Weather Mirror | 16-11-2023 | ರಾಜ್ಯದಲ್ಲಿ ಒಣಹವೆ | ನ.19 ರಿಂದ ಅಲ್ಲಲ್ಲಿ ಸಾಮಾನ್ಯ ಮಳೆಯ ಸಾಧ್ಯತೆ |

November 16, 2023
11:17 AM
ನವೆಂಬರ್ 19ರಿಂದ ರಾಜ್ಯದ ದಕ್ಷಿಣ ಒಳನಾಡು, ಕೊಡಗು ಹಾಗೂ ದಕ್ಷಿಣ ಕರಾವಳಿ ಅಲ್ಲಲ್ಲಿ ಸಾಮಾನ್ಯ ಮಳೆಯ ಸಾಧ್ಯತೆ ಇದೆ.

17.11.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಒಣ ಹವೆ ಮುಂದುವರಿಯಲಿದೆ. ಆದರೆ ಸುಬ್ರಹ್ಮಣ್ಯ ಹಾಗೂ ಸುಳ್ಯ ಸುತ್ತಮುತ್ತ ಭಾಗಗಳಲ್ಲಿ ಸಂಜೆ, ರಾತ್ರಿ ಸ್ವಲ್ಪ ಮೋಡದ ವಾತಾವರಣ ಇರಬಹುದು.ಕೊಡಗು ಅಲ್ಲಲ್ಲಿ ಸಂಜೆ, ರಾತ್ರಿ ಮಳೆಯ ಮುನ್ಸೂಚನೆ ಇದೆ. ಮೈಸೂರು, ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ.

ಈಗಿನ ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ನವೆಂಬರ್ 17ರ ರಾತ್ರಿ ಬಾಂಗ್ಲಾದೇಶದ ಕರಾವಳಿಗೆ ಅಪ್ಪಳಿಸುವ ಸಾಧ್ಯತೆ ಇದೆ. ನವೆಂಬರ್ 19ರಂದು ಬಂಗಾಳಕೊಲ್ಲಿಯಲ್ಲಿ ಇನ್ನೊಂದು ವಾಯುಭಾರ ಕುಸಿತವು ಉಂಟಾಗುವ ಲಕ್ಷಣಗಳಿದ್ದು, ಆಂದ್ರಾ ಕರಾವಳಿ ಕಡೆ ಚಲಿಸುವ ಸಾಧ್ಯತೆ. ಪರಿಣಾಮವಾಗಿ ನವೆಂಬರ್ 19ರಿಂದ ರಾಜ್ಯದ ದಕ್ಷಿಣ ಒಳನಾಡು, ಕೊಡಗು ಹಾಗೂ ದಕ್ಷಿಣ ಕರಾವಳಿ ಅಲ್ಲಲ್ಲಿ ಸಾಮಾನ್ಯ ಮಳೆಯ ಸಾಧ್ಯತೆ ಇದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಹವಾಮಾನ ವರದಿ | 14-10-2026 | ಕರ್ನಾಟಕಕ್ಕೆ ಹಿಂಗಾರು ಮಳೆ ಪ್ರವೇಶದ ಸೂಚನೆ – ಅ.16ರಿಂದ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ
October 14, 2026
2:38 PM
by: ಸಾಯಿಶೇಖರ್ ಕರಿಕಳ
ರಸ್ತೆ ಬದಿಯಲ್ಲಿ ಕಸ ಎಸೆಯುವವರೇ, ಒಮ್ಮೆ ಇವರನ್ನು ನೋಡಿ…! – 5 ದಿನಗಳಲ್ಲಿ ಕಂಡ ಭಯಾನಕ ವಾಸ್ತವ
October 13, 2026
11:01 PM
by: ಮಹೇಶ್ ಪುಚ್ಚಪ್ಪಾಡಿ
ಸುಳ್ಯದಲ್ಲಿ ಅ.19 ರಂದು ಪ್ರಶಾಂತಿ ಡೆಂಟಲ್ ಕ್ಲಿನಿಕ್ ಉದ್ಘಾಟನೆ
October 13, 2026
10:36 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 13-10-2026 | ಅ.15ರಿಂದ ಕರ್ನಾಟಕದಲ್ಲಿ ಮತ್ತೆ ಮಳೆ ಸಾಧ್ಯತೆ – ಹಿಂಗಾರು ಆರಂಭದ ಮುನ್ಸೂಚನೆ
October 13, 2026
10:15 AM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror