Weather Mirror | 30-11-2023 | ರಾಜ್ಯದ ಕೆಲವು ಕಡೆ ತುಂತುರು ಮಳೆ ನಿರೀಕ್ಷೆ | ಬಹುತೇಕ ಕಡೆ ಮೋಡದ ವಾತಾವರಣ |

November 30, 2023
11:53 AM
ಈಗಿನ ಮುನ್ಸೂಚನೆಯಂತೆ ಡಿಸೆಂಬರ್ 9 ರಿಂದ ರಾಜ್ಯದ ದಕ್ಷಿಣ ಒಳನಾಡು ಭಾಗಗಳಲ್ಲಿ ಹಿಂಗಾರು ಚುರುಕಾಗುವ ಲಕ್ಷಣಗಳಿವೆ.

01.12.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಹಲವು ಭಾಗಗಳಲ್ಲಿ ಅಲ್ಲಲ್ಲಿ ಸಂಜೆ, ರಾತ್ರಿ ಮೋಡ ಕವಿದ ವಾತಾವರಣದ ಮುನ್ಸೂಚನೆ ಇದೆ. ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.

ಕೊಡಗು ಅಲ್ಲಲ್ಲಿ, ಸೋಮವಾರಪೇಟೆ, ಸಕಲೇಶಪುರ, ಮೂಡಿಗೆರೆ, ಶೃಂಗೇರಿ, ಕುದುರೆಮುಖ, ಆಗುಂಬೆ, ಹೊಸನಗರ, ಸಾಗರ ಸುತ್ತಮುತ್ತ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. ಉಳಿದ ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಮೋಡ ಅಥವಾ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ.ಚಾಮರಾಜನಗರ ಒಂದೆರಡು ಕಡೆ ಹಾಗೂ ಬೆಳಗಾವಿ – ಮಹಾರಾಷ್ಟ್ರ ಗಡಿ ಭಾಗಗಳ ಸುತ್ತಮುತ್ತ ಪ್ರದೇಶಗಳಲ್ಲಿ ಮಳೆಯ ಮುನ್ಸೂಚನೆ ಇದೆ.

ಮೈಸೂರು, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.ಉಳಿದ ಕರ್ನಾಟಕದ ಭಾಗಗಳಲ್ಲಿ ಹಗುರವಾಗಿ ಮೋಡದ ವಾತಾವರಣದ ಮುನ್ಸೂಚನೆ ಇದೆ.

ಡಿಸೆಂಬರ್ 2ರ ನಂತರ ಬಂಗಾಳಕೊಲ್ಲಿಯಲ್ಲಿ ಉಂಟಾಗಲಿರುವ ಚಂಡಮಾರುತವು ಡಿಸೆಂಬರ್ 5 ಅಥವಾ 6ರಂದು ಉತ್ತರ ಆಂಧ್ರಾ ಹಾಗೂ ಒಡಿಶಾದ ಕರಾವಳಿಗೆ ಅಪ್ಪಳಿಸುವ ಸಾಧ್ಯತೆ ಇದೆ. ಪರಿಣಾಮವಾಗಿ ರಾಜ್ಯದಲ್ಲಿ ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳಲ್ಲಿ ಮಳೆಯ ಸಾಧ್ಯತೆ ಇದೆ. ರಾಜ್ಯದ ಉಳಿದ ಭಾಗಗಳಲ್ಲಿ ಒಣ ಹವೆ ಆವರಿಸುವ ಸಾಧ್ಯತೆ ಇದೆ.
ಈಗಿನ ಮುನ್ಸೂಚನೆಯಂತೆ ಡಿಸೆಂಬರ್ 9 ರಿಂದ ರಾಜ್ಯದ ದಕ್ಷಿಣ ಒಳನಾಡು ಭಾಗಗಳಲ್ಲಿ ಹಿಂಗಾರು ಚುರುಕಾಗುವ ಲಕ್ಷಣಗಳಿವೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಕೃಷಿಗೆ ಹವಾಮಾನ ಅಪಾಯ ಹೆಚ್ಚಳ | ರೈತರಿಗೆ ಕಠಿಣ ಕಾಲ ಬರುವ ಸೂಚನೆ ? ದೇಶದ 310 ಜಿಲ್ಲೆಗಳು ಅಪಾಯ ವಲಯದಲ್ಲಿ..!
March 26, 2026
7:04 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 25.03.2026 | ಕರಾವಳಿಯಲ್ಲಿ ಇಂದು ಸಂಜೆ ಮಳೆ ಸಾಧ್ಯತೆ | ಏಪ್ರಿಲ್‌ 5ರವರೆಗೆ ಬೇಸಿಗೆ ಮಳೆ ಸಕ್ರಿಯ!
March 25, 2026
12:30 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 24-03-2026 | ಕರ್ನಾಟಕದಲ್ಲಿ ಮತ್ತೆ ಮಳೆ ಅಲರ್ಟ್‌ | ಈ ದಿನದಿಂದ ಮಳೆ ವ್ಯಾಪ್ತಿ ಹೆಚ್ಚಳ ಸಾಧ್ಯತೆ..!
March 24, 2026
12:24 PM
by: ಸಾಯಿಶೇಖರ್ ಕರಿಕಳ
ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ 4 ಸಾವಿರ ಹುದ್ದೆಗಳು ಖಾಲಿ – ಆರಂಭದಲ್ಲಿ 1 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ
March 24, 2026
7:12 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror