ರಾಜ್ಯದ ಇಂದಿನ ಹವಾಮಾನ ವರದಿ

May 27, 2023
11:23 AM

ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಮಳೆಯ ಆರ್ಭಟ ಜೋರಾಗಿದ್ದರೆ, ಮೇ 28 ರಂದು ಬೆಳಿಗ್ಗೆ ವರೆಗೂ ಹಲವೆಡೆ ಮಳೆಯಾಗುವುದಾಗಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿ ಹಾಗೂ ಉತ್ತರ ಒಳನಾಡಿನ ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ, ಉತ್ತರ ಒಳನಾಡಿನ ಉಳಿದೆಡೆ ಒಣಹವೆ ನಡೆಯಲಿದೆ. ದಕ್ಷಿಣ ಒಳನಾಡಿನ ಪ್ರದೇಶಗಳಲ್ಲಿ ಬಿರುಗಾಳಿ ಸಹಿತ ಗುಡುಗು ಮಿಂಚಿನ ಮಳೆ ಸಾಧ್ಯತೆಯಿದೆ. ಗಾಳಿಯ ವೇಗವು ಗಂಟೆಗೆ 30-40 ಕಿ.ಮೀ ಇರಲಿದೆ. ರಾಜ್ಯದ ಕೆಲವು ಕಡೆಗಳಲ್ಲಿ ಸಾಮಾನ್ಯಕ್ಕಿಂತ 2-3 ಡಿಗ್ರಿ ಸೆಲ್ಸಿಯಸ್ ತಾಪಮಾನ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 32 ಡಿಗ್ರಿ ಸೆಲ್ಸಿಯಸ್ ಇರಲಿದೆ, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ಇರುತ್ತದೆ. ಯಾದಗಿರಿಯಲ್ಲಿ ಗರಿಷ್ಠ ತಾಪಮಾನ 39 ಡಿಗ್ರಿ ಸೆಲ್ಸಿಯಸ್ ಇರುತ್ತದೆ, ಕನಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಇರಲಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 05-03-2026 | ಕರ್ನಾಟಕದಲ್ಲಿ ಬಿಸಿಲಿನ ಅಬ್ಬರ ಶುರು..! ಇನ್ನು 10 ದಿನ ಮಳೆಯ ಲಕ್ಷಣ ಇಲ್ಲ
March 5, 2026
12:20 PM
by: ಸಾಯಿಶೇಖರ್ ಕರಿಕಳ
ಭವಿಷ್ಯದ ಬಾಳೆ ಬೆಳೆ ಉಳಿಸುವ ಗುಟ್ಟು ಕಾಡು ಬಾಳೆ ಜಾತಿಯಲ್ಲಿ!
March 4, 2026
10:20 PM
by: ಮಿರರ್‌ ಡೆಸ್ಕ್
ಕೃಷಿ ಮಾರುಕಟ್ಟೆ ವರದಿ | ಅಡಿಕೆ ಮಾರುಕಟ್ಟೆಯಲ್ಲಿ ಮಿಶ್ರ ಫಲ…!
March 4, 2026
12:01 PM
by: ಮಿರರ್‌ ಡೆಸ್ಕ್
ಇನ್ನೆರಡು ದಿನಗಳಲ್ಲಿ ತಂಬಾಕು ಬೆಳೆಗಾರರ ಸಮಸ್ಯೆಗೆ ಪರಿಹಾರ : ಕುಮಾರಸ್ವಾಮಿ ಭರವಸೆ
March 3, 2026
9:31 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror