Weather Mirror | 22-11-2023 | ಕೆಲವು ಕಡೆ ತುಂತುರು ಮಳೆ |

November 22, 2023
11:28 AM
ನವೆಂಬರ್ 23 ಹಾಗೂ 24ರಂದು ದಕ್ಷಿಣ ಒಳನಾಡು, ಮಲೆನಾಡು ಹಾಗೂ ಕರಾವಳಿ ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.

23.11.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳ ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ. ಉತ್ತರ ಕನ್ನಡ ಒಣ ಹವೆ ಮುಂದುವರಿಯಲಿದೆ. ಕೊಡಗು, ಹಾಸನ, ಚಿಕ್ಕಮಗಳೂರು ಅಲ್ಲಲ್ಲಿ ಮೋಡ ವಾತಾವರಣದ ಮುನ್ಸೂಚನೆ ಇದೆ. ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ.

ಚಾಮರಾಜನಗರ, ಕೋಲಾರ, ಚಿಕ್ಕಬಳ್ಳಾಪುರ, ಪಾವಗಡ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ.
ರಾಮನಗರ, ಬೆಂಗಳೂರು, ತುಮಕೂರು ಜಿಲ್ಲೆಗಳಲ್ಲಿ ಮೋಡದ ವಾತಾವರಣದ ಇರಲಿದ್ದು ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಮೈಸೂರು, ಮಂಡ್ಯ, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ ಅಲ್ಲಲ್ಲಿ ಮೋಡ ಕವಿದ ವಾತಾವರಣದ ಮುನ್ಸೂಚನೆ ಇದೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ.

ಹಿಂಗಾರು ಹಾಗೂ ಅರಬ್ಬಿ ಸಮುದ್ರದಲ್ಲಿ ಗಾಳಿಯ ಅಸಹಜ ಚಲನೆಯ ಪರಿಣಾಮದಿಂದ ನವೆಂಬರ್ 23 ಹಾಗೂ 24ರಂದು ದಕ್ಷಿಣ ಒಳನಾಡು, ಮಲೆನಾಡು ಹಾಗೂ ಕರಾವಳಿ ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಮಲೆನಾಡು ಹಾಗೂ ಕರಾವಳಿ ಭಾಗಗಳಲ್ಲಿ ನವೆಂಬರ್ 30ರ ತನಕವೂ ಮಳೆ ಮುಂದುವರಿಯುವ ಲಕ್ಷಣಗಳಿವೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಹವಾಮಾನ ವರದಿ |13-09-2026 | ಕರ್ನಾಟಕದಲ್ಲಿ ಮಳೆ ಮತ್ತೆ ಹಂತ ಹಂತವಾಗಿ ಚುರುಕಾಗಬಹುದೇ?
September 13, 2026
12:16 PM
by: ಸಾಯಿಶೇಖರ್ ಕರಿಕಳ
ರೈತರ ಆದಾಯ ಹೆಚ್ಚಿಸಲು ಬಹುಬೆಳೆ, ಪಶುಸಂಗೋಪನೆ, ಮೀನುಗಾರಿಕೆಗೆ ಒತ್ತು
September 13, 2026
8:13 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 12.09.2026 | ಸೆ.15ರಿಂದ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು? ಕರಾವಳಿ–ಮಲೆನಾಡಿನಲ್ಲಿ ಸದ್ಯ ಬಿಸಿಲಿನ ವಾತಾವರಣ
September 12, 2026
12:52 PM
by: ಸಾಯಿಶೇಖರ್ ಕರಿಕಳ
ಹಸುವಿನ ಹಾಲಿಗೆ ಬದಲಾಗಿ ‘ಲ್ಯಾಬ್‌ ಹಾಲು’ – ಇನ್ನು ಕೇವಲ ವಿಜ್ಞಾನಕಲ್ಪನೆ ಅಲ್ಲ..! ಹೊಸ ಅಧ್ಯಯನದ ಲೆಕ್ಕಾಚಾರ
September 12, 2026
7:30 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror