ಹವಾಮಾನ ವರದಿ| 10-05-2026 | ರಾಜ್ಯದಲ್ಲಿ ಮಳೆ ಕ್ಷೀಣಿಸುವ ಸೂಚನೆ | ಮೇ 15ರಿಂದ ಮುಂಗಾರು ಮಾರುತ ಚಟುವಟಿಕೆ ಚುರುಕು ಸಾಧ್ಯತೆ

May 10, 2026
12:28 PM

ಕರ್ನಾಟಕದಲ್ಲಿ ಮುಂದಿನ 24 ಗಂಟೆಗಳ ಅವಧಿಯಲ್ಲಿ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಮಾತ್ರ ಸೀಮಿತ ಪ್ರಮಾಣದ ಗುಡುಗು ಸಹಿತ ಮಳೆಯ ಮುನ್ಸೂಚನೆ ನೀಡಲಾಗಿದೆ. ಉಳಿದಂತೆ ರಾಜ್ಯದ ಬಹುತೇಕ ಭಾಗಗಳಲ್ಲಿ ಬಿಸಿಲಿನ ವಾತಾವರಣ ಮುಂದುವರಿಯಲಿದ್ದು, ಮೇ 11ರಿಂದ ಮಳೆಯ ಪ್ರಮಾಣ ಕ್ರಮೇಣ ಕಡಿಮೆಯಾಗುವ ಲಕ್ಷಣಗಳು ಕಂಡು ಬರುತ್ತಿವೆ.

Advertisement

ಕರಾವಳಿ ಭಾಗಗಳಲ್ಲಿ ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಘಟ್ಟದ ಕೆಳಭಾಗದ ಪ್ರದೇಶಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಗುಡುಗು ಸಹಿತ ಮಳೆಯ ಸಾಧ್ಯತೆ ಇದೆ. ತೀರ ಪ್ರದೇಶಗಳಲ್ಲಿ ತಡರಾತ್ರಿ ಅಥವಾ ಮುಂಜಾನೆ ವೇಳೆ ಸಾಮಾನ್ಯ ಮಳೆಯಾಗುವ ಸಾಧ್ಯತೆಗಳಿವೆ. ಉತ್ತರ ಕನ್ನಡ ಜಿಲ್ಲೆಯ ಬೆಳಗಾವಿ ಗಡಿಭಾಗದ ಕೆಲವು ಪ್ರದೇಶಗಳಲ್ಲಿ ಸಂಜೆ ವೇಳೆ ಸಾಮಾನ್ಯ ಮಳೆಯ ಮುನ್ಸೂಚನೆ ನೀಡಲಾಗಿದೆ. ಆದರೆ ಮೇ 11ರಿಂದ ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಕುಂಠಿತಗೊಳ್ಳುವ ಲಕ್ಷಣಗಳು ಗೋಚರಿಸುತ್ತಿವೆ.

Advertisement

ಮಲೆನಾಡು ಭಾಗದಲ್ಲಿ ಕೊಡಗು ಜಿಲ್ಲೆಯ ಕೆಲವೆಡೆ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಇದೆ. ಆದರೆ ಸೋಮವಾರಪೇಟೆ ಹಾಗೂ ಶನಿವಾರಸಂತೆ ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆ ಇರಬಹುದು ಎಂದು ಅಂದಾಜಿಸಲಾಗಿದೆ. ಹಾಸನ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಸಂಜೆ ವೇಳೆಗೆ ಮೋಡ ಕವಿದ ವಾತಾವರಣ ಇರಲಿದ್ದು, ಚಿಕ್ಕಮಗಳೂರು ಜಿಲ್ಲೆಯ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಭಾಗಗಳಲ್ಲಿ ಒಂದೆರಡು ಕಡೆ ಸಾಮಾನ್ಯ ಮಳೆಯಾಗುವ ಸಾಧ್ಯತೆ ಇದೆ. ಮೇ 11ರಿಂದ ಮಲೆನಾಡು ಜಿಲ್ಲೆಗಳಲ್ಲಿಯೂ ಮಳೆಯ ಸಾಧ್ಯತೆಗಳು ಕಡಿಮೆಯಾಗುವ ಸೂಚನೆಗಳಿವೆ.

