18.10.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಕೊಡಗು, ಹಾಸನ, ಚಿಕ್ಕಮಗಳೂರು ಹೆಚ್ಚಿನ ಭಾಗಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಶಿವಮೊಗ್ಗದ ಕರಾವಳಿ ಜೆಲ್ಲೆಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಮಳೆಯ ಮುನ್ಸೂಚನೆ ಇದೆ.
ಮೈಸೂರು, ಚಾಮರಾಜನಗರ ಹೆಚ್ಚಿನ ಭಾಗಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಮಂಡ್ಯ, ರಾಮನಗರ, ಬೆಂಗಳೂರು ಮೋಡ ಅಥವಾ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಹಗುರವಾಗಿ ಮೋಡ ಕವಿದ ವಾತಾವರಣದ ಮುನ್ಸೂಚನೆ ಇದೆ.
ಅರಬ್ಬಿ ಸಮುದ್ರ ಹಾಗೂ ಬಂಗಾಳಕೊಲ್ಲಿಯಲ್ಲಿ ಏಕಕಾಲದಲ್ಲಿ ವಾಯುಭಾರ ಕುಸಿತ ಉಂಟಾಗಲಿರುವುದರಿಂದ ಹಿಂಗಾರು ಆರಂಭ ಮತ್ತಷ್ಟು ವಿಳಂಬವಾಗುವ ಲಕ್ಷಣಗಳಿವೆ. ಅಕ್ಟೊಬರ್ 18ರಿಂದ ಕರಾವಳಿ ಸೇರಿದಂತೆ ರಾಜ್ಯದಾದ್ಯಂತ ಮಳೆ ಕ್ಷೀಣಿಸುವ ಸಾಧ್ಯತೆ ಹೆಚ್ಚಿದೆ. ಅಕ್ಟೊಬರ್ 20ರಿಂದ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಸಾಧ್ಯತೆ ಇದೆ .ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ಉತ್ತರಕ್ಕೂ,ಅರಬ್ಬಿ ಸಮುದ್ರದ ವಾಯುಭಾರ ಕುಸಿತವು ಪಶ್ಚಿಮಕ್ಕೂ ಚಲಿಸುವ ಲಕ್ಷಣಗಳಿವೆ.
Karnataka Todays weather Report | ನಮ್ಮೂರಲ್ಲಿ ಇಂದು ಮಳೆಯಾದೀತೇ…? |
ಗದಗ ತಾಲೂಕಿನ ಲಕ್ಕುಂಡಿ ಗ್ರಾಮದ ಹಾಲಗುಂಡಿ ಬಸವೇಶ್ವರ ದೇವಸ್ಥಾನದ ಆವರಣದಲ್ಲಿ ಲಕ್ಕುಂಡಿ ಪಾರಂಪರಿಕ…
ಬೆಂಗಳೂರಿನ ಬಸವನ ಗುಡಿಯಲ್ಲಿ ಐತಿಹಾಸಿಕ ಕಡಲೆಕಾಯಿ ಪರಿಷೆ ಸೊಬಗು ಕಳೆಗಟ್ಟಿದೆ. ಇಂದು ಕಡಲೆಕಾಯಿ…
ಚಿಕ್ಕಮಗಳೂರು ಜಿಲ್ಲೆಯಲ್ಲಿ ಆನೆಗಳ ಹಾವಳಿ ತಡೆಯಲು ಸರ್ಕಾರದ ಸಚಿವರು ಹಾಗೂ ಅರಣ್ಯ ಇಲಾಖೆ…
ಅಡಿಕೆ ಹಳದಿ ಎಲೆರೋಗ ಬಾಧಿಸಿದ ತೋಟದ ಕೃಷಿಕ ಶಂಕರಪ್ರಸಾದ್ ರೈ ಅವರು ಕೃಷಿ…
ಅಡಿಕೆ ಕೃಷಿಯ ಜೊತೆಗೆ ಮಿಶ್ರ ಕೃಷಿಯನ್ನು ಏಕೆ ಮಾಡಬೇಕು..? ಯಾವ ಕೃಷಿಯನ್ನು ಮಾಡಬಹುದು..?…
25.11.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…