Advertisement
ವೆದರ್ ಮಿರರ್

Weather Mirror | 27-11-2023 | ಕರಾವಳಿ ಜಿಲ್ಲೆಗಳಲ್ಲಿ ಮೋಡ | ರಾಜ್ಯದ ಅಲ್ಲಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ |

Share

28.11.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಸಂಜೆ, ರಾತ್ರಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳ ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ (ಧರ್ಮಸ್ಥಳ, ಬೆಳ್ತಂಗಡಿ, ಕಾರ್ಕಳ ಸುತ್ತಮುತ್ತ ಸಾಧ್ಯತೆ ಹೆಚ್ಚಿದೆ.)

ಕೊಡಗು ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಕುದುರೆಮುಖ, ಶೃಂಗೇರಿ ,ಕೊಪ್ಪ, ಆಗುಂಬೆ, ತೀರ್ಥಹಳ್ಳಿ, ಹೊಸನಗರ, ಸಾಗರ ಸುತ್ತಮುತ್ತ ಭಾಗಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.ಬಾದಾಮಿ, ರಾಮದುರ್ಗ, ಬಾಗಲಕೋಟೆ ಸುತ್ತಮುತ್ತ, ಬಳ್ಳಾರಿಯ ಸಂಡೂರು ಸುತ್ತಮುತ್ತ, ಬೆಂಗಳೂರು ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.

ಉಳಿದ ಕರ್ನಾಟಕದ ಭಾಗಗಳಲ್ಲಿ ಅಲ್ಲಲ್ಲಿ ಸಂಜೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಉತ್ತರ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆಯೂ ಇದೆ.

ನವೆಂಬರ್ 29 ಅಥವಾ 30ರಂದು ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿದ್ದು, ಪರಿಣಾಮವಾಗಿ ಹಿಂಗಾರು ಹಿಂದೆ ಸರಿಯುವ ಸಾಧ್ಯತೆ ಇದೆ.ಅಲ್ಲಿಯ ತನಕ ಅಂದರೆ  ನವೆಂಬರ್ 30ರ ತನಕ ರಾಜ್ಯದ ಅಲ್ಲಲ್ಲಿ ಮೋಡ ಹಾಗೂ ಮಳೆಯ ಮುನ್ಸೂಚನೆ ಇದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಕರ್ನಾಟಕದಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ದಾಖಲೆ ಉದ್ಯೋಗ ಸೃಷ್ಟಿ – 2.04 ಕೋಟಿ ಮಾನವ ದಿನಗಳ ಕೆಲಸ

ಕರ್ನಾಟಕದಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಜುಲೈ 1ರಿಂದ ಅಕ್ಟೋಬರ್ 14ರವರೆಗೆ ದಾಖಲೆಯ…

11 hours ago

ಹವಾಮಾನ ವರದಿ | 14-10-2026 | ಕರ್ನಾಟಕಕ್ಕೆ ಹಿಂಗಾರು ಮಳೆ ಪ್ರವೇಶದ ಸೂಚನೆ – ಅ.16ರಿಂದ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಅ.15ರಿಂದ ಹಿಂಗಾರು ಮಳೆ ಆರಂಭವಾಗುವ ಲಕ್ಷಣಗಳಿದ್ದು, ಅ.16ರಿಂದ ಕರಾವಳಿ ಹಾಗೂ ಉತ್ತರ…

1 day ago

ರಸ್ತೆ ಬದಿಯಲ್ಲಿ ಕಸ ಎಸೆಯುವವರೇ, ಒಮ್ಮೆ ಇವರನ್ನು ನೋಡಿ…! – 5 ದಿನಗಳಲ್ಲಿ ಕಂಡ ಭಯಾನಕ ವಾಸ್ತವ

ಕೊಡಗಿನ ಸಂಪಾಜೆಯಿಂದ ಮಂಗಳೂರಿಗೆ ಸ್ವಚ್ಛತಾ ದಂಡಯಾತ್ರೆ ಕೈಗೊಂಡಿರುವ ನಾಗರಾಜ್ ಬಜಾಲ್ ಅವರು ಇದುವರೆಗಿನ…

2 days ago

ಸುಳ್ಯದಲ್ಲಿ ಅ.19 ರಂದು ಪ್ರಶಾಂತಿ ಡೆಂಟಲ್ ಕ್ಲಿನಿಕ್ ಉದ್ಘಾಟನೆ

ಸುಳ್ಯದ ಎಪಿಎಂಸಿ ರಸ್ತೆಯ ಆಶೀರ್ವಾದ್ ಕಟ್ಟಡದ ಮೊದಲ ಮಹಡಿಯಲ್ಲಿ ಆರಂಭವಾಗುತ್ತಿರುವ ಪ್ರಶಾಂತಿ ಡೆಂಟಲ್…

2 days ago