Advertisement

ಉತ್ತರ ಒಳನಾಡು ಜಿಲ್ಲೆಗಳಲ್ಲಿ ಹಗಲು ಬಿಸಿಲಿನ ವಾತಾವರಣ ಮುಂದುವರಿಯಲಿದ್ದು, ಸಂಜೆ ಹಾಗೂ ರಾತ್ರಿ ವೇಳೆಗೆ ಅಲ್ಲಲ್ಲಿ ಮೋಡ ಕವಿದ ವಾತಾವರಣ ಇರಬಹುದು. ಮಳೆಯ ಸಾಧ್ಯತೆಗಳು ಬಹುತೇಕ ಕಾಣುತ್ತಿಲ್ಲ. ಉತ್ತರ ಕರ್ನಾಟಕ ಭಾಗದಲ್ಲಿ ಹೆಚ್ಚಿನ ತಾಪಮಾನ ಹಾಗೂ ಒಣಹವೆಯ ವಾತಾವರಣ ಇನ್ನೂ ಕೆಲವು ದಿನಗಳ ಕಾಲ ಮುಂದುವರಿಯುವ ಸಾಧ್ಯತೆ ಇದೆ.

Advertisement

ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿಯೂ ಬಿಸಿಲು ಹಾಗೂ ಭಾಗಶಃ ಮೋಡ ಕವಿದ ವಾತಾವರಣ ಮುಂದುವರಿಯಲಿದ್ದು, ಮೇ 13ರವರೆಗೂ ಮಳೆಯ ಸಾಧ್ಯತೆಗಳು ಕಡಿಮೆ ಇರಬಹುದು ಎಂದು ಮುನ್ಸೂಚನೆ ತಿಳಿಸಿದೆ.

ಇನ್ನೊಂದೆಡೆ ಮೇ 11ರಂದು ತಮಿಳುನಾಡು ಕರಾವಳಿಯಲ್ಲಿ ವಾಯುಭಾರ ಕುಸಿತದಂತಹ ತಿರುಗುವಿಕೆ ಉಂಟಾಗುವ ಸಾಧ್ಯತೆ ಇದ್ದು, ಅದು ಮುಂದಿನ ಮೂರು ಅಥವಾ ನಾಲ್ಕು ದಿನಗಳಲ್ಲಿ ಅಲ್ಲಿಯೇ ಶಿಥಿಲಗೊಳ್ಳುವ ಸಾಧ್ಯತೆ ಇದೆ. ಇದೇ ವೇಳೆ ಮೇ 15ರಿಂದ ಹಿಂದೂ ಮಹಾಸಾಗರ ಹಾಗೂ ಅರಬ್ಬಿ ಸಮುದ್ರದಲ್ಲಿ ಮುಂಗಾರು ಮಾರುತಗಳ ಚಲನೆ ಚುರುಕಾಗುವ ಲಕ್ಷಣಗಳು ಗೋಚರಿಸುತ್ತಿದ್ದು, ಮುಂದಿನ ದಿನಗಳಲ್ಲಿ ಮುಂಗಾರು ಚಟುವಟಿಕೆಗಳಿಗೆ ವೇಗ ಸಿಗುವ ನಿರೀಕ್ಷೆ ವ್ಯಕ್ತವಾಗಿದೆ.

Advertisement

Karnataka is expected to witness reduced rainfall activity from May 11 onward, with only isolated thunder showers likely in coastal and Malnad regions. Most interior districts will continue to experience hot and partly cloudy weather. Monsoon wind activity over the Arabian Sea and Indian Ocean is likely to strengthen from May 15.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಮುಂಗಾರು ಮತ್ತಷ್ಟು ಚುರುಕು – ಕರಾವಳಿ ಕರ್ನಾಟಕದಲ್ಲಿ ಜೂನ್ 26 ರವರೆಗೆ ಭಾರೀ ಮಳೆ ಎಚ್ಚರಿಕೆ
June 23, 2026
10:13 PM
by: ದ ರೂರಲ್ ಮಿರರ್.ಕಾಂ
ಅಡಿಕೆ ಬೆಳೆಗಾರರ ಸಮಸ್ಯೆಗಳ ಪರಿಹಾರಕ್ಕೆ ತಕ್ಷಣ ಕ್ರಮ – ಸರ್ಕಾರಕ್ಕೆ ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಒತ್ತಾಯ
June 23, 2026
8:11 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 23-06-2026 | ಕರ್ನಾಟಕದಲ್ಲಿ ಜೂನ್ 25 ರಿಂದ ಮುಂಗಾರು ಚುರುಕು? ಕರಾವಳಿ-ಮಲೆನಾಡಿನಲ್ಲಿ ಮಳೆ ಹೆಚ್ಚಳದ ನಿರೀಕ್ಷೆ
June 23, 2026
1:51 PM
by: ದ ರೂರಲ್ ಮಿರರ್.ಕಾಂ
ಕೀಟನಾಶಕಗಳ ಅತಿಯಾದ ಬಳಕೆ ನಿಯಂತ್ರಣಕ್ಕೆ ನೈಸರ್ಗಿಕ ಕೃಷಿಯೇ ಮದ್ದು
June 23, 2026
7:37 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror