29.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಅಲ್ಲಲ್ಲಿ ಮಧ್ಯಾಹ್ನ ನಂತರ, ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಎಪ್ರಿಲ್ 4 ರ ತನಕ ಈ ಮಳೆಯು ಮುಂದುವರಿಯುವ ಲಕ್ಷಣಗಳಿವೆ.
ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮಧ್ಯಾಹ್ನ ನಂತರ, ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಎಪ್ರಿಲ್ 4ರ ತನಕ ರಾಜ್ಯದ ಮಲೆನಾಡು ಜಿಲ್ಲೆಗಳಲ್ಲಿ ಮಳೆ ಮುಂದುವರಿಯುವ ಸಾಧ್ಯತೆಗಳಿವೆ.
ಉತ್ತರ ಒಳನಾಡು : ರಾಜ್ಯದ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಸ್ವಲ್ಪ ಕಡಿಮೆಯಾಗಲಿದ್ದರೂ, ಬೆಳಗಾವಿ, ಧಾರವಾಡ, ಹಾವೇರಿ, ಬಾಗಲಕೋಟೆ ಹಾಗೂ ವಿಜಯಪುರ ಜಿಲ್ಲೆಗಳ ಅಲ್ಲಲ್ಲಿ ಮಧ್ಯಾಹ್ನ ನಂತರ, ಸಂಜೆ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ರಾಜ್ಯದ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಮಾರ್ಚ್ 29ರಿಂದ ಳೆಯ ಪ್ರಮಾಣ ಕಡಿಮೆಯಾಗುವ ಸೂಚನೆಗಳಿವೆ.
ದಕ್ಷಿಣ ಒಳನಾಡು : ರಾಜ್ಯದ ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ, ಮಂಡ್ಯ, ಚಿತ್ರದುರ್ಗ, ತುಮಕೂರು ಜಿಲ್ಲೆಗಳ ಅಲ್ಲಲ್ಲಿ ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ರಾಜ್ಯದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಮುಂದಿನ 2 ರಿಂದ 3 ದಿವಸಗಳ ಕಾಲ ಮಳೆ ಮುಂದುವರಿಯುವ ಸಾಧ್ಯತೆಗಳಿವೆ. ಅರಬ್ಬಿ ಸಮುದ್ರದ ದಕ್ಷಿಣ ಮಹಾರಾಷ್ಟ್ರ ಕರಾವಳಿಯಲ್ಲಿ ಅತಿ ಸಣ್ಣ ಪ್ರಮಾಣದ ಪ್ರತ್ಯಾವರ್ತ ಮಾರುತಗಳು ಮೇಲ್ಮೈ ಸುಳಿಗಾಳಿ (Anti-cyclonic circulation ) ಉಂಟಾದ್ದರಿಂದ ಇವತ್ತು ರಾಜ್ಯದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಹೆಚ್ಚು ಮಳೆಯ ಸಾಧ್ಯತೆ ಇದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ.
Thunderstorms with rainfall are expected across Karnataka, especially in coastal and Malnad regions until April 4 due to anti-cyclonic circulation over the Arabian Sea. Rainfall is likely to reduce in North Interior districts, while South Interior regions may receive rain for the next 2–3 days.
ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಗಣನೀಯವಾಗಿ ಹೆಚ್ಚಳವಾಗಿದೆ. ಈ ಹಿನ್ನೆಲೆ ಪ್ರತಿಯೊಂದು ತಾಲೂಕಿನಲ್ಲಿ…
ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು ಮಾಡಲು ಪೊಲೀಸ್…
ಮಾರ್ಚ್ 28ರಿಂದ ಕರ್ನಾಟಕದಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ಮುನ್ಸೂಚನೆ ನೀಡಲಾಗಿದೆ. ಕರಾವಳಿ ಮತ್ತು…
ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…
ರೈತರಿಗೆ ನ್ಯಾಯ ಕೊಡಲು MSPಗೆ ವೈಜ್ಞಾನಿಕ ಆಧಾರ ಅಗತ್ಯ ಎಂದು ಕೋಡಿಹಳ್ಳಿ ಚಂದ್ರಶೇಖರ್…
ವಿಟ್ಲದಲ್ಲಿ ₹12 ಕೋಟಿ ವೆಚ್ಚದ ಕ್ಯಾಂಪ್ಕೊ ನೂತನ ಕಟ್ಟಡಕ್ಕೆ ಮಾರ್ಚ್ 27ರಂದು ಶಂಕುಸ್ಥಾಪನೆ…