07.11.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ. ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಹೆಚ್ಚಿನ ಭಾಗಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಕೊಡಗು ಸಾಮಾನ್ಯ, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಮೈಸೂರು, ಚಾಮರಾಜನಗರ, ರಾಮನಗರ, ಬೆಂಗಳೂರು(ಉತ್ತಮ), ಕೋಲಾರ(ಉತ್ತಮ), ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ಪಾವಗಡ, ದಾವಣಗೆರೆ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಹಾವೇರಿ, ಗದಗ, ಬಳ್ಳಾರಿ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಧಾರವಾಡ ಹಾಗೂ ಬೆಳಗಾವಿ ಜಿಲ್ಲೆಗಳಲ್ಲಿ ಒಂದೆರಡು ಕಡೆ ಸಾಮಾನ್ಯ ಮಳೆಯ ಸಾಧ್ಯತೆಯೂ ಇದೆ.ಉಳಿದ ಕರ್ನಾಟಕದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು.
ಬಂಗಾಳ ಕೊಲ್ಲಿಯ ಭಾಗದಿಂದ ಹಿಂಗಾರು ಪ್ರಭಲವಾಗಿರುವುದರಿಂದ ಹಾಗೂ ಅರಬ್ಬಿ ಸಮುದ್ರದಲ್ಲಿ ಗಾಳಿಯ ಚಲನೆ ಏಕಪ್ರಕಾರವಾಗಿಲ್ಲದ್ದರಿಂದ ಈಗಿನ ಭಾರಿ ಮಳೆಯ ವಾತಾವರಣ ಸೃಷ್ಟಿಯಾಗಿದೆ. ಅರಬ್ಬಿ ಸಮುದ್ರದಲ್ಲಿ ನವೆಂಬರ್ 8 ರಂದು ಸಣ್ಣ ಪ್ರಮಾಣದ ವಾಯುಭಾರ ಕುಸಿತದಂತಹ ತಿರುವಿಕೆ ಉಂಟಾಗುವ ಲಕ್ಷಣಗಳಿದ್ದು, ಇದರಿಂದ ರಾಜ್ಯದಾದ್ಯಂತ ಮಳೆ ಕಡಿಮೆಯಾಗುವ ಸಾಧ್ಯತೆ ಇದೆ.
ಸಣ್ಣ ಹಿಡುವಳಿದಾರರಿಗೆ ಈಗ ಕಾಳುಮೆಣಸು ಕೃಷಿಯ ಬಗ್ಗೆ ಸಾಕಷ್ಟು ಗೊಂದಲ. ಇಂತಹ ಸಮಯದಲ್ಲಿ…
ಪಶ್ಚಿಮ ಬಂಗಾಳದಲ್ಲಿ ಉಂಟಾಗಿರುವ ಸಣ್ಣ ಪ್ರಮಾಣದ ತಿರುಗುವಿಕೆಯು ಅಷ್ಟೇನು ಪರಿಣಾಮ ಬೀರುವ ಸಾಧ್ಯತೆಗಳು…
ಜೋಯಿಡಾ ತಾಲೂಕಿನ ಬಜಾರಕುಣಂಗ ಗ್ರಾಮ ಪಂಚಾಯತ್ ವ್ಯಾಪ್ತಿಯ ಸೀಸೈ ಗ್ರಾಮದಲ್ಲಿ ಭಾರೀ ಮಳೆಯಿಂದ…
ಶಿಖರ್ ಬಿ.ಕೆ. 6ನೇ ತರಗತಿ, ಕುಮಾರಸ್ವಾಮಿ ವಿದ್ಯಾಲಯ, ಕುಕ್ಕೆಸುಬ್ರಹ್ಮಣ್ಯ | - ದ…
ಕ್ರಿಶನ್ ಎಸ್ ಭಟ್, ಮೇರಿ ಹಿಲ್, 1ನೇ ತರಗತಿ, ಎಸ್ಡಿಎಂ ಶಾಲೆ, ಮಂಗಳೂರು…
ಮುಂದಿನ 2 ರಿಂದ 3 ದಿನಗಳಲ್ಲಿ ದೇಶದ ಪೂರ್ವ, ಪಶ್ಚಿಮ, ಮಧ್ಯ ಮತ್ತು…