Advertisement
ವೆದರ್ ಮಿರರ್

ಹವಾಮಾನ ವರದಿ | 28-03-2026 | ಎಪ್ರಿಲ್ 4 ರವರೆಗೆ ಕರಾವಳಿ–ಮಲೆನಾಡು ಪ್ರದೇಶಗಳಿಗೆ ಭಾರಿ ಮಳೆ ಸೂಚನೆ..!

Share

29.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಅಲ್ಲಲ್ಲಿ ಮಧ್ಯಾಹ್ನ ನಂತರ, ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಎಪ್ರಿಲ್ 4 ರ ತನಕ ಈ ಮಳೆಯು ಮುಂದುವರಿಯುವ ಲಕ್ಷಣಗಳಿವೆ.

ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮಧ್ಯಾಹ್ನ ನಂತರ, ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಎಪ್ರಿಲ್ 4ರ ತನಕ ರಾಜ್ಯದ ಮಲೆನಾಡು ಜಿಲ್ಲೆಗಳಲ್ಲಿ ಮಳೆ ಮುಂದುವರಿಯುವ ಸಾಧ್ಯತೆಗಳಿವೆ.

ಉತ್ತರ ಒಳನಾಡು : ರಾಜ್ಯದ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಸ್ವಲ್ಪ ಕಡಿಮೆಯಾಗಲಿದ್ದರೂ, ಬೆಳಗಾವಿ, ಧಾರವಾಡ, ಹಾವೇರಿ, ಬಾಗಲಕೋಟೆ ಹಾಗೂ ವಿಜಯಪುರ ಜಿಲ್ಲೆಗಳ ಅಲ್ಲಲ್ಲಿ ಮಧ್ಯಾಹ್ನ ನಂತರ, ಸಂಜೆ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ರಾಜ್ಯದ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಮಾರ್ಚ್ 29ರಿಂದ ಳೆಯ ಪ್ರಮಾಣ ಕಡಿಮೆಯಾಗುವ ಸೂಚನೆಗಳಿವೆ.

ದಕ್ಷಿಣ ಒಳನಾಡು : ರಾಜ್ಯದ ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ, ಮಂಡ್ಯ, ಚಿತ್ರದುರ್ಗ, ತುಮಕೂರು ಜಿಲ್ಲೆಗಳ ಅಲ್ಲಲ್ಲಿ ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.

ಈಗಿನಂತೆ ರಾಜ್ಯದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಮುಂದಿನ 2 ರಿಂದ 3 ದಿವಸಗಳ ಕಾಲ ಮಳೆ ಮುಂದುವರಿಯುವ ಸಾಧ್ಯತೆಗಳಿವೆ. ಅರಬ್ಬಿ ಸಮುದ್ರದ ದಕ್ಷಿಣ ಮಹಾರಾಷ್ಟ್ರ ಕರಾವಳಿಯಲ್ಲಿ ಅತಿ ಸಣ್ಣ ಪ್ರಮಾಣದ ಪ್ರತ್ಯಾವರ್ತ ಮಾರುತಗಳು ಮೇಲ್ಮೈ ಸುಳಿಗಾಳಿ (Anti-cyclonic circulation ) ಉಂಟಾದ್ದರಿಂದ ಇವತ್ತು ರಾಜ್ಯದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಹೆಚ್ಚು ಮಳೆಯ ಸಾಧ್ಯತೆ ಇದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ.

