Advertisement
ವೆದರ್ ಮಿರರ್

#WeatherMirror | ಕರಾವಳಿ ತೀರ ಭಾಗಗಳಲ್ಲಿ ಮಳೆ ಸಾಧ್ಯತೆ | ಉತ್ತರ ಕರ್ನಾಟದಲ್ಲಿ ಇನ್ನೂ ಚುರುಕುಗೊಳ್ಳದ ಮುಂಗಾರು | ಜೂನ್ ಕೊನೆಯ ತನಕವೂ ಮುಂಗಾರು ದುರ್ಬಲತೆ ಮುಂದುವರಿಕೆ ? |

Share

23.06.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಉತ್ತರ ಕನ್ನಡ ಕರಾವಳಿ ತೀರ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ, ಪಾವಗಡ, ಹಾಸನ, ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಅಲ್ಲಲ್ಲಿ ಹಗುರವಾಗಿ ಮೋಡದ ವಾತಾವರಣದ ಮುನ್ಸೂಚನೆ ಇದೆ.

ಮುಂಗಾರು : ಜೂನ್ ಕೊನೆಯ ತನಕವೂ ಮುಂಗಾರು ದುರ್ಬಲತೆ ಮುಂದುವರಿಯಲಿದೆ. ಈಗಿನ ದಕ್ಷಿಣ ಒಳನಾಡು ಭಾಗಗಳ ಅಲ್ಲಲ್ಲಿ ಬೀಸುತ್ತಿರುವ ಮಳೆಯೂ ಜೂನ್ 27ರ ನಂತರ ಕಡಿಮೆಯಾಗುವ ಲಕ್ಷಣಗಳಿದ್ದು, ನಂತರ ಕರಾವಳಿಯಲ್ಲಿ ಮಾತ್ರ ಸಾಮಾನ್ಯ ಮುಂಗಾರು ಮಳೆ ಮುಂದುವರಿಯುವ ಸಾಧ್ಯತೆಗಳಿವೆ . ಒಟ್ಟಿನಲ್ಲಿ ಈಗಿನ ಮುನ್ಸೂಚನೆಯಂತೆ ಮುಂದಿನ 10 ದಿನಗಳವರೆಗೂ ಮುಂಗಾರು ಚುರುಕಾಗುವ ಯಾವುದೇ ಲಕ್ಷಣಗಳು ಕಾಣುತ್ತಿಲ್ಲ. ಜೂನ್ ತಿಂಗಳಲ್ಲಿ ಉತ್ತರ ಒಳನಾಡು ಭಾಗಗಳಲ್ಲಿ ಮಳೆಯ ತೀವ್ರ ಕೊರತೆಯಾಗುವ ಸಾಧ್ಯತೆ ಇದೆ.

ಕಳೆದ ಒಂದು ವಾರದಿಂದ ರಾಜ್ಯದ ದಕ್ಷಿಣ ಒಳನಾಡು, ಮಲೆನಾಡು ಮತ್ತು ಕರಾವಳಿ ಭಾಗದಲ್ಲಿ ಹಗುರ ಮಳೆಯಾಗಿದೆ.  ಉತ್ತರ ಕರ್ನಾಟಕ ಭಾಗದಲ್ಲಿ ಜೂನ್ ಕೊನೆಯ ವಾರ ಬಂದರೂ ವಾಡಿಕೆಯಂತೆ ಮುಂಗಾರು ಚುರುಕುಗೊಳ್ಳದ ಕಾರಣ ರೈತರು ಆತಂಕಕ್ಕೆ ಒಳಗಾಗಿದ್ದಾರೆ. ಬಿತ್ತನೆ ಮಾಡಿದವರು ಮಳೆಯ ನಿರೀಕ್ಷೆಯಲ್ಲಿದ್ದಾರೆ.

ಚಂಡಮಾರುತದ ಪರಿಣಾಮ ರಾಜ್ಯದಲ್ಲಿ ಇನ್ನೂ 4 ದಿನಗಳ ಕಾಲ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ದಕ್ಷಿಣ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.  ಬೆಂಗಳೂರು ಸೇರಿದಂತೆ ದಕ್ಷಿಣ ಜಿಲ್ಲೆಗಳಲ್ಲಿ ಗುಡುಗು ಮಿಂಚು ಸಹಿತ ಹಗುರ ಮಳೆಯಾಗುವ ಸಾಧ್ಯತೆಯಿದೆ.

