23.06.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಉತ್ತರ ಕನ್ನಡ ಕರಾವಳಿ ತೀರ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ, ಪಾವಗಡ, ಹಾಸನ, ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಅಲ್ಲಲ್ಲಿ ಹಗುರವಾಗಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಮುಂಗಾರು : ಜೂನ್ ಕೊನೆಯ ತನಕವೂ ಮುಂಗಾರು ದುರ್ಬಲತೆ ಮುಂದುವರಿಯಲಿದೆ. ಈಗಿನ ದಕ್ಷಿಣ ಒಳನಾಡು ಭಾಗಗಳ ಅಲ್ಲಲ್ಲಿ ಬೀಸುತ್ತಿರುವ ಮಳೆಯೂ ಜೂನ್ 27ರ ನಂತರ ಕಡಿಮೆಯಾಗುವ ಲಕ್ಷಣಗಳಿದ್ದು, ನಂತರ ಕರಾವಳಿಯಲ್ಲಿ ಮಾತ್ರ ಸಾಮಾನ್ಯ ಮುಂಗಾರು ಮಳೆ ಮುಂದುವರಿಯುವ ಸಾಧ್ಯತೆಗಳಿವೆ . ಒಟ್ಟಿನಲ್ಲಿ ಈಗಿನ ಮುನ್ಸೂಚನೆಯಂತೆ ಮುಂದಿನ 10 ದಿನಗಳವರೆಗೂ ಮುಂಗಾರು ಚುರುಕಾಗುವ ಯಾವುದೇ ಲಕ್ಷಣಗಳು ಕಾಣುತ್ತಿಲ್ಲ. ಜೂನ್ ತಿಂಗಳಲ್ಲಿ ಉತ್ತರ ಒಳನಾಡು ಭಾಗಗಳಲ್ಲಿ ಮಳೆಯ ತೀವ್ರ ಕೊರತೆಯಾಗುವ ಸಾಧ್ಯತೆ ಇದೆ.
ಚಂಡಮಾರುತದ ಪರಿಣಾಮ ರಾಜ್ಯದಲ್ಲಿ ಇನ್ನೂ 4 ದಿನಗಳ ಕಾಲ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ದಕ್ಷಿಣ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರು ಸೇರಿದಂತೆ ದಕ್ಷಿಣ ಜಿಲ್ಲೆಗಳಲ್ಲಿ ಗುಡುಗು ಮಿಂಚು ಸಹಿತ ಹಗುರ ಮಳೆಯಾಗುವ ಸಾಧ್ಯತೆಯಿದೆ.
ಕಳೆದ ಎರಡು ದಿನಗಳಿಂದ ಕೆಲವು ಕಡೆ ಮಳೆಯಾಗಿದ್ದು, ತುಮಕೂರಿನಲ್ಲಿ ಧಾರಾಕಾರ ಮಳೆಯಾಗಿದ್ದು ಜನ ಜೀವನ ಅಸ್ತವ್ಯಸ್ತವಾಗಿದೆ. ಮುಂಗಾರು ಇಲ್ಲದೇ ತಲೆ ಮೇಲೆ ಕೈಹೊತ್ತು ಕುಳಿತ್ತಿದ್ದ ಅನ್ನದಾತರ ಮೊಗದಲ್ಲಿ ಮಂದಹಾಸ ಮೂಡಿದೆ. ಹಾಸನದಲ್ಲಿ ಮತ್ತೆ ಮಳೆ ಶುರುವಾಗಿದ್ದು ಜನರು ಪರದಾಡಿದರು. ಜಿಲ್ಲೆಯ ವಿವಿಧೆಡೆ ಮಳೆ ಸುರಿಯುತ್ತಿದ್ದು ಕೃಷಿ ಚಟುವಟಿಕೆ ಬಿರುಸುಗೊಂಡಿದೆ. ಆದರೆ ಕೆಲ ಭಾಗಗಳಲ್ಲಿ ಮಳೆ ಬಾರದ ಹಿನ್ನೆಲೆ ಬಿತ್ತನೆ ಮಾಡಿದ ರೈತರು ಮಳೆಗಾಗಿ ಕಾಯುತ್ತಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಬುಧವಾರ ಉತ್ತಮ ಮಳೆಯಾಗಿತ್ತು. ಕುಕ್ಕೆ ಸುಬ್ರಹ್ಮಣ್ಯದಲ್ಲಿ 30 ಮಿಮೀ ಹಾಗೂ ಆಸುಪಾಸಿನ ಪ್ರದೇಶಗಳಲ್ಲಿಯೂ ಮಳೆಯಾಗಿದೆ.
ಸುಳ್ಯ ತಾಲೂಕಿನ ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಶತಮಾನೋತ್ಸವ ಕಾರ್ಯಕ್ರಮ…
ರಾಜ್ಯದಲ್ಲಿ ಅತಿ ಹೆಚ್ಚು ನಕಲಿ ವೈದ್ಯರು ಕೋಲಾರ ಜಿಲ್ಲೆಯಲ್ಲಿದ್ದಾರೆ. ಇಂತಹ ನಕಲಿ ವೈದ್ಯರ…
ನಬಾರ್ಡ್ ಸಾಲದ ಮಿತಿ ಹೆಚ್ಚಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ದೆಹಲಿಯಲ್ಲಿ ಕೇಂದ್ರ ಹಣಕಾಸು…
ನಾಡಿನ ಹೆಮ್ಮೆಯ ಸಂಸ್ಥೆ ಕೆಎಂಎಫ್ ನಂದಿನಿ ಉತ್ಪನ್ನಗಳು ಈಗ ರಾಷ್ಟ್ರ ರಾಜಧಾನಿಯಲ್ಲಿ ಲಭ್ಯವಿರಲಿದೆ.…
ರಾಜ್ಯದಲ್ಲಿ ತುಮಕೂರು, ಚಿತ್ರದುರ್ಗ, ಕೋಲಾರ ಮತ್ತು ಚಿಕ್ಕಬಳ್ಳಾಪುರದಲ್ಲಿ ಹೆಚ್ಚಾಗಿ ಹುಣಸೆಹಣ್ಣು ಬೆಳೆಯಲಾಗುತ್ತಿದೆ. ಈ…