10.11.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಅಲ್ಲಲ್ಲಿ ಸಾಮಾನ್ಯ, ದಕ್ಷಿಣ ಕನ್ನಡದ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಸುಳ್ಯ, ಸುಬ್ರಹ್ಮಣ್ಯ, ಕಡಬ, ಬೆಳ್ತಂಗಡಿ, ಧರ್ಮಸ್ಥಳ ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳಲ್ಲಿ ಸ್ವಲ್ಪ ಜಾಸ್ತಿ ಇರಬಹುದು. ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ.
ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಗುಡುಗು ಸಹಿತ ಉತ್ತಮ ಮಳೆಯ ಮುನ್ಸೂಚನೆ ಇದೆ ಶಿವಮೊಗ್ಗ ಅಲ್ಲಲ್ಲಿ ಗುಡುಗು ಮಳೆಯ ಮುನ್ಸೂಚನೆ ಇದೆ. ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ತುಮಕೂರು, ಚಿತ್ರದುರ್ಗ, ದಾವಣಗೆರೆ, ಗದಗ, ಧಾರವಾಡ, ಬೆಳಗಾವಿ, ಬಾಗಲಕೋಟೆ, ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ಪಾವಗಡ ಬಳ್ಳಾರಿ, ರಾಯಚೂರು, ಕೊಪ್ಪಳ ಜಿಲ್ಲೆಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ಗುಡುಗು ಹಾಗೂ ತುಂತುರು ಮಳೆಯ ಮುನ್ಸೂಚನೆ ಇದೆ. ಒಂದೆರಡು ಕಡೆ ಸಾಮಾನ್ಯ ಮಳೆಯ ಸಾಧ್ಯತೆಯೂ ಇದೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು.
ನವೆಂಬರ್ 10 ರಂದು ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ಒಂದೆರಡು ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದ್ದು, ನವೆಂಬರ್ 11 ರಿಂದ ರಾಜ್ಯದಾದ್ಯಂತ ಒಣ ಹವೆ ಆವರಿಸುವ ಲಕ್ಷಣಗಳಿವೆ.
ದೇಶದಲ್ಲಿ 19 ರಾಜ್ಯಗಳಲ್ಲಿ 9.25 ಕೋಟಿ ರೈತ ಐಡಿ ನಿರ್ಮಾಣವಾಗಿದೆ. ಮುಂದಿನ 6…
ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಪೋಷಕರಿಗೆ ತುಮಕೂರು ಪೊಲೀಸ್ ಎಚ್ಚರಿಕೆ ನೀಡಿದೆ.…
ಕರ್ನಾಟಕದಲ್ಲಿ ಏಪ್ರಿಲ್ 5ರವರೆಗೆ ಗುಡುಗು ಸಹಿತ ಮಳೆಯ ಚಟುವಟಿಕೆ ಮುಂದುವರಿಯಲಿದೆ. ಏಪ್ರಿಲ್ 10ರಿಂದ…
ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ದಕ್ಷಿಣ ಕನ್ನಡ…
ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…
ರಸ್ತೆ ಬದಿ ಕಸ ಎಸೆಯುವವರಿಗೆ ದಂಡ ವಿಧಿಸಲಾಗುತ್ತದೆ, ಪಾವತಿಸದಿದ್ದರೆ FIR ದಾಖಲಾಗುತ್ತದೆ. ಗ್ರಾಮ…