Advertisement
ವೆದರ್ ಮಿರರ್

ಹವಾಮಾನ ವರದಿ | 19-03-2026 | ಇಂದು ಗುಡುಗು ಮಳೆ ಅಬ್ಬರ… ನಾಳೆಯಿಂದ ರಾಜ್ಯದಲ್ಲಿ ಮಳೆ ಕಡಿಮೆಯಾಗುತ್ತದಾ?

Share

ರಾಜ್ಯದ ವಿವಿಧ ಭಾಗಗಳಲ್ಲಿ ಮುಂದುವರಿದಿದ್ದ ಅಕಾಲಿಕ ಮಳೆಯ ತೀವ್ರತೆ ಮಾರ್ಚ್‌ 20ರಿಂದ ಕಡಿಮೆಯಾಗುವ ಸೂಚನೆಗಳು ವ್ಯಕ್ತವಾಗಿವೆ. ಆದರೆ, ಅದಕ್ಕೂ ಮೊದಲು ಇಂದು ಸಂಜೆ ಹಾಗೂ ರಾತ್ರಿ ವೇಳೆಯಲ್ಲಿ ಹಲವೆಡೆ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.

ಕರಾವಳಿ ಪ್ರದೇಶ : ಕಾಸರಗೋಡು ಜಿಲ್ಲೆಯಲ್ಲಿ ಮಧ್ಯಾಹ್ನ ನಂತರ ಹಾಗೂ ಸಂಜೆ ಮೋಡ ಕವಿದ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ. ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಘಟ್ಟದ ಕೆಳಭಾಗಗಳಲ್ಲಿ ಸಂಜೆ ಗುಡುಗು ಸಹಿತ ಸಾಮಾನ್ಯ ಮಳೆ ಆಗುವ ನಿರೀಕ್ಷೆ ಇದೆ.
ಪ್ರಸ್ತುತ ವಾತಾವರಣದ ಬೆಳವಣಿಗೆಯಂತೆ ಮಾರ್ಚ್‌ 20ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳು ಕಾಣಿಸುತ್ತಿವೆ.

ಮಲೆನಾಡು :  ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿಯೂ ಅಲ್ಲಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಇದೆ.
ಆದರೆ ನಾಳೆಯಿಂದ ಮಳೆಯ ಚಟುವಟಿಕೆ ನಿಧಾನವಾಗಿ ಕುಂಠಿತವಾಗುವ ಸೂಚನೆ ಇದೆ.

ಉತ್ತರ ಒಳನಾಡು : ಧಾರವಾಡ, ಹಾವೇರಿ, ಬಾಗಲಕೋಟೆ, ಗದಗ, ವಿಜಯಪುರ, ದಾವಣಗೆರೆ, ವಿಜಯನಗರ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಮತ್ತು ಬೀದರ್ ಜಿಲ್ಲೆಗಳ ಕೆಲವೆಡೆ ಸಂಜೆ ಮಳೆ ಹಾಗೂ ಗುಡುಗು ಸಂಭವಿಸಬಹುದು. ಇಲ್ಲಿಯೂ ಮಾರ್ಚ್‌ 20ರಿಂದ ಮಳೆಯ ಪ್ರಮಾಣ ಇಳಿಕೆಯಾಗುವ ನಿರೀಕ್ಷೆ ಇದೆ.

ದಕ್ಷಿಣ ಒಳನಾಡು :  ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಮತ್ತು ಚಿತ್ರದುರ್ಗ ಜಿಲ್ಲೆಗಳಲ್ಲೂ ಸಂಜೆ ಮತ್ತು ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ನೀಡಲಾಗಿದೆ. ಇಲ್ಲೂ ಸಹ ನಾಳೆಯಿಂದ ನಿಧಾನವಾಗಿ ಕಡಿಮೆಯಾಗುವ ಸಾಧ್ಯತೆ ಇದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

ಮಳೆ ಕಡಿಮೆಯಾಗಲು ಕಾರಣ ಏನು? :  ಬಂಗಾಳಕೊಲ್ಲಿ ಹಾಗೂ ಅರಬ್ಬಿ ಸಮುದ್ರ ಪ್ರದೇಶಗಳಲ್ಲಿ ಪ್ರತ್ಯಾವರ್ತ ಮಾರುತಗಳ (Anti-cyclonic circulation) ಪ್ರಭಾವ ಉಂಟಾಗಿದ್ದು, ಭೂಭಾಗದ ಕಡೆಗೆ ಬೀಸುವ ತೇವಾಂಶ ಭರಿತ ಗಾಳಿಯ ಪ್ರಮಾಣ ಕಡಿಮೆಯಾಗುತ್ತಿದೆ.
ಈ ವಾತಾವರಣ ಬದಲಾವಣೆಯಿಂದ ರಾಜ್ಯದಲ್ಲಿ ಮಳೆಯ ಚಟುವಟಿಕೆ ಕ್ರಮೇಣ ಇಳಿಕೆಯಾಗುವ ಲಕ್ಷಣಗಳು ಕಂಡುಬರುತ್ತಿವೆ.

