23.11.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳ ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ. ಉತ್ತರ ಕನ್ನಡ ಒಣ ಹವೆ ಮುಂದುವರಿಯಲಿದೆ. ಕೊಡಗು, ಹಾಸನ, ಚಿಕ್ಕಮಗಳೂರು ಅಲ್ಲಲ್ಲಿ ಮೋಡ ವಾತಾವರಣದ ಮುನ್ಸೂಚನೆ ಇದೆ. ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ.
ಚಾಮರಾಜನಗರ, ಕೋಲಾರ, ಚಿಕ್ಕಬಳ್ಳಾಪುರ, ಪಾವಗಡ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ.
ರಾಮನಗರ, ಬೆಂಗಳೂರು, ತುಮಕೂರು ಜಿಲ್ಲೆಗಳಲ್ಲಿ ಮೋಡದ ವಾತಾವರಣದ ಇರಲಿದ್ದು ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಮೈಸೂರು, ಮಂಡ್ಯ, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ ಅಲ್ಲಲ್ಲಿ ಮೋಡ ಕವಿದ ವಾತಾವರಣದ ಮುನ್ಸೂಚನೆ ಇದೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ.
ಹಿಂಗಾರು ಹಾಗೂ ಅರಬ್ಬಿ ಸಮುದ್ರದಲ್ಲಿ ಗಾಳಿಯ ಅಸಹಜ ಚಲನೆಯ ಪರಿಣಾಮದಿಂದ ನವೆಂಬರ್ 23 ಹಾಗೂ 24ರಂದು ದಕ್ಷಿಣ ಒಳನಾಡು, ಮಲೆನಾಡು ಹಾಗೂ ಕರಾವಳಿ ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಮಲೆನಾಡು ಹಾಗೂ ಕರಾವಳಿ ಭಾಗಗಳಲ್ಲಿ ನವೆಂಬರ್ 30ರ ತನಕವೂ ಮಳೆ ಮುಂದುವರಿಯುವ ಲಕ್ಷಣಗಳಿವೆ.
ಅಡಿಕೆ ಸಿಪ್ಪೆ, ಸೋಗೆ ಮತ್ತು ಇತರ ಕೃಷಿ ಅವಶೇಷಗಳಿಂದ ಕಾರ್ಬನ್ ನ್ಯಾನೋಸ್ಫಿಯರ್ಗಳನ್ನು ಅಭಿವೃದ್ಧಿಪಡಿಸಿ,…
ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ಮರುನಾಮಕರಣ ಮಾಡುವ ಪ್ರಸ್ತಾವನೆಗೆ ಬೆಳ್ಳಾರೆ…
ಸುಬ್ರಹ್ಮಣ್ಯದಲ್ಲಿ ಐದು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಶ್ರೀ ಹೋಮಿಯೋಕೇರ್ ಗುತ್ತಿಗಾರಿಗೆ ಸ್ಥಳಾಂತರಗೊಂಡಿದ್ದು, ಎಸ್ಎಂಎಸ್ಜಿ ಕಾಂಪ್ಲೆಕ್ಸ್ನಲ್ಲಿ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಗುಡುಗು…
ಕರ್ನಾಟಕದಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಜುಲೈ 1ರಿಂದ ಅಕ್ಟೋಬರ್ 14ರವರೆಗೆ ದಾಖಲೆಯ…