09.12.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಅಲ್ಲಲ್ಲಿ ಮೋಡ ಹಾಗೂ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಮೋಡ ಹಾಗೂ ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡದ ಸಿದ್ಧಾಪುರ, ಶಿರಸಿ ಸುತ್ತಮುತ್ತ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ.
ಕೊಡಗು, ಸೋಮವಾರಪೇಟೆ, ಸಕಲೇಶಪುರ, ಮೂಡಿಗೆರೆ, ಶೃಂಗೇರಿ, ಕುದುರೆಮುಖ, ಆಗುಂಬೆ, ತೀರ್ಥಹಳ್ಳಿ, ಹೊಸನಗರ, ಸಾಗರ ಸುತ್ತಮುತ್ತ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. ಉಳಿದ ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು, ಚಿಕ್ಕಬಳ್ಳಾಪುರ, ತುಮಕೂರು, ಪಾವಗಡ, ಚಿತ್ರದುರ್ಗ ಭಾಗಗಳಲ್ಲಿ ಸಹ ಮಳೆಯ ಮುನ್ಸೂಚನೆ ಇದೆ.ಉಳಿದ ಕರ್ನಾಟಕದ ಭಾಗಗಳಲ್ಲಿ ಅಲ್ಲಲ್ಲಿ ಹಗುರವಾಗಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದಂಥಹ ತಿರುಗುವಿಕೆಯ ಪರಿಣಾಮದಿಂದ ಈಗಿನ ಮಳೆಯ ವಾತಾವರಣವು ಡಿ.9 ರ ವರೆಗೆ ದಕ್ಷಿಣ ಒಳನಾಡು ಹಾಗೂ ಡಿ.12 ರ ತನಕ ಮಲೆನಾಡು ಹಾಗೂ ಕರಾವಳಿ ಭಾಗಗಳಲ್ಲಿ ಮುಂದುವರಿಯುವ ಸಾಧ್ಯತೆ ಇದೆ.
ಬಿತ್ತನೆ ಬೀಜ ಮತ್ತು ರಸಗೊಬ್ಬರವನ್ನು ಕಾಳಸಂತೆಯಲ್ಲಿ ಮಾರಾಟಮಾಡುವವರು ಮತ್ತು ಕೃತಕ ಅಭಾವ ಸೃಷ್ಟಿಸುವವರ…
ರೈತರು ಉತ್ತಮ ಇಳುವರಿ ಪಡೆಯಲು ಡಿಎಪಿ ಗೊಬ್ಬರಕ್ಕೆ ಪರ್ಯಾಯವಾಗಿ ಸಂಯುಕ್ತ ರಸಗೊಬ್ಬರ ಬಳಸಲು…
‘ಏಕಲವ್ಯ’ – ಈ ಪದವು ಸಾಧನೆಯ ಐಕಾನ್. ಪರ್ಯಾಯ ಪದ. ಸಾಧನೆಗೆ ಜಾತಿ,…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಸುಳ್ಯ ತಾಲೂಕಿನ ಸಂಪಾಜೆ ಗ್ರಾಮ ಪಂಚಾಯತ್ ಸಭಾಭವನದಲ್ಲಿ "ಮಹಿಳಾ ಗ್ರಾಮಸಭೆ" ಯು ಈಚೆಗೆ…
ಕರ್ನಾಟಕ ಲಲಿತಕಲಾ ಅಕಾಡೆಮಿಯಿಂದ ನಡೆದ ಕಲಾ ಸ್ಪರ್ಧೆಯಲ್ಲಿ ಸಂಸ್ಕೃತಿಯ ಚಲನೆ ಎನ್ನುವ ಕಲಾ…