17.11.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಒಣ ಹವೆ ಮುಂದುವರಿಯಲಿದೆ. ಆದರೆ ಸುಬ್ರಹ್ಮಣ್ಯ ಹಾಗೂ ಸುಳ್ಯ ಸುತ್ತಮುತ್ತ ಭಾಗಗಳಲ್ಲಿ ಸಂಜೆ, ರಾತ್ರಿ ಸ್ವಲ್ಪ ಮೋಡದ ವಾತಾವರಣ ಇರಬಹುದು.ಕೊಡಗು ಅಲ್ಲಲ್ಲಿ ಸಂಜೆ, ರಾತ್ರಿ ಮಳೆಯ ಮುನ್ಸೂಚನೆ ಇದೆ. ಮೈಸೂರು, ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ.
ಈಗಿನ ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ನವೆಂಬರ್ 17ರ ರಾತ್ರಿ ಬಾಂಗ್ಲಾದೇಶದ ಕರಾವಳಿಗೆ ಅಪ್ಪಳಿಸುವ ಸಾಧ್ಯತೆ ಇದೆ. ನವೆಂಬರ್ 19ರಂದು ಬಂಗಾಳಕೊಲ್ಲಿಯಲ್ಲಿ ಇನ್ನೊಂದು ವಾಯುಭಾರ ಕುಸಿತವು ಉಂಟಾಗುವ ಲಕ್ಷಣಗಳಿದ್ದು, ಆಂದ್ರಾ ಕರಾವಳಿ ಕಡೆ ಚಲಿಸುವ ಸಾಧ್ಯತೆ. ಪರಿಣಾಮವಾಗಿ ನವೆಂಬರ್ 19ರಿಂದ ರಾಜ್ಯದ ದಕ್ಷಿಣ ಒಳನಾಡು, ಕೊಡಗು ಹಾಗೂ ದಕ್ಷಿಣ ಕರಾವಳಿ ಅಲ್ಲಲ್ಲಿ ಸಾಮಾನ್ಯ ಮಳೆಯ ಸಾಧ್ಯತೆ ಇದೆ.
ಎಂತ ಮಾರ್ರೇ.... ಈ ಮನುಷ್ಯರಿಗೆ ಒಂದು ಸೊಲ್ಪ ಹೊತ್ತು ಕರೆಂಟ್ ಹೊದ್ರೆ ಕೂಡ್ಲೆ…
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ, ಸುಳ್ಯ, ಪುತ್ತೂರು,ಚೆಂಬು ಪ್ರದೇಶದ ಕೆಲವು ಕಡೆ 100…
ಬಿತ್ತನೆ ಬೀಜ ಮತ್ತು ರಸಗೊಬ್ಬರವನ್ನು ಕಾಳಸಂತೆಯಲ್ಲಿ ಮಾರಾಟಮಾಡುವವರು ಮತ್ತು ಕೃತಕ ಅಭಾವ ಸೃಷ್ಟಿಸುವವರ…
ರೈತರು ಉತ್ತಮ ಇಳುವರಿ ಪಡೆಯಲು ಡಿಎಪಿ ಗೊಬ್ಬರಕ್ಕೆ ಪರ್ಯಾಯವಾಗಿ ಸಂಯುಕ್ತ ರಸಗೊಬ್ಬರ ಬಳಸಲು…
‘ಏಕಲವ್ಯ’ – ಈ ಪದವು ಸಾಧನೆಯ ಐಕಾನ್. ಪರ್ಯಾಯ ಪದ. ಸಾಧನೆಗೆ ಜಾತಿ,…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490