ಕಳೆದ ಎರಡು ದಿನಗಳಿಂದ ಕೆಲವು ಕಡೆ ಮಳೆಯಾಗಿದ್ದು, ತುಮಕೂರಿನಲ್ಲಿ ಧಾರಾಕಾರ ಮಳೆಯಾಗಿದ್ದು ಜನ ಜೀವನ ಅಸ್ತವ್ಯಸ್ತವಾಗಿದೆ. ಮುಂಗಾರು ಇಲ್ಲದೇ ತಲೆ ಮೇಲೆ ಕೈಹೊತ್ತು ಕುಳಿತ್ತಿದ್ದ ಅನ್ನದಾತರ ಮೊಗದಲ್ಲಿ ಮಂದಹಾಸ ಮೂಡಿದೆ.  ಹಾಸನದಲ್ಲಿ ಮತ್ತೆ ಮಳೆ ಶುರುವಾಗಿದ್ದು ಜನರು ಪರದಾಡಿದರು.  ಜಿಲ್ಲೆಯ ವಿವಿಧೆಡೆ ಮಳೆ ಸುರಿಯುತ್ತಿದ್ದು ಕೃಷಿ ಚಟುವಟಿಕೆ ಬಿರುಸುಗೊಂಡಿದೆ. ಆದರೆ ಕೆಲ ಭಾಗಗಳಲ್ಲಿ ಮಳೆ ಬಾರದ ಹಿನ್ನೆಲೆ ಬಿತ್ತನೆ ಮಾಡಿದ ರೈತರು ಮಳೆಗಾಗಿ ಕಾಯುತ್ತಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಬುಧವಾರ ಉತ್ತಮ ಮಳೆಯಾಗಿತ್ತು. ಕುಕ್ಕೆ ಸುಬ್ರಹ್ಮಣ್ಯದಲ್ಲಿ 30 ಮಿಮೀ ಹಾಗೂ ಆಸುಪಾಸಿನ ಪ್ರದೇಶಗಳಲ್ಲಿಯೂ ಮಳೆಯಾಗಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಹವಾಮಾನ ವರದಿ | 14-10-2026 | ಕರ್ನಾಟಕಕ್ಕೆ ಹಿಂಗಾರು ಮಳೆ ಪ್ರವೇಶದ ಸೂಚನೆ – ಅ.16ರಿಂದ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಅ.15ರಿಂದ ಹಿಂಗಾರು ಮಳೆ ಆರಂಭವಾಗುವ ಲಕ್ಷಣಗಳಿದ್ದು, ಅ.16ರಿಂದ ಕರಾವಳಿ ಹಾಗೂ ಉತ್ತರ…

19 hours ago

ರಸ್ತೆ ಬದಿಯಲ್ಲಿ ಕಸ ಎಸೆಯುವವರೇ, ಒಮ್ಮೆ ಇವರನ್ನು ನೋಡಿ…! – 5 ದಿನಗಳಲ್ಲಿ ಕಂಡ ಭಯಾನಕ ವಾಸ್ತವ

ಕೊಡಗಿನ ಸಂಪಾಜೆಯಿಂದ ಮಂಗಳೂರಿಗೆ ಸ್ವಚ್ಛತಾ ದಂಡಯಾತ್ರೆ ಕೈಗೊಂಡಿರುವ ನಾಗರಾಜ್ ಬಜಾಲ್ ಅವರು ಇದುವರೆಗಿನ…

1 day ago

ಸುಳ್ಯದಲ್ಲಿ ಅ.19 ರಂದು ಪ್ರಶಾಂತಿ ಡೆಂಟಲ್ ಕ್ಲಿನಿಕ್ ಉದ್ಘಾಟನೆ

ಸುಳ್ಯದ ಎಪಿಎಂಸಿ ರಸ್ತೆಯ ಆಶೀರ್ವಾದ್ ಕಟ್ಟಡದ ಮೊದಲ ಮಹಡಿಯಲ್ಲಿ ಆರಂಭವಾಗುತ್ತಿರುವ ಪ್ರಶಾಂತಿ ಡೆಂಟಲ್…

2 days ago

ಹವಾಮಾನ ವರದಿ | 13-10-2026 | ಅ.15ರಿಂದ ಕರ್ನಾಟಕದಲ್ಲಿ ಮತ್ತೆ ಮಳೆ ಸಾಧ್ಯತೆ – ಹಿಂಗಾರು ಆರಂಭದ ಮುನ್ಸೂಚನೆ

ರಾಜ್ಯದಲ್ಲಿ ಅಕ್ಟೋಬರ್ 14ರವರೆಗೆ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ ಸಾಧ್ಯತೆಯಿದೆ.…

2 days ago