Thunderstorms with rainfall are expected across Karnataka, especially in coastal and Malnad regions until April 4 due to anti-cyclonic circulation over the Arabian Sea. Rainfall is likely to reduce in North Interior districts, while South Interior regions may receive rain for the next 2–3 days.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಹವಾಮಾನ ವರದಿ | 22-08-2026 | ಕರಾವಳಿಯಲ್ಲಿ ಮಳೆ ಇಳಿಕೆ, 26ರಿಂದ ಮತ್ತಷ್ಟು ದುರ್ಬಲವಾಗುವ ಸಾಧ್ಯತೆ

ಕರ್ನಾಟಕದಲ್ಲಿ ಆಗಸ್ಟ್ 23ರಿಂದ 25ರವರೆಗೆ ಹಲವೆಡೆ ಅಲ್ಲಲ್ಲಿ ಸಾಮಾನ್ಯ ಮಳೆಯಷ್ಟೇ ನಿರೀಕ್ಷಿಸಲಾಗಿದ್ದು, ಕರಾವಳಿ…

55 minutes ago

ಸೆಪ್ಟೆಂಬರ್‌ನಲ್ಲಿ ಪಿಎಂ ಕಿಸಾನ್ ಹಣ ಬರಬೇಕೇ? ರೈತರು ಈಗಲೇ e-KYC ಪೂರ್ಣಗೊಳಿಸಿ

PM-Kisan ಯೋಜನೆಯ 24ನೇ ಕಂತಿನ ಹಣ ಪಡೆಯಲು ಅರ್ಹ ರೈತರು ಬಯೋಮೆಟ್ರಿಕ್ ಅಥವಾ…

8 hours ago

ಬೆಳೆ ವಿಮೆಗೆ ರೈತರಿಗೆ ಮತ್ತೊಂದು ಅವಕಾಶ : ಆಗಸ್ಟ್ 31ರವರೆಗೆ ನೋಂದಣಿ ಅವಧಿ ವಿಸ್ತರಣೆ

ಮುಂಗಾರು ಹಂಗಾಮಿನ ಭತ್ತ ಸೇರಿದಂತೆ ಬೆಳೆಗಳಿಗೆ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ…

19 hours ago

ಹವಾಮಾನ ವರದಿ | 21-08-2026 | ಕರಾವಳಿಯಲ್ಲಿ ಆ.23–25 ರಂದು ಮಳೆ ಹೆಚ್ಚಳ ಸಾಧ್ಯತೆ – ಆ.26ರವರೆಗೆ ಮೋಡ–ಮಳೆ

ಕರಾವಳಿ ಕರ್ನಾಟಕದಲ್ಲಿ ಆ.23ರಿಂದ 25ರವರೆಗೆ ಮಳೆಯ ಪ್ರಮಾಣ ಸ್ವಲ್ಪ ಹೆಚ್ಚಾಗುವ ಸಾಧ್ಯತೆಯಿದ್ದು, ಆ.26ರವರೆಗೂ…

23 hours ago

ನಿಮ್ಮ ಹೆಸರಲ್ಲಿ 9 ಸಿಮ್‌ಗಳಿವೆಯೇ? ಆಗಸ್ಟ್ 24ರಿಂದ ಹೊಸ ನಿಯಮ – ಹೆಚ್ಚುವರಿ ನಂಬರ್‌ಗೆ ಬ್ರೇಕ್

ಆಗಸ್ಟ್ 24ರಿಂದ ಒಬ್ಬ ವ್ಯಕ್ತಿಯ ಹೆಸರಿನಲ್ಲಿ 9 ಮೊಬೈಲ್ ಸಂಪರ್ಕಗಳ ಮಿತಿಯನ್ನು ಮೀರಿ…

1 day ago

ತೆಂಗಿನ ಮರದಿಂದ 3 ಕೋಟಿ ಜನರಿಗೆ ಬದುಕು…!, ಈಗ ₹7,038 ಕೋಟಿ ರಫ್ತು!

ಭಾರತದ ತೆಂಗು ವಲಯ ಈಗ ಕಾಯಿ ಮಾರಾಟದಿಂದ ಮೌಲ್ಯವರ್ಧಿತ ಉತ್ಪನ್ನಗಳ ಜಾಗತಿಕ ಮಾರುಕಟ್ಟೆಯತ್ತ…

1 day ago