15.11.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡು ಜಿಲ್ಲೆಗಳಾದ್ಯಂತ ಬಿಸಿಲು ಹಾಗೂ ಒಣ ಹವೆ ಮುಂದುವರಿಯಲಿದೆ. ದಕ್ಷಿಣ ಕನ್ನಡ ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳಲ್ಲಿ ಅಲ್ಲಲ್ಲಿ ಹಗುರವಾಗಿ ಮೋಡ ಕವಿದ ವಾತಾವರಣ ಇರಬಹುದು.
ದಕ್ಷಿಣ ಒಳನಾಡಿನ ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ಪಾವಗಡ ಭಾಗಗಳಲ್ಲಿ ಅಲ್ಲಲ್ಲಿ ಹಗುರವಾಗಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಕೊಲಾರ ಹಾಗೂ ಬೆಂಗಳೂರು ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ.
ಬಂಗಾಳಕೊಲ್ಲಿಯಲ್ಲಿ ನವೆಂಬರ್ 15ರಂದು ಉಂಟಾಗುವ ಸಣ್ಣ ಪ್ರಮಾಣದ ವಾಯುಭಾರ ಕುಸಿತವು ಪೂರ್ವ ಕರಾವಳಿಯ ಸಮೀಪ ಉತ್ತರಕ್ಕೆ ಚಲಿಸಿ ನವೆಂಬರ್ 18ರಂದು ಪಶ್ಚಿಮ ಬಂಗಾಳ ಹಾಗೂ ಬಂಗ್ಲಾದೇಶ ಕರಾವಳಿಗೆ ತಲುಪಿ ಶಿಥಿಲಗೊಳ್ಳುವ ಲಕ್ಷಣಗಳಿವೆ. ನವೆಂಬರ್ 15 ರಿಂದ 2 ಅಥವಾ 3 ದಿನಗಳ ಕಾಲ ರಾಜ್ಯದ ದಕ್ಷಿಣ ಕರಾವಳಿ, ಕೊಡಗು ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಹಗುರವಾಗಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಈಗಿನ ಮುನ್ಸೂಚನೆಯಂತೆ ನವೆಂಬರ್ 19ರಿಂದ ಕೊಡಗು ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಸಾಧ್ಯತೆ ಇದೆ.
ರಾಜ್ಯದ ವಿವಿಧೆಡೆ ಮಳೆಯಾಗುತ್ತಿದ್ದು ನದಿಗಳು ತುಂಬಿ ಹರಿಯುತ್ತಿವೆ. ಬಹುತೇಕ ಜಲಾಶಯಗಳು ಭರ್ತಿಯಾಗಿವೆ. ಕೊಡಗಿನ…
ನಿರಂತರ 170 ಗಂಟೆಗಳ ಕಾಲ ಭರತನಾಟ್ಯ ಪ್ರದರ್ಶನ ನೀಡಿದ ಮಂಗಳೂರಿನ ರೆಮೋನಾ ಪಿರೇರಾ,…
ಕಳೆದ 11 ವರ್ಷಗಳಲ್ಲಿ ಕೃಷಿ ಕ್ಷೇತ್ರದಲ್ಲಿ ಅಗಾಧ ಬೆಳವಣಿಗೆಯಾಗಿದ್ದು, ಕೃಷಿಕರ ಹಿತದೃಷ್ಟಿಯಿಂದ ಕೇಂದ್ರ…
ಕೇಂದ್ರ ಸಂವಹನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ, ದೆಹಲಿಯಲ್ಲಿ ʻಭಾರತ್ ಸಂಚಾರ್ ನಿಗಮ್ ಲಿಮಿಟೆಡ್ʼನ-…
ರಾಜ್ಯದೆಲ್ಲೆಡೆ ಇಂದು ನಾಗರಪಂಚಮಿಯನ್ನು ಸಡಗರ ಸಂಭ್ರಮದಿಂದ ಆಚರಿಸಲಾಯಿತು. ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ…
ಕೊಪ್ಪಳ ಜಿಲ್ಲೆಯಲ್ಲಿ ಜುಲೈ ಅಂತ್ಯದವರಿಗೆ 2 ಲಕ್ಷ ಹೆಕ್ಟೇರ್ ಪ್ರದೇಶದ ಬಿತ್ತನೆಯ ಗುರಿ…