Karnataka Weather Mirror | 06-11-2023 | ಭಾರಿ ಮಳೆಯ ವಾತಾವರಣ ಸೃಷ್ಟಿಯಾಗಿದ್ದು ಏಕೆ.. ? | ನ.8 ರಿಂದ ಮಳೆ ಕಡಿಮೆಯಾಗುವುದು ಏಕೆ..? |

November 6, 2023
2:06 PM
ಅರಬ್ಬಿ ಸಮುದ್ರದಲ್ಲಿ ನವೆಂಬರ್ 8 ರಂದು ಸಣ್ಣ ಪ್ರಮಾಣದ ವಾಯುಭಾರ ಕುಸಿತದಂತಹ ತಿರುವಿಕೆ ಉಂಟಾಗುವ ಲಕ್ಷಣಗಳಿದ್ದು, ಇದರಿಂದ ರಾಜ್ಯದಾದ್ಯಂತ ಮಳೆ ಕಡಿಮೆಯಾಗುವ ಸಾಧ್ಯತೆ ಇದೆ.

07.11.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

Advertisement
Advertisement

ಕಾಸರಗೋಡು ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ. ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಹೆಚ್ಚಿನ ಭಾಗಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.

ಕೊಡಗು ಸಾಮಾನ್ಯ, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಮೈಸೂರು, ಚಾಮರಾಜನಗರ, ರಾಮನಗರ, ಬೆಂಗಳೂರು(ಉತ್ತಮ), ಕೋಲಾರ(ಉತ್ತಮ), ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ಪಾವಗಡ, ದಾವಣಗೆರೆ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಹಾವೇರಿ, ಗದಗ, ಬಳ್ಳಾರಿ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.

ಧಾರವಾಡ ಹಾಗೂ ಬೆಳಗಾವಿ ಜಿಲ್ಲೆಗಳಲ್ಲಿ ಒಂದೆರಡು ಕಡೆ ಸಾಮಾನ್ಯ ಮಳೆಯ ಸಾಧ್ಯತೆಯೂ ಇದೆ.ಉಳಿದ ಕರ್ನಾಟಕದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು.

ಬಂಗಾಳ ಕೊಲ್ಲಿಯ ಭಾಗದಿಂದ ಹಿಂಗಾರು ಪ್ರಭಲವಾಗಿರುವುದರಿಂದ ಹಾಗೂ ಅರಬ್ಬಿ ಸಮುದ್ರದಲ್ಲಿ ಗಾಳಿಯ ಚಲನೆ ಏಕಪ್ರಕಾರವಾಗಿಲ್ಲದ್ದರಿಂದ ಈಗಿನ ಭಾರಿ ಮಳೆಯ ವಾತಾವರಣ ಸೃಷ್ಟಿಯಾಗಿದೆ. ಅರಬ್ಬಿ ಸಮುದ್ರದಲ್ಲಿ ನವೆಂಬರ್ 8 ರಂದು ಸಣ್ಣ ಪ್ರಮಾಣದ ವಾಯುಭಾರ ಕುಸಿತದಂತಹ ತಿರುವಿಕೆ ಉಂಟಾಗುವ ಲಕ್ಷಣಗಳಿದ್ದು, ಇದರಿಂದ ರಾಜ್ಯದಾದ್ಯಂತ ಮಳೆ ಕಡಿಮೆಯಾಗುವ ಸಾಧ್ಯತೆ ಇದೆ.

Advertisement
Advertisement

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಅಡುಗೆಯ ಕಚ್ಚಾ ಎಣ್ಣೆಯ ಮೇಲಿನ ಆಮದು ಸುಂಕ ಕಡಿತ | ತೆಂಗಿಗಿಲ್ಲ ಆತಂಕ.. | ಧಾರಣೆ ಇಳಿಕೆಯ ಆತಂಕವಿಲ್ಲ |
June 4, 2025
11:06 AM
by: ಡಾ|ವಿಘ್ನೇಶ್ವರ ಭಟ್‌ ವರ್ಮುಡಿ
ಅರಣ್ಯದ ಬಗ್ಗೆ ಹೊಸ ಪ್ರಜ್ಞೆಯನ್ನು ಜನರು ಜಾಗೃತಗೊಳಿಸಬೇಕು
June 4, 2025
7:27 AM
by: The Rural Mirror ಸುದ್ದಿಜಾಲ
ಒಂದು ಕ್ರೀಡಾ ಗೆಲುವಿಗೆ ಅಷ್ಟು ಅತಿರೇಕದ ಪ್ರತಿಕ್ರಿಯೆ ಒಳ್ಳೆಯ ಲಕ್ಷಣವಲ್ಲ……
June 4, 2025
7:21 AM
by: ವಿವೇಕಾನಂದ ಎಚ್‌ ಕೆ
ಸೂರ್ಯ-ಶನಿಯಿಂದ ಶಕ್ತಿಶಾಲಿ ಪಂಚಮಿ ಯೋಗ.. | ಏನಿದು ಯೋಗ..? ಯಾವ ರಾಶಿಗೆ ವಿಶೇಷವಾದ ಅನುಕೂಲ..?
June 4, 2025
6:45 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group