Advertisement
ವೆದರ್ ಮಿರರ್

Weather Mirror | 17-11-2023 | ಕರಾವಳಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಹಗುರವಾಗಿ ಮಳೆ | ವಾಯುಭಾರ ಕುಸಿತದ ಪರಿಣಾಮ ನಮಗಿಲ್ಲ |

Share

18.11.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಹಗುರವಾಗಿ ಮೋಡ ಕವಿದ ವಾತಾವರಣದ ಮುನ್ಸೂಚನೆ ಇದೆ. ಕೊಡಗು ಮೋಡ ಕವಿದ ವಾತಾವರಣದ ಮುನ್ಸೂಚನೆ ಇದ್ದು ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ. ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದ್ದು, ಚಾಮರಾಜನಗರ ಒಂದೆರಡು ಕಡೆ ಮಳೆಯ ಸಾಧ್ಯತೆಯೂ ಇದೆ.

ಉಳಿದ ಕರ್ನಾಟಕದ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ. ಈಗಿನ ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ಬಂಗ್ಲಾದೇಶ ಕರಾವಳಿಗೆ ತಲುಪಿದ್ದು, ಇವತ್ತು ರಾತ್ರಿ ಶಿಥಿಲಗೊಳ್ಳಲಿದೆ. ಆಂಧ್ರಾ ಕರಾವಳಿ ಬಳಿ ನವೆಂಬರ್ 19ರಂದು ಉಂಟಾಗಲಿದ್ದ ವಾಯುಭಾರ ಕುಸಿತವು ನವೆಂಬರ್ 22 ಕ್ಕೆ ಮುಂದೂಡಲ್ಪಟ್ಟಿದ್ದು ಅಷ್ಟೇನು ಪ್ರಭಲವಾಗಿರುವ ಸಾಧ್ಯತೆ ಕಾಣುತ್ತಿಲ್ಲ.

ಪರಿಣಾಮವಾಗಿ ಕೊಡಗು ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ನವೆಂಬರ್ 19 ರಿಂದ 22ರ ತನಕ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ದಕ್ಷಿಣ ಕರಾವಳಿ ಮೋಡ ಮಾತ್ರ ಇರಬಹುದು. ಮಧ್ಯ ಹಾಗೂ ದಕ್ಷಿಣ ಕೇರಳದ ಹೆಚ್ಚಿನ ಭಾಗಗಳಲ್ಲಿ ಮುಂದಿನ 10 ದಿನಗಳವರೆಗೂ ಮಳೆಯ ಮುನ್ಸೂಚನೆ ಇದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ರಾಜ್ಯಾದ್ಯಂತ ನವರಾತ್ರಿ ಸಂಭ್ರಮ : ಶಕ್ತಿಪೀಠಗಳಲ್ಲಿ ವಿಶೇಷ ಪೂಜೆ, ಮಂಗಳೂರು–ಮಡಿಕೇರಿ–ಶ್ರೀರಂಗಪಟ್ಟಣದಲ್ಲಿ ದಸರಾ ಸಂಭ್ರಮ

ರಾಜ್ಯಾದ್ಯಂತ ನವರಾತ್ರಿ ಸಂಭ್ರಮ ಮನೆಮಾಡಿದ್ದು, ಶೃಂಗೇರಿ, ಹೊರನಾಡು, ಕಟೀಲು ಮತ್ತು ಕೊಲ್ಲೂರು ಸೇರಿದಂತೆ…

5 hours ago

ಪಶ್ಚಿಮ ಘಟ್ಟ ಉಳಿಸಿ, ಉತ್ತರ ಕನ್ನಡ ರಕ್ಷಿಸಿ : ಬೇಡ್ತಿ–ಅಘನಾಶಿನಿ ನದಿ ತಿರುವು ಯೋಜನೆಗೆ ವಿರೋಧ

ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಡೆದ ಬೃಹತ್ ಧರಣಿಯಲ್ಲಿ ಬೇಡ್ತಿ–ಅಘನಾಶಿನಿ ನದಿ ತಿರುವು ಯೋಜನೆಯನ್ನು…

5 hours ago

ನಗರೀಕರಣದ ನಡುವೆ ಪ್ರಕೃತಿ, ವನ್ಯಜೀವಿಗಳ ಸಮತೋಲನ ಕಾಪಾಡುವುದು ಆದ್ಯತೆಯಾಗಲಿ

ನಗರೀಕರಣದ ನಡುವೆ ಪ್ರಕೃತಿ ಮತ್ತು ವನ್ಯಜೀವಿಗಳ ನಡುವಿನ ಸಮತೋಲನ ಕಾಪಾಡುವುದು ಎಲ್ಲರ ಆದ್ಯತೆಯಾಗಬೇಕು…

1 day ago

ಕೊರಿಯರ್ ಮೂಲಕ ಮಾದಕ ದ್ರವ್ಯ ಸಾಗಾಟ..! ಮಂಗಳೂರಿನಲ್ಲಿ 1.58 ಕೋಟಿ ರೂ. ಮೌಲ್ಯದ ಎಂಡಿಎಂಎ ವಶ

ಮಂಗಳೂರಿನಲ್ಲಿ ಕೊರಿಯರ್ ಮೂಲಕ ಎಂಡಿಎಂಎ ಸಾಗಾಟ ಮಾಡಿದ ಆರೋಪದ ಮೇಲೆ ಸಿಸಿಬಿ ಪೊಲೀಸರು…

1 day ago

ಡಿಸೆಂಬರ್‌ನಲ್ಲಿ ಮತ್ತಷ್ಟು ತೀವ್ರಗೊಳ್ಳಲಿದೆಯೇ ಎಲ್‌ನಿನೋ..? ಬರ, ಪ್ರವಾಹದ ಅಪಾಯದ ಬಗ್ಗೆ ವಿಶ್ವ ಹವಾಮಾನ ಸಂಸ್ಥೆ ಎಚ್ಚರಿಕೆ

ಎಲ್‌ನಿನೋ ವಿದ್ಯಮಾನವು ಡಿಸೆಂಬರ್‌ನಲ್ಲಿ ಗರಿಷ್ಠ ತೀವ್ರತೆ ತಲುಪುವ ಸಾಧ್ಯತೆಯಿದ್ದು, 2027ರ ಫೆಬ್ರವರಿವರೆಗೆ ಮುಂದುವರಿಯಬಹುದು…

1 day ago