intermittent rain activity that may continue into early April.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಒಡಿಶಾದಲ್ಲಿ ಭಾರಿ ಮಳೆ, ಹಲವು ಜಿಲ್ಲೆಗಳಲ್ಲಿ ರೆಡ್ ಅಲರ್ಟ್

ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…

1 hour ago

ಭರ್ತಿಯಾಗುವ ಹಂತಕ್ಕೆ ಆಲಮಟ್ಟಿ ಜಲಾಶಯ – 114.896 ಟಿಎಂಸಿ ನೀರು ಸಂಗ್ರಹ, 73 ಸಾವಿರ ಕ್ಯೂಸೆಕ್ ಒಳಹರಿವು

ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…

2 hours ago

ಹವಾಮಾನ ವರದಿ | 28-07-2026 | ಕರಾವಳಿ, ಮಲೆನಾಡಿನಲ್ಲಿ ಸಾಮಾನ್ಯ ಮಳೆ ಮುಂದುವರಿಕೆ

ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಬಿಟ್ಟುಬಿಟ್ಟು ಮಳೆ ಮುಂದುವರಿಯುವ…

2 hours ago

ಮಳೆ ಕೊರತೆ ತೀವ್ರ – ಬೆಂಗಳೂರು ಗ್ರಾಮಾಂತರದಲ್ಲಿ ಕೇವಲ ಶೇ. 3 ಬಿತ್ತನೆ; ನೀರಿನ ಬಳಕೆಗೆ ಕಟ್ಟುನಿಟ್ಟಿನ ಕ್ರಮ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶೇಕಡಾ 66 ರಷ್ಟು ಮಳೆ ಕೊರತೆಯಿಂದ ಕೇವಲ ಶೇ.…

7 hours ago

ಹವಾಮಾನ ವರದಿ | 28-07-2026 | ಮುಂದಿನ 10 ದಿನ ಸಾಮಾನ್ಯ ಮಳೆ – ಆಗಸ್ಟ್ ಆರಂಭದಲ್ಲಿ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು ಸಾಧ್ಯತೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಸಾಮಾನ್ಯ ಮಳೆ ಮುಂದುವರಿಯುವ ನಿರೀಕ್ಷೆಯಿದ್ದು,…

1 day ago

200 ಹಸುಗಳಿಂದ ₹2 ಕೋಟಿ ವಾರ್ಷಿಕ ಆದಾಯ…! ಗಮನ ಸೆಳೆದ ಉತ್ತರ ಪ್ರದೇಶದ ಮಾದರಿ

ಉತ್ತರ ಪ್ರದೇಶದಲ್ಲಿ 200 ಹಸುಗಳನ್ನು ಆಧರಿಸಿದ ಸಮಗ್ರ ಗೋ ಆರ್ಥಿಕತೆ ಮಾದರಿಯಲ್ಲಿ ಗೋಮಯದಿಂದ…

1 day ago