Weather Mirror | 23-11-2023 | ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ |

November 23, 2023
10:53 AM
ಹಿಂಗಾರು ಹಾಗೂ ಅರಬ್ಬಿ ಸಮುದ್ರದಲ್ಲಿ ಗಾಳಿಯ ಅಸಹಜ ಚಲನೆಯ ಪರಿಣಾಮದಿಂದ ಈಗಿನ ಮಳೆಯ ವಾತಾವರಣವು ಸೃಷ್ಟಿಯಾಗಿದ್ದು, ನವೆಂಬರ್ 24ರಂದು ಉತ್ತರ ಒಳನಾಡಿನ ಕೆಲವು ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ.

24.11.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು, ದಕ್ಷಿಣ ಕನ್ನಡ, ಉಡುಪಿ ಜಿಲ್ಲಾ ಭಾಗಗಳಲ್ಲಿ ಮೋಡ ಕವಿದ ವಾತಾವರಣದೊಂದಿಗೆ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳಲ್ಲಿ ಅಲ್ಲಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಇದೆ. ಉತ್ತರ ಕನ್ನಡದ ದಕ್ಷಿಣ ಭಾಗಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.

ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಮೋಡದ ವಾತಾವರಣ ಇರಲಿದ್ದು ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಸ್ವಲ್ಪ ಜಾಸ್ತಿ ಇರಬಹುದು.ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಪಾವಗಡ, ಚಿತ್ರದುರ್ಗ, ದಾವಣಗೆರೆ, ಬಳ್ಳಾರಿ, ಹಾವೇರಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮೋಡದ ವಾತಾವರಣ ಇರಲಿದ್ದು ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು.

ಹಿಂಗಾರು ಹಾಗೂ ಅರಬ್ಬಿ ಸಮುದ್ರದಲ್ಲಿ ಗಾಳಿಯ ಅಸಹಜ ಚಲನೆಯ ಪರಿಣಾಮದಿಂದ ಈಗಿನ ಮಳೆಯ ವಾತಾವರಣವು ಸೃಷ್ಟಿಯಾಗಿದ್ದು, ನವೆಂಬರ್ 24ರಂದು ಉತ್ತರ ಒಳನಾಡಿನ ಕೆಲವು ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. ನವೆಂಬರ್ 25ರಿಂದ ಮಳೆಯ ಕಡಿಮೆಯಾಗಿ ಮಲೆನಾಡು ಹಾಗೂ ಕರಾವಳಿಯ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ರಾಜ್ಯಾದ್ಯಂತ ನವರಾತ್ರಿ ಸಂಭ್ರಮ : ಶಕ್ತಿಪೀಠಗಳಲ್ಲಿ ವಿಶೇಷ ಪೂಜೆ, ಮಂಗಳೂರು–ಮಡಿಕೇರಿ–ಶ್ರೀರಂಗಪಟ್ಟಣದಲ್ಲಿ ದಸರಾ ಸಂಭ್ರಮ
October 11, 2026
10:37 AM
by: ದ ರೂರಲ್ ಮಿರರ್.ಕಾಂ
ಪಶ್ಚಿಮ ಘಟ್ಟ ಉಳಿಸಿ, ಉತ್ತರ ಕನ್ನಡ ರಕ್ಷಿಸಿ : ಬೇಡ್ತಿ–ಅಘನಾಶಿನಿ ನದಿ ತಿರುವು ಯೋಜನೆಗೆ ವಿರೋಧ
October 11, 2026
10:24 AM
by: ದ ರೂರಲ್ ಮಿರರ್.ಕಾಂ
ನಗರೀಕರಣದ ನಡುವೆ ಪ್ರಕೃತಿ, ವನ್ಯಜೀವಿಗಳ ಸಮತೋಲನ ಕಾಪಾಡುವುದು ಆದ್ಯತೆಯಾಗಲಿ
October 10, 2026
2:55 PM
by: ದ ರೂರಲ್ ಮಿರರ್.ಕಾಂ
ಕೊರಿಯರ್ ಮೂಲಕ ಮಾದಕ ದ್ರವ್ಯ ಸಾಗಾಟ..! ಮಂಗಳೂರಿನಲ್ಲಿ 1.58 ಕೋಟಿ ರೂ. ಮೌಲ್ಯದ ಎಂಡಿಎಂಎ ವಶ
October 10, 2026
2:51 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror