11.11.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಹಾಗೂ ಉತ್ತರ ಕನ್ನಡ ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಮೋಡ, ಗುಡುಗು ಹಾಗೂ ತುಂತುರು ಮಳೆಯ ಸಾಧ್ಯತೆ ಇದೆ. ಒಂದೆರಡು ಕಡೆ ಸಾಮಾನ್ಯ ಮಳೆಯ ಸಾಧ್ಯತೆಯೂ ಇದೆ.
ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಮೈಸೂರು ಹಾಗೂ ಚಾಮರಾಜನಗರ ಅಲ್ಲಲ್ಲಿ ಗುಡುಗು ಮಳೆಯ ಮುನ್ಸೂಚನೆ ಇದೆ. ಧಾರವಾಡ ಒಂದೆರಡು ಕಡೆ ಗುಡುಗು, ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಬೆಳಗಾವಿ, ವಿಜಾಪುರ ಜಿಲ್ಲೆಗಳ ಮಹಾರಾಷ್ಟ್ರಕ್ಕೆ ಹೊಂದಿಕೊಂಡಿರುವ ಪ್ರದೇಶಗಳ ಸುತ್ತಮುತ್ತ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಅಲ್ಲಲ್ಲಿ ಹಗುರವಾಗಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ನವೆಂಬರ್ 11ರಿಂದ ಹಿಂಗಾರು ಕ್ಷೀಣಿಸಿ ರಾಜ್ಯದಾದ್ಯಂತ ಒಣ ಹವೆ ಆವರಿಸುವ ಲಕ್ಷಣಗಳಿದ್ದು ನವೆಂಬರ್ 15 ನಂತರ ರಾಜ್ಯದ ದಕ್ಷಿಣ ಕರಾವಳಿ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಮೋಡ, ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಆದರೆ ಉತ್ತರ ಭಾರತದ ಕಡೆಯಿಂದ ಬೀಸುತ್ತಿರುವ ಗಾಳಿಯ ಪ್ರಭಾವ ಹೆಚ್ಚಾದರೆ ಒಣ ಹವೆ ಮುಂದುವರಿಯಬಹುದು.
ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.…
ಅಂಚೆ ಇಲಾಖೆಯಿಂದ ಬೆಳೆಗಾರರಿಂದ ಗ್ರಾಹಕರು ನೇರ ಮಾವು ಮಾರಾಟ ಯಶಸ್ವೀ ಸೇವೆ.
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜೋತಿಷಿಗಳನ್ನು ಸಂಪರ್ಕಿಸಿ 9535156490
ಗುಜ್ಜೆ ಮೊಸರು ಗೊಜ್ಜು ಬೇಕಾಗುವ ಸಾಮಾಗ್ರಿಗಳು : ಗುಜ್ಜೆ 1 ಕಪ್ ಬೇಯಿಸಿ…
ಜಮ್ಮು- ಕಾಶ್ಮೀರದ ಪೆಹಲ್ಗಾಮ್ ನಲ್ಲಿಂದು ಪ್ರವಾಸಿಗರ ಮೇಲೆ ಭಯೋತ್ಪಾದಕ ದಾಳಿ ನಡೆದಿದೆ. ಘಟನೆಯಲ್ಲಿ…
23.04.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…