Thunderstorm activity is likely across several parts of Karnataka till the evening and night of March 19. However, due to anti-cyclonic circulation over the Bay of Bengal and Arabian Sea reducing moisture inflow, rainfall intensity across the state is expected to decrease from March 20 onwards.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಹವಾಮಾನ ವರದಿ | 15-04-2026 | ಕರ್ನಾಟಕದಲ್ಲಿ ಬಿಸಿಗಾಳಿಯ ನಡುವೆ ಮಳೆಯ ಸುಳಿವು – ಏಪ್ರಿಲ್ 18 ರಿಂದ ಮಳೆ…!

ಕರ್ನಾಟಕದಲ್ಲಿ ಏಪ್ರಿಲ್ 18ರಿಂದ ಹಂತ ಹಂತವಾಗಿ ಮಳೆಯ ಚಟುವಟಿಕೆ ಆರಂಭವಾಗುವ ಸಾಧ್ಯತೆ ಇದೆ.…

4 hours ago

ವಿಷು ಹಬ್ಬದ ಅರ್ಥವೇನು ಗೊತ್ತಾ..? ಸೂರ್ಯ ಸಂಕ್ರಮಣದ ಈ ರಹಸ್ಯ ನಿಮ್ಮ ಜೀವನವೇ ಬದಲಾಯಿಸಬಹುದು..!

ವಿಷು ಹಬ್ಬವು ಸೂರ್ಯನ ಮೇಷ ಸಂಕ್ರಮಣದೊಂದಿಗೆ ಸಂಬಂಧಿಸಿದ ಆಧ್ಯಾತ್ಮಿಕ ಹಬ್ಬವಾಗಿದೆ. ವಿಷು ಕಣಿ…

10 hours ago

ಬೇಸಿಗೆ ಬಿತ್ತನೆ ಭರ್ಜರಿ ಏರಿಕೆ..! 64 ಲಕ್ಷ ಹೆಕ್ಟೇರ್ ದಾಟಿದ ಕೃಷಿ ವ್ಯಾಪ್ತಿ, 0.77 ಲಕ್ಷ ಹೆಕ್ಟೇರ್ ಹೆಚ್ಚಳ

ಈ ವರ್ಷ ಬೇಸಿಗೆ ಬಿತ್ತನೆ 64 ಲಕ್ಷ ಹೆಕ್ಟೇರ್ ದಾಟಿದ್ದು, ಕಳೆದ ವರ್ಷಕ್ಕಿಂತ…

10 hours ago

ಮುಂದಿನ 5 ದಿನ ತಾಪಮಾನ ಏರಿಕೆ ಎಚ್ಚರಿಕೆ ! ಉತ್ತರ-ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಬಿಸಿಗಾಳಿ ತೀವ್ರ

ಮುಂದಿನ ಐದು ದಿನಗಳಲ್ಲಿ ಉತ್ತರ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ತಾಪಮಾನ ಹೆಚ್ಚಾಗಲಿದೆ…

1 day ago

ಹವಾಮಾನ ವರದಿ | 14-04-2026 | ಕರ್ನಾಟಕದಲ್ಲಿ ಉರಿಬಿಸಿಲು…! ಆದರೆ ಮಳೆಯೂ ಬರುತ್ತಿದೆ ! ಯಾವಾಗ ಗೊತ್ತಾ? – ಸದ್ಯ ರೈತರಿಗೆ ಸಲಹೆ ಏನು..?

ರಾಜ್ಯದಲ್ಲಿ ಬಿಸಿಲಿನ ತೀವ್ರತೆ ಮುಂದುವರಿದಿದ್ದು, ಏಪ್ರಿಲ್ 18ರಿಂದ ಮಳೆ ಆರಂಭವಾಗುವ ಸಾಧ್ಯತೆ ಇದೆ.…

1 day ago

ಇರಾನ್-ಇಸ್ರೇಲ್ ಯುದ್ಧದ ಪರಿಣಾಮ – ಮಾವಿನ ರಫ್ತು ಕುಸಿತ, ರೈತರಿಗೆ ಹೊಡೆತ | ಅಲ್ಫೋನ್ಸೊ ಬೆಲೆ ಅರ್ಧಕ್ಕೆ ಇಳಿಕೆ

ಇರಾನ್-ಇಸ್ರೇಲ್ ಯುದ್ಧದಿಂದ ಮಾವಿನ ರಫ್ತು ಕುಸಿತಗೊಂಡು ಬೆಲೆ ತೀವ್ರವಾಗಿ ಇಳಿಕೆಯಾಗಿದೆ. ರೈತರು ನಷ್ಟದಲ್ಲಿ…

1 day ago