Advertisement
ವೆದರ್ ಮಿರರ್

Weather Mirror | 09-11-2023 | ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳಲ್ಲಿ ಹೆಚ್ಚಿನ ಮಳೆ | ರಾಜ್ಯದಾದ್ಯಂತ ಒಣ ಹವೆ ಆವರಿಸುವ ಲಕ್ಷಣ |

Share

10.11.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಅಲ್ಲಲ್ಲಿ ಸಾಮಾನ್ಯ, ದಕ್ಷಿಣ ಕನ್ನಡದ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಸುಳ್ಯ, ಸುಬ್ರಹ್ಮಣ್ಯ, ಕಡಬ, ಬೆಳ್ತಂಗಡಿ, ಧರ್ಮಸ್ಥಳ ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳಲ್ಲಿ ಸ್ವಲ್ಪ ಜಾಸ್ತಿ ಇರಬಹುದು. ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ.

ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಗುಡುಗು ಸಹಿತ ಉತ್ತಮ ಮಳೆಯ ಮುನ್ಸೂಚನೆ ಇದೆ ಶಿವಮೊಗ್ಗ ಅಲ್ಲಲ್ಲಿ ಗುಡುಗು ಮಳೆಯ ಮುನ್ಸೂಚನೆ ಇದೆ. ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ತುಮಕೂರು, ಚಿತ್ರದುರ್ಗ, ದಾವಣಗೆರೆ, ಗದಗ, ಧಾರವಾಡ, ಬೆಳಗಾವಿ, ಬಾಗಲಕೋಟೆ, ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.

ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ಪಾವಗಡ ಬಳ್ಳಾರಿ, ರಾಯಚೂರು, ಕೊಪ್ಪಳ ಜಿಲ್ಲೆಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ಗುಡುಗು ಹಾಗೂ ತುಂತುರು ಮಳೆಯ ಮುನ್ಸೂಚನೆ ಇದೆ. ಒಂದೆರಡು ಕಡೆ ಸಾಮಾನ್ಯ ಮಳೆಯ ಸಾಧ್ಯತೆಯೂ ಇದೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು.

ನವೆಂಬರ್ 10 ರಂದು ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ಒಂದೆರಡು ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದ್ದು, ನವೆಂಬರ್ 11 ರಿಂದ ರಾಜ್ಯದಾದ್ಯಂತ ಒಣ ಹವೆ ಆವರಿಸುವ ಲಕ್ಷಣಗಳಿವೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಹವಾಮಾನ ವರದಿ | 14-10-2026 | ಕರ್ನಾಟಕಕ್ಕೆ ಹಿಂಗಾರು ಮಳೆ ಪ್ರವೇಶದ ಸೂಚನೆ – ಅ.16ರಿಂದ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಅ.15ರಿಂದ ಹಿಂಗಾರು ಮಳೆ ಆರಂಭವಾಗುವ ಲಕ್ಷಣಗಳಿದ್ದು, ಅ.16ರಿಂದ ಕರಾವಳಿ ಹಾಗೂ ಉತ್ತರ…

1 hour ago

ರಸ್ತೆ ಬದಿಯಲ್ಲಿ ಕಸ ಎಸೆಯುವವರೇ, ಒಮ್ಮೆ ಇವರನ್ನು ನೋಡಿ…! – 5 ದಿನಗಳಲ್ಲಿ ಕಂಡ ಭಯಾನಕ ವಾಸ್ತವ

ಕೊಡಗಿನ ಸಂಪಾಜೆಯಿಂದ ಮಂಗಳೂರಿಗೆ ಸ್ವಚ್ಛತಾ ದಂಡಯಾತ್ರೆ ಕೈಗೊಂಡಿರುವ ನಾಗರಾಜ್ ಬಜಾಲ್ ಅವರು ಇದುವರೆಗಿನ…

17 hours ago

ಸುಳ್ಯದಲ್ಲಿ ಅ.19 ರಂದು ಪ್ರಶಾಂತಿ ಡೆಂಟಲ್ ಕ್ಲಿನಿಕ್ ಉದ್ಘಾಟನೆ

ಸುಳ್ಯದ ಎಪಿಎಂಸಿ ರಸ್ತೆಯ ಆಶೀರ್ವಾದ್ ಕಟ್ಟಡದ ಮೊದಲ ಮಹಡಿಯಲ್ಲಿ ಆರಂಭವಾಗುತ್ತಿರುವ ಪ್ರಶಾಂತಿ ಡೆಂಟಲ್…

1 day ago

ಹವಾಮಾನ ವರದಿ | 13-10-2026 | ಅ.15ರಿಂದ ಕರ್ನಾಟಕದಲ್ಲಿ ಮತ್ತೆ ಮಳೆ ಸಾಧ್ಯತೆ – ಹಿಂಗಾರು ಆರಂಭದ ಮುನ್ಸೂಚನೆ

ರಾಜ್ಯದಲ್ಲಿ ಅಕ್ಟೋಬರ್ 14ರವರೆಗೆ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ ಸಾಧ್ಯತೆಯಿದೆ.…

1 day ago